/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಈ ತಿಂಗಳು 9455 ಕೋಟಿ ರೂ ರೈತರ ಸಾಲ ಮನ್ನಾ : ಎಚ್.ಡಿ.ಕೆ

Published

on

ಸುದ್ದಿದಿನ,ಮಂಡ್ಯ : ಸಾಲಮನ್ನಾ ಬಗ್ಗೆ ರೈತರಿಗೆ ಆತಂಕ ಬೇಡ.45000 ಕೋಟಿ ಸಾಲ ಮನ್ನಾಕ್ಕೆ ಸಿದ್ಧತೆ ನಡೆದಿದ್ದು, ಈ ತಿಂಗಳು ಸಹಕಾರಿಬ್ಯಾಂಕ್ ಮಾಹಿತಿ ಆಧರಿಸಿ ರೂ.9455 ಕೋಟಿ ಸಾಲಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದರು. ಮಂಡ್ಯ ತಾಲೂಕಿನ ಶಿವಳ್ಳಿಯಲ್ಲಿ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದರು.

ಮಂಡ್ಯ ಜಿಲ್ಲೆಯ ರೈತರ ರೂ 515 ಕೋಟಿ ಸಾಲ ಈ ವರ್ಷವೇ ಮನ್ನಾ ಆಗಲಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲವೂ ಮನ್ನಾ ಮಾಡಲಾಗುವುದು. ರೈತರು ಮುಂದೆ ಸಾಲ ಮಾಡದೆ ಇಸ್ರೇಲ್ ಮಾದರಿ ಕೃಷಿ ಪದ್ದತಿ ಅಳವಡಿಕೆ ಮಾಡಬೇಕು. ಯಾವುದೇ ಅಪಪ್ರಚಾರಕ್ಕೆ ರೈತರು ಕಿವಿಗೊಡಬಾರದು.
ಮಂಡ್ಯ ಜಿಲ್ಲೆಯವರ ಪ್ರೀತಿ ನನ್ನ ಹೃದಯದಲ್ಲಿದೆ ಎಂದರು.

ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಂಡ್ಯದ ವಿಸಿ ಫಾರಂನಲ್ಲಿ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಿದರು.ಸಚಿವರಾದಸಿ.ಎಸ್.ಪುಟ್ಟರಾಜು,ಡಿಸಿ.ತಮ್ಮಣ್ಣ, ಸಂಸದ ಶಿವರಾಮೇಗೌಡ, ಕೆಆರ್.ಪೇಟೆ ಶಾಸಕರಾದ ನಾರಾಯಣಸ್ವಾಮಿ, ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿ ಗೌಡ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version