ದಿನದ ಸುದ್ದಿ
ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್‌ಡಿಎ ಸಂಸದರ ಸನ್ಮಾನದಲ್ಲಿ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ನೂತನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ ಎಂದು ಹೇಳಿದರು. ಜೆಡಿಎಸ್, ಬಿಜೆಪಿಯದ್ದು, ಸಹಜ ಮೈತ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪಾಲಿಕೆ ಚುನಾವಣೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು. ಬಿಜೆಪಿ, ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.
ಬೆಂಗಳೂರು ನಗರದಲ್ಲಿ ನಡೆದ ಕೇಂದ್ರ ಸರಕಾರದ ನೂತನ ಸಚಿವರು ಹಾಗೂ NDA ಸಂಸದರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಾಯಿತು.@JanataDal_S @BJP4Karnataka ನಾಯಕರು, ಕಾರ್ಯಕರ್ತರು ದೊಡ್ಡ ಪ್ರಮಾಣದಲ್ಲಿ ಹಾಜರಿದ್ದ ಈ ಸಭೆ ನನಗೆ ಬಹಳಷ್ಟು ಸಂತಸ ಉಂಟು ಮಾಡಿತು. @BJP4India ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ… pic.twitter.com/D9BLMySVc1
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 22, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243