ದಿನದ ಸುದ್ದಿ
ಹೆಚ್.ಡಿ.ಕೆ ಮನೆಗೆ ಬಾಂಬ್ : ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ಬಂಧನ..!
ಸುದ್ದಿದಿನ ಡೆಸ್ಕ್ : ಸಿಎಂ ಹೆಚ್ ಡಿಕೆ ಮನೆಗೆ ಬಾಂಬ್ ಇಟ್ಟಿರುವುದಾಗಿ ಹುಸಿ ಬಾಂಬ್ ಕರೆ ಮಾಡಿದ್ದ ಅರೋಪಿ ಕೊಪ್ಪಳ ಮೂಲದ ಮನ್ಸೂರ್ ನನ್ನು ಬಂಧಿಸಲಾಗಿಸೆ.
ಭಾನುವಾರ ರಾತ್ರಿ ಕರೆಮಾಡಿ ಸಿ ಎಂ ಕುಮಾರಸ್ವಾಮಿ ಮನೆಗೆ ಬಾಂಬ್ ಇಟ್ಟಿದ್ದೇನೆ ಎಂದಿದ್ದ ಈತ ಕರೆಯಲ್ಲಿ ನನ್ನ ಹೆಸರು ಗೋಪಾಲ್ ಎಂದು ಹೇಳಿದ್ದ. ಕೂಡಲೇ ಎ ಎಸ್ ಪಿ ದಳ, ಶ್ವಾನದಳ ಮತ್ತು ಪೊಲೀಸ್ ಪಡೆಯಿಂದ ತಪಾಸಣೆ ನಡೆಸಿ ತಡರಾತ್ರಿ ಜೆಪಿ ನಗರದಲ್ಲಿರುವ ಸಿಎಂ ಮನೆ ಸುತ್ತ ಪರಿಶೀಲಿಸಿತ್ತು ಪೊಲೀಸ್ ಪಡೆ. ಆದರೆ ಪರಿಶೀಲನೆ ವೇಳೆ ಯಾವುದೇ ಬಾಂಬ್ ಹಾಗೂ ಸ್ಪೋಟಕ ವಸ್ತುಗಳು ಪತ್ತೆಯಾಗಿರಲಿಲ್ಲ.
ನಂತರ ಸುಳ್ಳು ಕರೆ ಬಂದಿದೆ ಎಂದು ನಿಟ್ಟುಸಿರು ಬಿಟ್ಟ ಪೊಲೀಸ್ ಪಡೆಯು ಆರೋಪಿಯ ವಿರುದ್ದ ಕಲಂ 182, 505/1b, 507 ಐಪಿಸಿ ಪ್ರಕಾರ ದೂರು ದಾಖಲಾಗಿತ್ತು. ದೂರು ದಾಖಲಿಸಿ ಆರೋಪಿಯನ್ನ ಬಂಧಿಸಿದ್ದಾರೆ ಜೆಪಿ ನಗರ ಪೊಲೀಸರು. ಪೊಲೀಸರ ದಾರಿ ತಪ್ಪಿಸಲು ಹೆಸರನ್ನ ಬದಲಾಯಿಸಿ ಗೋಪಾಲ್ ಎಂದಿದ್ದ ಮನ್ಸೂರ್. ಸದ್ಯ ವಿಚಾರಣೆಗೆ ಒಳಪಡಿಸಿದ್ದಾರೆ ಪೊಲೀಸರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅಧಿಸೂಚನೆ ರದ್ದು
ಸುದ್ದಿದಿನ,ಚನ್ನಗಿರಿ:ತಾಲ್ಲೂಕಿನಲ್ಲಿ ಖಾಲಿ ಇದ್ದ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 52 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ರದ್ದುಪಡಿಸಲಾಗಿದೆ. ಮುಂದೆ ನಡೆಯುವ ನೇಮಕಾತಿ ಬಗ್ಗೆ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ರಾಜಾನಾಯ್ಕ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ
ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್‍ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ
ಸುದ್ದಿದಿನಡೆಸ್ಕ್:ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34 ಸಾವಿರದ 863 ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ6 days ago
ಬಾಪೂಜಿ ಪ್ರಬಂಧ ಸ್ಪರ್ಧೆ ; ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ
-
ದಿನದ ಸುದ್ದಿ4 days ago
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ6 days ago
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ
-
ದಿನದ ಸುದ್ದಿ7 days ago
KEA | ನಾಳೆ ಪಿಎಸ್ಐ ಪರೀಕ್ಷೆ, ದಾವಣಗೆರೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಕಟ್ಟೆಚ್ಚರ ; ಇಲ್ಲಿದೆ ಸಂಪೂರ್ಣ ಮಾಹಿತಿ, ಮಿಸ್ ಮಾಡ್ದೆ ಓದಿ
-
ದಿನದ ಸುದ್ದಿ3 days ago
ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ
-
ದಿನದ ಸುದ್ದಿ2 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