ದಿನದ ಸುದ್ದಿ
ನಾಟಿ ಮಾಡಿ ಅನ್ನದಾತರಿಗೆ ಹುರುಪು ತುಂಬಿದ ಎಚ್ಡಿಕೆ

ಸುದ್ದಿದಿನ ಡೆಸ್ಕ್
ಅನ್ನದಾತರಿಗೆ ಕೃಷಿಯ ಬಗ್ಗೆ ಇನ್ನಷ್ಟು ಹುರುಪು ತುಂಬುವ ಸಲುವಾಗಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಟಿ ಕಾರ್ಯ ಸಾಂಗವಾಗಿ ನೆರವೇರಿತು.
ಖುದ್ದು ಎಚ್ಡಿಕೆ ಅವರೇ ಗದ್ದೆಗಿಳಿದು ನಾಟಿ ಮಾಡುವ ಮೂಲಕ ರೈತರಲ್ಲಿ ಸ್ವಾಭಿಮಾನ ಮತ್ತು ಕೃಷಿಯ ಬಗ್ಗೆ ಆತ್ಮವಿಶ್ವಾಸ ಮೂಡಿಸಲು ನೆರವಾಯಿತು.
ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಸಿಎಂ ನಾಟಿ ಮಾಡುವ ಕಾರ್ಯ ಹನ್ನೊಂದು ಗಂಟೆಗೆ ನಿಗದಿಯಾಗಿತ್ತು. ಆದರೆ ಎರಡು ಗಂಟೆ ತಡವಾಗಿ ಬಂದ, ಸಿಎಂ ಅವರಿಗೆ ಮಳೆ ಎದುರಾಯಿತು. ಸ್ವಲ್ಪ ಹೊತ್ತು ಕಾದು ಕುಳಿತ ಸಿಎಂ ಊರಿನ ಹಿರಿಯರು, ರಾಜಕಾರಣಿಗಳ ಸಮ್ಮುಖದಲ್ಲಿ ನಾಟಿ ಮಾಡಿದರು. ಸಿಎಂ ಅವರು ಗದ್ದೆಗೆ ಇಳಿಯುತ್ತಿದ್ದಂತೆಯೇ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಿ ಕಾರ್ಯಕ್ರಮ ರದ್ದಾಗುತ್ತದೆಯೇನೋ ಎಂಬ ಆತಂಕದ ಮೋಡ ಕವಿದಿತ್ತು.
ಸಿಎಂ ಅವರ ಹಿಂದೆಯೇ ಹತ್ತಾರು ವಾಹಿನಿಗಳ ವಾಹನಗಳು, ಭದ್ರತಾ ವಾಹನಗಳು, ಅತಿಥಿಗಳ ಕಾರುಗಳು ಸಾಲಾಗಿ ಬಂದವು.
ಅವರು ಬರುವ ಮುನ್ನವೇ ಹಾಜರಾಗಿದ್ದ ಜಾನಪದ ಕಲಾವಿದರು, ನಾಟಿ ಕೂಲಿ ಕಾರ್ಮಿಕರು, ಬ್ಯಾಂಡ್ಸೆಟ್ನವರು ಪ್ರಾಕ್ಟೀಸ್ ಶುರು ಮಾಡಿಬಿಟ್ಟಿದ್ದರು.
ಅರಳಕುಪ್ಪೆ-ಸೀತಾಪುರ ಗ್ರಾಮದ ಹಳೇಗದ್ದೆ ಬಯಲು ಪ್ರದೇಶದಲ್ಲಿರುವ ಮಹದೇವಮ್ಮ, ಕುಳ್ಳಮ್ಮ, ಮಾಯಮ್ಮ ಹಾಗೂ ಹೇಮಲತಾ ಎಂಬುವವರಿಗೆ ಸೇರಿದ ಸುಮಾರು 5 ಎಕರೆ ಗದ್ದೆಯನ್ನು ನಾಟಿ ಕಾರ್ಯಕ್ಕೆ ಸಜ್ಜುಗೊಳಿಸಲಾಗಿತ್ತು.
ಭತ್ತದ ನಾಟಿ ಮಾಡುವ ಮೂಲಕ ರೈತರಿಗೆ ಆತ್ಮಸ್ಥ್ತ್ರೈರ್ಯ ಬೆಳೆಸಲು ಮುಂದಾಗಿದ್ದ ಸಿಎಂ ಅವರಿಗೆ ಭಾರಿ ಭದ್ರತೆ ನೀಡಲಾಗಿತ್ತು ಎಂದು ಸಚಿವ ಸಿಎಸ್ಪುಟ್ಟರಾಜು ತಿಳಿಸಿದರು.
ದಿನದ ಸುದ್ದಿ
ಈ ಶೈಕ್ಷಣಿಕ ವರ್ಷದಿಂದ ಹೊಸ ಕೇಂದ್ರೀಯ ವಿದ್ಯಾಲಯ ಆರಂಭಕ್ಕೆ ಕ್ರಮ : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ

ಸುದ್ದಿದಿನ,ಶಿವಮೊಗ್ಗ: ಶಿವಮೊಗ್ಗದಲ್ಲಿ ಹೊಸದಾಗಿ ಇನ್ನೊಂದು ಕೇಂದ್ರೀಯ ವಿದ್ಯಾಲಯವನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.
ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ನಗರಕ್ಕೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ಮನವಿಯನ್ನು ಮಾಡಲಾಗಿತ್ತು. ಇದಕ್ಕೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಹೊಸ ಕೇಂದ್ರೀಯ ವಿದ್ಯಾಲಯ ಆರಂಭಿಸುವ ಕುರಿತು ಪರಿಶೀಲನೆಗಾಗಿ ಹಿರಿಯ ಅಧಿಕಾರಿಗಳು ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ತಾತ್ಕಾಲಿಕವಾಗಿ ನಗರದ ರಾಗಿಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತರಗತಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ತ್ಯಾವರೆ ಚಟ್ನಳ್ಳಿಯಲ್ಲಿ 5ಎಕ್ರೆ ಸ್ಥಳವನ್ನು ಗುರುತಿಸಲಾಗಿದ್ದು, ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಮುಂದಿನ ವರ್ಷದಿಂದ ಇಲ್ಲಿ ವಿದ್ಯಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಡಿಆರ್ಡಿಒ ಲ್ಯಾಬ್ ಆರಂಭಿಸುವ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ, ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ಘೋಷಣೆಯನ್ನು ಮಾಡಿದ್ದಾರೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹುಬ್ಬಳ್ಳಿ- ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ನಿತೇಶ ಪಾಟೀಲ

ರಸ್ತೆ ಅಪಘಾತಗಳನ್ನು ತಪ್ಪಿಸಲು ಇಲಾಖೆಗಳು ಸಮನ್ವಯತೆಯಿಂದ ಕಾರ್ಯಮಾಡಬೇಕು : ಜಿಲ್ಲಾಧಿಕಾರಿ ನಿತೇಶ ಪಾಟೀಲ
ಸುದ್ದಿದಿನ,ಧಾರವಾಡ : ಕಳೆದ ಸಾಲಿಗೆ ಹೋಲಿಸಿದರೆ ಧಾರವಾಡ ಜಿಲ್ಲೆಯಲ್ಲಿ 2020 ನೇ ಸಾಲಿಗೆ ಕಡಿಮೆ ಪ್ರಮಾಣದಲ್ಲಿ ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು, ಸಾರಿಗೆ, ಪೊಲೀಸ್, ಲೊಕೋಪಯೋಗಿ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿದರೆ ರಸ್ತೆ ಅಪಘಾತಗಳು ಸಂಭವಿಸದಂತೆ ಸಂಪೂರ್ಣವಾಗಿ ನಿಯಂತ್ರಿಸಬಹುದು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಭವನದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಇರುವ ರಾಷ್ಟ್ರೀಯ ಹೆದ್ದಾರಿ 4 ರಲ್ಲಿನ 30 ಕಿ.ಮೀ ರಸ್ತೆಯಲ್ಲಿನ ಅಪಘಾತಗಳನ್ನು ತಪ್ಪಿಸಲು ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಪ್ರತಿ ಕಿ.ಮೀ.ಗೆ 60 ವೇಗದ ಮಿತಿ ಇದ್ದರೂ ಬಸ್, ಟ್ರಕ್, ಮಿನಿಬಸ್, ಕಾರ್ ಮುಂತಾದ ವಾಹನಗಳ ಚಾಲಕರು ನಿಯಮ ಪಾಲಿಸದೇ ವೇಗವಾಗಿ ವಾಹನ ಚಾಲನೆ, ವಾಹನಗಳ ಓವರ್ಟೆಕ್ ಮಾಡುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಅಪಘಾತ, ಸಾವು-ನೋವು ಆಗುತ್ತಿವೆ.
