ದಿನದ ಸುದ್ದಿ
ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಪಕ್ಕಾ
ಸುದ್ದಿದಿನ ಡೆಸ್ಕ್: ಬರುವ ಲೋಕಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣಾಗೆ ಟಿಕೆಟ್ ಪಕ್ಕಾ ಆಗಿದೆ.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರೇ ಖುದ್ದು ಸ್ಪಷ್ಟಪಡಿಸಿದ್ದು, ಸದ್ಯದಲ್ಲೇ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.
ಹಾಸನದಲ್ಲಿ ಮಾತನಾಡಿದ ಗೌಡರು,
ನಾನೇ ನಾಲ್ಕೈದು ದಿನ ಹಾಸನದಲ್ಲಿದ್ದು ಕಾರ್ಯಕರ್ತರ ಸಭೆ ಮಾಡುತ್ತೇನೆ ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ. ಕಾಂಗ್ರೆಸ್ ನೊಂದಿಗೆ ಮೈತ್ರಿಗೆ ಅಪಾಯವಾಗದಂತೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸುತ್ತೇವೆ.
ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಾಗದ ರೀತಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತೇವೆ ಎಂದರು.
ಸರ್ಕಾರ ಅಸ್ಥಿರಗೊಳಿಸಲು ಮಾಜಿ ಸಿಎಂ ಯಡಿಯೂರಪ್ಪ ಹುನ್ನಾರ ವಿಚಾರವಾಗಿ ಮಾತನಾಡಿದ ಅವರು, ಯಾರಿಂದಲೂ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.
ಲೋಕಸಭೆ ಚುನಾವಣೆ ಬಳಿಕವೂ ಸಮ್ಮಿಶ್ರ ಸರ್ಕಾರ ಬೀಳಲ್ಲ.ರಾಜ್ಯದ ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯವರು ಎಂಪಿ ಚುನಾವಣೆಗೂ ಮುನ್ನಾ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಲೋಕಸಭಾ ಚುನಾವಣೆಗಿಂತ ಮುಂಚೆ ಕುಮಾರಸ್ವಾಮಿಯನ್ನ ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿಯವರಿಗೆ ಕುಮಾರಸ್ವಾಮಿಯೇ ಟಾರ್ಗೆಟ್.ನಾನು ಪ್ರಧಾನಿ ಅಭ್ಯರ್ಥಿಯಾಗಲ್ಲಾ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಪುನರುಚ್ಚರಿಸಿದರು.
ಮುಂದಿನ ದಿನಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದರು.