Connect with us

ದಿನದ ಸುದ್ದಿ

ವಿಂಟೇಜ್ ಕಾರಿನಲ್ಲಿ ಸವಾರಿ ಮಾಡಿದ ಎಚ್.ಡಿ.ಕೆ

Published

on

ಸುದ್ದಿದಿನ, ಮಂಡ್ಯ: ಶ್ರೀರಂಗಪಟ್ಟಣ ದಸರಾದಲ್ಲಿ ಜನತೆಗೆ ಅಚ್ಚರಿ ಕಾದಿತ್ತು. ಸಿಎಂ ಕುಮಾರಸ್ವಾಮಿ ಸೇರಿದಂತೆ ಸಚಿವರುಗಳು ಸುಮಾರು ಒಂದುವರೆ ಕಿಲೋ ಮೀಟರ್‌ಗಳ ದೂರ ವಿಂಟೇಜ್ ಕಾರಿನಲ್ಲಿ ರ‌್ಯಾಲಿ ಹೊರಟರು‌.ಶ್ರೀರಂಗಪಟ್ಟಣದ ಕಿರಂಗೂರು ಬನ್ನಿ ಮಂಟಪದಿಂದ ಶ್ರೀರಂಗಪಟ್ಟಣದ ಬಸ್ ನಿಲ್ದಾಣದ ವರೆಗೂ ರ‌್ಯಾಲಿ ಮಾಡಿ ಜನತೆಗೆ ಖುಷಿ ನೀಡಿದರು‌.

ಸಿಎಂ ಎಚ್.ಡಿ.ಕುಮಾರಸ್ವಾಮಿ ಗೆ ಸಚಿವರಾದ ಸಿ.ಎಸ್‌.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಬಂಡೆಪ್ಪ ಕಾಶೆಂಪುರ್, ಸಾರಾ ಮಹೇಶ್, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ ಸೇರಿದಂತೆ ಹಲವರು ಸಾಥ್ ನೀಡಿದರು. ದಾರಿಯುದ್ದಕ್ಕೂ ಜನತೆ ಜಯ ಘೋಷಣೆ ಕೂಗಿ ಸಿಎಂ ಗೆ ಶುಭ ಹಾರೈಸಿದರು.‌

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ನಿಯಮಬಾಹಿರವಾಗಿ ಖರೀದಿ ಪ್ರಕ್ರಿಯೆಗೆ ಮುಂದಾಗಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿರುವ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ ಇವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇವರಿಂದ ಅರೇ ಸರ್ಕಾರಿ ಖಾತೆಯ ಅನುದಾನದ ಬಳಕೆಯ ಅಧಿಕೃತ ದಾಖಲೆಗಳನ್ನು ಪಡೆದು, ಪರಿಶೀಲನೆ ಮಾಡಿದಾಗ ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ಮಾಡಿರುವುದು ಮಾತ್ರವಲ್ಲದೆ, ವೆಂಕಟೇಶ್ ಟ್ರೇರ‍್ಸ್, ಕುಕನೂರು ಮತ್ತು ವೆಂಕಟೇಶ್ ಟ್ರೇರ‍್ಸ್, ತಳಕಲ್ಲ ಎಂಬ ಒಂದೇ ಹೆಸರಿನ ಏಜೆನ್ಸಿಯ ಮೂಲಕ ಎರಡು ಸ್ಥಳಗಳ ಹೆಸರಿನಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳನ್ನು ಸೃಷ್ಟಿಸಿಕೊಂಡು ಲಕ್ಷಾಂತರ ರೂಪಾಯಿ ಅನುದಾನವನ್ನು ವಂಚನೆ ಮಾಡಿರುವುದು ಕಂಡುಬದಿರುತ್ತದೆ.

ಪ್ರಾಂಶುಪಾಲರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. 3 ತಿಂಗಳು ಕಳೆದರೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಯಾವುದೇ ಪ್ರತ್ಯುತ್ತರ ನೀಡದ ಕಾರಣ, ನಕಲಿ ಜಿ.ಎಸ್.ಟಿ ಮೂಲಕ ಹಣ ವಂಚಿಸಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಗೆ ದೂರು ನೀಡಿ, ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.

ತರಬೇತಿಯು ಫೆಬ್ರವರಿ 16 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿಯನ್ನು ಸಲ್ಲಿಸಬಹುದು. 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9740982585, 9380162042, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 days ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

ದಿನದ ಸುದ್ದಿ4 days ago

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ...

ದಿನದ ಸುದ್ದಿ4 days ago

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸುವ ಕೆಎಎಸ್...

ದಿನದ ಸುದ್ದಿ7 days ago

ಪ್ರೊ.ಪೂರ್ಣಾನಂದ, ಎ.ನಾರಾಯಣ, ಸತೀಶ್ ಆಚಾರ್ಯ ಸೇರಿದಂತೆ ಹಲವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸುದ್ದಿದಿನಡೆಸ್ಕ್:ಪ್ರತಿ ವರ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ಪ್ರಶಸ್ತಿಗಳಿಗೆ ಪ್ರಾಧ್ಯಾಪಕ ಪೂರ್ಣಾನಂದ, ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ, ಪತ್ರಕರ್ತ ಸೋಮಶೇಖರ್ ಪಡುಕೆರೆ ಹಾಗೂ ಚಿಂತಕ, ಬರಹಗಾರ ಎ ನಾರಾಯಣ್...

ದಿನದ ಸುದ್ದಿ7 days ago

ಇದೇ 11 ರಂದು ಜಿಎಂ ವಿಶ್ವವಿದ್ಯಾಲಯದಲ್ಲಿ ಪ್ರಥಮ ಘಟಿಕೋತ್ಸವ : ಕುಲಪತಿ ಡಾ. ಎಸ್.ಆರ್. ಶಂಕಪಾಲ್

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾಲಯವು ಪ್ರಥಮ ಘಟಿಕೋತ್ಸವವನ್ನು ಆಯೋಜಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಖಲಿಸಲಿದೆ. ಈ ಘಟಿಕೋತ್ಸವವು ವಿಶ್ವವಿದ್ಯಾಲಯದ ಮೊದಲ ಪದವಿ ಬ್ಯಾಚ್‌ನ ಯಶಸ್ವಿ ಶೈಕ್ಷಣಿಕ ಪಯಣವನ್ನು ಸಂಭ್ರಮದಿಂದ...

ದಿನದ ಸುದ್ದಿ7 days ago

ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ...

ದಿನದ ಸುದ್ದಿ1 week ago

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು...

ದಿನದ ಸುದ್ದಿ1 week ago

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು...

ಅಂತರಂಗ1 week ago

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ...

Trending