ರಸ್ತೆ ನಿರ್ವಾಹಕ ಗುತ್ತಿಗೆದಾರ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಬೈಪಾಸ್ನ 30 ಕಿ.ಮೀ ರಸ್ತೆ ಪರಿಶೀಲಿಸಿ ಮುಂದಿನ 72 ಗಂಟೆಗಳಲ್ಲಿ ಅಪಾಯಕಾರಿ ಸ್ಥಳ, ಸೇತುವೆ ತಿರುವು ಗುರುತಿಸಿ ಅಲ್ಲಿ ಕನಿಷ್ಠ 20 ಎಚ್ಚರಿಕೆ ಫಲಕ, ವೇಗದ ಮೀತಿ ಸೂಚಿಸುವ ಮತ್ತು ಸುರಕ್ಷತಾ ನಿಯಮಗಳ ಫಲಕಗಳನ್ನು ಅಳವಡಿಸಿ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಹುಬ್ಬಳ್ಳಿ-ಧಾರವಾಡದ 30 ಕಿ.ಮೀ. ಬೈಪಾಸ್ ರಸ್ತೆಯ ಮಧ್ಯದಲ್ಲಿ ರಬ್ಬರ ಮತ್ತು ಫೈಬರ್ ಸಾಧನ ಬಳಸಿ, ರಸ್ತೆ ವಿಭಜಕಗಳನ್ನು ನಿರ್ಮಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದರು. ರಸ್ತೆ ಅಗಲೀಕರಣ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದು, ಅನುಮತಿ ಬಂದ ತಕ್ಷಣ ಈ ಕುರಿತು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಫುಟ್ಪಾತ್ ಅತಿಕ್ರಮಿಸಿ ಅನೇಕ ರೀತಿಯ ಅಂಗಡಿ, ವ್ಯಾಪಾರಗಳು ಅನಧಿಕೃತವಾಗಿ ನಡೆಯುತ್ತಿವೆ. ಟೊಲ್ ಪಕ್ಕದಲ್ಲಿಯೇ ಗುತ್ತಿಗೆದಾರರಿಗೆ ನೀಡಿರುವ ಜಾಗದಲ್ಲಿ ನಿಯಮ ಉಲ್ಲಂಘಿಸಿ ಅಂಗಡಿ ನಿರ್ಮಾಣ, ವಾಹನ ನಿಲುಗಡೆಗೆ ಸ್ಥಳಾವಕಾಶ ನೀಡಲಾಗಿದೆ. ಈ ಕುರಿತು ರಸ್ತೆ ನಿರ್ವಾಹಕ ಗುತ್ತಿಗೆದಾರ ಸಂಸ್ಥೆಗೆ ನೋಟೀಸ್ ನೀಡಿ ಮತ್ತು ಸೂಕ್ತ ಬಂದೋಬಸ್ತ್ನಲ್ಲಿ ಎಲ್ಲ ಅತಿಕ್ರಮಣಗಳನ್ನು ಶೀಘ್ರದಲ್ಲಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದರು.
ಇತ್ತೀಚಿಗೆ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದವರ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಮತ್ತು ಟಿಪ್ಪರ್ ವಾಹನದ ಚಾಲಕನ ಮೇಲೆ ಅಜಾಗರೂಕತೆಯ ವಾಹನ ಚಾಲನೆ ಸೇರಿದಂತೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಬಿ.ಆರ್.ಟಿ.ಎಸ್. ರಸ್ತೆಯಲ್ಲಿ ಖಾಸಗಿ ಹಾಗೂ ಕೆಲವು ಸರಕಾರಿ ಇಲಾಖೆ ವಾಹನಗಳು ಸಂಚರಿಸುತ್ತಿರುವುದು ಕಂಡು ಬರುತ್ತಿದೆ. ನಗರ ಪೊಲೀಸ್ ಆಯುಕ್ತರು ಬಿಆರ್ಟಿಎಸ್ ರಸ್ತೆಯಲ್ಲಿ ಬಿಆರ್ಟಿಎಸ್ ಬಸ್ಗಳನ್ನು ಹೊರತುಪಡಿಸಿ ಯಾವ ತುರ್ತು ವಾಹನಗಳು ಸಂಚರಿಸಬೇಕೆಂದು ನಿರ್ಧರಿಸಿ, ಅಧಿಸೂಚನೆ ಹೊರಡಿಸಬೇಕು. ಮತ್ತು ಅಧಿಸೂಚಿತವಲ್ಲದ ವಾಹನಗಳು ಸಂಚರಿಸಿದರೆ ತಕ್ಷಣ ದಂಡ ವಿಧಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ರಾಜ್ಯ ಕಾನೂನು, ಸುವ್ಯವಸ್ಥೆ ಹಾಗೂ ಸಂಚಾರಿ ವಿಭಾಗದ ಅಪರ ಪೊಲೀಸ್ ಮಹಾನಿರ್ದೇಶಕ ಪ್ರತಾಪರೆಡ್ಡಿ ಅವರು ಮಾತನಾಡಿ, ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ವಾಹನ ಹಾಗೂ ವಾಹನ ಚಾಲಕರಿಂದ ಕಾನೂನು ಹಾಗೂ ನಿಯಮಗಳ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಅಪಾಯಕಾರಿ ರಸ್ತೆ, ತಿರುವು, ಸೇತುವೆಗಳ ಸಮೀಪದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, ಎಚ್ಚರಿಕೆ ಸಂದೇಶಗಳನ್ನು ಚಾಲಕರಿಗೆ ಎದ್ದು ಕಾಣುವಂತೆ ಅಳವಡಿಸಬೇಕು ಎಂದು ಹೇಳಿದರು.
ಉತ್ತರವಲಯದ ಪೊಲೀಸ್ ಮಹಾನಿರೀಕ್ಷಕ ರಾಘವೇಂದ್ರ ಸುಹಾಸ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ, ತಿರುವು, ಸೇತುವೆಗಳ, ಸುಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕು. ರಸ್ತೆ ಸುರಕ್ಷತೆ ಹಾಗೂ ಎಚ್ಚರಿಕೆ ಸಂದೇಶದ ಫಲಕಗಳ ಅಳವಡಿಕೆ, ನಿರ್ವಹಣೆ ಕುರಿತು ಮೇಲುಸ್ತುವಾರಿ ಮಾಡಿ ನಿಗಾವಹಿಸಬೇಕು. ಗುತ್ತಿಗೆದಾರನ ನಿರ್ವಹಣೆ ಕುರಿತು ನಿಯಮಗಳ ಪಾಲನೆ ಆಗಿರುವುದನ್ನು ಪರಿಶೀಲಿಸಬೇಕೆಂದು ತಿಳಿಸಿದರು.
