ರಾಜಕೀಯ
ರೈತರಿಗೆ ಗುಡ್ ನ್ಯೂಸ್ ನೀಡಲು ಎಚ್.ಡಿ.ಕೆ ಸಜ್ಜು..!
ಸುದ್ದಿದಿನ ಡೆಸ್ಕ್ : ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಎಲ್ಲಿಲ್ಲದಂತೆ ಕಾಡುತ್ತಿರುವುದು ರೈತರ ಸಾಲಾಮನ್ನಾದ ವಿಚಾರ.
ಈ ವಿಚಾರವಾಗಿ ಎಚ್.ಡಿ.ಕೆ ಹಿರಿಯರ ಸಲಹೆ ಮೇರೆಯಂತೆ ಕಾಂಗ್ರೆಸ್ ನೊಂದಿಗೆ ಚರ್ಚಿಸಿ ಒಂದು ಅಭಿಪ್ರಾಯಕ್ಕೆ ಬಂದಂತಾಗಿದೆ. ಈ ನಿಟ್ಟಿನಲ್ಲಿ ಎಚ್.ಡಿ.ಕೆ ಮಂಡಿಸಲಿರುವ ಬಜೆಟ್ ನಲ್ಲಿ ರೈತರಸಾಲ ಮನ್ನಾದ ಬಗ್ಗೆ ಘೋಷಣೆ ಮಾಡಲಿದ್ದಾರೆ. ಅಂತೆಯೇ ಎರಡು ಹಂತದಲ್ಲಿ ರೈತರ ಸಾಲ ಮನ್ನಾ ಮಾಡುವ ಚಿಂತನೆ ನಡೆಸಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ.
ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಬಹುಮತ ಸಾಬೀತಾಗಿ ನಾವು ಅಧಿಕಾರಕ್ಕೆ ಬಂದ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುದು ಎಂಬ ಘೋಷಣೆ ಮಾಡುವುದರ ಮೂಲಕ ರೈತರಿಗೆ ಭರವಸೆ ನೀಡಿತ್ತು. ಆದರೆ ಜೆಡಿಎಸ್ ಗೆ ಸಂಪೂರ್ಣ ಬಹುಮತ ಸಂಪೂರ್ಣ ಸಿಗದ ಕಾರಣ ಕಿಂಗ್ ಮೇಕರ್ ಅನ್ನಿಸಿಕೊಂಡು ಕಾಂಗ್ರೆಸ್ ಜತೆ ಸೇರಿ ಮೈತ್ರಿ ಸರ್ಕಾರ ರಚನೆಯಾಯಿತು.
ಈ ಸಂದರ್ಭ ಎಚ್.ಡಿ.ಕೆ ಗೆ ಸ್ವತಂತ್ರವಾದ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗದೆ ವಿರೋಧಪಕ್ಷ ಬಿಜೆಪಿಯ ಪ್ರಮುಖ ಟೀಕಾಸ್ತ್ರವಾಗಿ ಇದನ್ನು ಬಳಸಿಕೊಂಡಿದೆ. ಬಿಜೆಪಿ ಹಾಗೂ ರಾಜ್ಯದ ರೈತರಿಗೆ ಏನಾದರೊಂದು ಉತ್ತರಕೊಡಲೇ ಬೇಕಾದ ಪರಿಸ್ಥಿತಿಯಲ್ಲಿ ಮೈತ್ರಿ ಸರ್ಕಾರ ಚಿಂತಿಸಿ ಬಜೆಟ್ ನಲ್ಲಿ ಸಾಲಮನ್ನಾದ ಬಗ್ಗೆ ತನ್ನ ನಿಲುವನ್ನು ಪ್ರಸ್ತಾಪಿಸಲು ಸಜ್ಜಾಗಿದೆ ಎಂಬ ಮಾಹಿತಿ ಮಾಧ್ಯಮಗಳಿಗೆ ದೊರಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.
ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ4 days agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ2 days agoಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
-
ದಿನದ ಸುದ್ದಿ4 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ4 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

