ದಿನದ ಸುದ್ದಿ

ಬಿಜೆಪಿಯಿಂದ ಬರ ಪೀಡಿತ ಕ್ಷೇತ್ರದ ಜನತೆಗೆ ಅನ್ಯಾಯವಾಗುತ್ತಿದೆ : ದೇವೇಗೌಡ ಕಿಡಿ

Published

on

ಸುದ್ದಿದಿನ ಡೆಸ್ಕ್ : ರಾಜ್ಯದ 156 ತಾಲ್ಲೂಕುಗಳು ಬರಪೀಡಿತವಾಗಿದ್ದು, ಈ ಸಂದರ್ಭದಲ್ಲಿ ಬಿಜೆಪಿಯು ತನ್ನ ಶಾಸಕರನ್ನು ಒಂದು ವಾರದಿಂದ ಉತ್ತರಭಾರತಕ್ಕೆ ಕಳುಹಿಸಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದೆ.ಸರ್ಕಾರ ಬೀಳಿಸುತ್ತೇವೆ ಎನ್ನುವ ಭ್ರಮೆಯಲ್ಲಿರುವ ಬಿಜೆಪಿಯಿಂದ ಬರ ಪೀಡಿತ ಕ್ಷೇತ್ರದ ಜನತೆಗೆ ಅನ್ಯಾಯವಾಗುತ್ತಿದೆ.ಇದಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ‌ ಎಂದು ಮಾಜಿ ಪ್ರಧಾನಿ ದೇವೇಗೌಡ ಟ್ವೀಟ್ ಮಾಡಿದ್ದಾರೆ‌.

ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಬಹುತೇಕ ತಾಲ್ಲೂಕುಗಳು ಬರ ಪೀಡಿತವಾಗಿದ್ದು ಈ ಸಂದರ್ಭದಲ್ಲಿ ಶಾಸಕರು ಕ್ಷೇತ್ರದಲ್ಲೇ ಇದ್ದು ಬರ ಪರಿಹಾರ ಕಾರ್ಯದಲ್ಲಿ ತೊಡಗುವಂತೆ ಸೂಚನೆ ನೀಡಿರುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version