ನಗರ ಪೊಲೀಸ್ ಆಯುಕ್ತ ಲಾಬೂರಾಮ ಅವರು ಮಾತನಾಡಿ, ರಸ್ತೆ ಸುರಕ್ಷತಾ ಹಾಗೂ ಸಂಚಾರಿ ನಿಯಮಗಳ ಪಾಲನೆಗೆ ಆಧ್ಯತೆ ನೀಡಬೇಕು. ಹೆದ್ದಾರಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಭಾಗದ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಬೈಪಾಸ್, ಬಿಆರ್ಟಿಎಸ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳನ್ನು ಪರಿಶೀಲಿಸಿ, ಸೂಕ್ತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಮಾತನಾಡಿ, ವಾಹನಗಳ ಚಾಲಕರು ರಾತ್ರಿ ಸಂಚರಿಸುವಾಗ ಪ್ರಖರ ಬೆಳಕಿನ ಹೆಡ್ಲೈಟ್ ಬಳಸುತ್ತಾರೆ. ಇದರಿಂದಾಗಿ ಎದುರಿಗೆ ಬರುವ ವಾಹನಗಳಿಗೆ ದಾರಿ ಕಾಣದಾಗುತ್ತದೆ. ತಿರುವುಗಳಲ್ಲಿ ಮತ್ತು ನಿರ್ಧಿಷ್ಟಪಡಿಸಿದ ವೇಗದ ಮಿತಿ ಪಾಲಿಸದೇ ವೇಗವಾಗಿ ವಾಹನ ಚಲಾಯಿಸುತ್ತಾರೆ. ಸಾರಿಗೆ ಇಲಾಖೆ ಅಧಿಕಾರಿಗಳು ವಾಹನಗಳ ನೋಂದಣಿ ಹಾಗೂ ಫಿಟ್ನೆಸ್ ಸರ್ಟಿಫಿಕೇಟ್ ಕೊಡುವಾಗ ಇವುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಡಾ.ಬಿ. ಸುಶೀಲ ಅವರು ರಸ್ತೆ ಸುರಕ್ಷತೆ, ಅಪಘಾತಗಳ ನಿಯಂತ್ರಣ ಕುರಿತು ಸಭೆಯಲ್ಲಿ ಮಾತನಾಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯ ನಾಲ್ವತ್ತವಾಡಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಡಿವೈಎಸ್ಪಿಗಳಾದ ಎಂ.ಬಿ. ಸಂಕದ, ರಾಮನಗೌಡ ಹಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಬಿ. ಚೌಡನ್ನವರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ಆರ್.ಕೆ. ಮಠದ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಲ್. ಹಂಚಾಟೆ, ನೈಸ್ ಸಂಸ್ಥೆಯ ಪ್ರತಿನಿಧಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯರು, ರಸ್ತೆ ನಿರ್ವಹಣಾ ಗುತ್ತಿಗೆದಾರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಹಾಜನ್ ವರದಿಯೇ ಅಂತಿಮ ; ಉದ್ಭವ್ ಠಾಕ್ರೆ ಉದ್ಧಟ ನುಡಿಗೆ ಯಡಿಯೂರಪ್ಪ ತಿರುಗೇಟು

ಸುದ್ದಿದಿನ, ಬೆಂಗಳೂರು : ‘ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು,ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಎಂದಿದ್ದಾರೆ.
ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ’. ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ಲೈಫ್ ಸ್ಟೈಲ್6 days ago
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ
-
ದಿನದ ಸುದ್ದಿ6 days ago
ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!
-
ದಿನದ ಸುದ್ದಿ5 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ಸಿನಿ ಸುದ್ದಿ6 days ago
ಬಾಂಬೆ ಹೀರೋಹಿನ್ ಗಳು ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ ಅಂದವರಿಗೆ ಹೀಗಂದ್ರು ನಟಿ ಕೃತ್ತಿಕಾ ರವೀಂದ್ರ..!
-
ದಿನದ ಸುದ್ದಿ5 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ದಿನದ ಸುದ್ದಿ5 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ದಿನದ ಸುದ್ದಿ5 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಲೈಫ್ ಸ್ಟೈಲ್5 days ago
ಪಕ್ಷಿ ಪರಿಚಯ | ಬೆಳ್ಗಣ್ಣ