ದಿನದ ಸುದ್ದಿ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರು ಪೇರು : ಮಠಕ್ಕೆ ಸಿಎಂ ಭೇಟಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದರು. ಮಠದ ಕಿರಿಯ ಸ್ವಾಮೀಜಿ ಸಿದ್ದಲಿಂಗ ಸ್ವಾಮಿಜಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಶ್ರೀಗಳ ಆರೋಗ್ಯದ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು.

ಶ್ರೀಗಳ ಆರೋಗ್ಯ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸುತ್ತಿರುವ ಪರಿಣಾಮ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವರು. ಇಂದು ನಿಗದಿಯಾಗಿದ್ದ ಹಿರೇಕೆರೂರು ಭೇಟಿ ಕಾರ್ಯಕ್ರಮ ರದ್ದುಪಡಿಸಲಾಗಿದ್ದು, ಅವರು ಈಗ ಶ್ರೀಗಳ ದರ್ಶನಕ್ಕಾಗಿ ತುಮಕೂರಿಗೆ ತೆರಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version