ರಾಜಕೀಯ

ರೈತರಿಗೆ ಕಿರುಕುಳ ನೀಡದಂತೆ ಬ್ಯಾಂಕ್‌ಗಳಿಗೆ ಎಚ್.ಡಿ.ಕೆ ಸೂಚನೆ; ಶೀಘ್ರ ಸಾಲಮನ್ನಾ ಹಣ ಪಾವತಿ

Published

on

ಸುದ್ದಿದಿನ ಡೆಸ್ಕ್: ಕೆಲವು ಬ್ಯಾಂಕ್‍ನವರು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಬ್ಯಾಂಕ್‍ನವರು ರೈತರಿಗೆ ಹಣ ನೀಡುವಂತೆ ಕಿರುಕುಳ ನೀಡಬಾರದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು.

ಸರ್ಕಾರದಿಂದ ಘೋಷಣೆ ಮಾಡಿರುವ ರಾಷ್ಟ್ರೀಕೃತ ಬ್ಯಾಂಕ್‍ಗಳ 35 ಸಾವಿರ ಕೋಟಿ ಸಾಲವನ್ನು 4 ವರ್ಷಗಳಲ್ಲಿ ಕಂತುಗಳ ಮೂಲಕ ಪೂರೈಸುವ ಬಗ್ಗೆ ಚರ್ಚೆ ಮಾಡಲಾಗಿತ್ತು. ಆದರೆ, ಬರುವ ಜುಲೈನೊಳಗೆ ಎಲ್ಲ ಹಣವನ್ನು ಬ್ಯಾಂಕ್‍ಗಳಿಗೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಬ್ಯಾಂಕ್‍ನವರು ಸರ್ಕಾರಕ್ಕೆ ಸಹಕಾರ ನೀಡಬೇಕು. ರೈತರಿಗೆ ಹಣ ನೀಡುವಂತೆ ಕಿರುಕುಳ ನೀಡಬಾರದು ಎಂದು ತಿಳಿಸಿದರು.

ಸರ್ಕಾರ ರೈತರ 45 ಸಾವಿರ ಕೋಟಿ ರೂ. ಸಾಲಮನ್ನಾ ಘೋಷಣೆ ಮಾಡಿದೆ. ಸಾಲಮನ್ನಾ ಮಾಡಿದ ಹಣಕ್ಕೂ ಇಲಾಖೆಗಳ ಕಾರ್ಯಕ್ರಮಗಳಿಗೆ ಮೀಸಲಿರಿಸಿರುವ ಹಣಕ್ಕೂ ಯಾವುದೇ ಸಂಬಂಧವಿಲ್ಲ. ಸಾಲಮನ್ನಾದಿಂದ ಸರ್ಕಾರದ ಯಾವುದೇ ಯೋಜನೆಗಳಿಗೆ ತೊಂದರೆಯಾಗಿಲ್ಲ. ಸರ್ಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version