ರಾಜಕೀಯ
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿಲ್ಲ : ಬಿ.ಎಸ್.ವೈಗೆ ಎಚ್.ಡಿ.ಕೆ ತಿರುಗೇಟು
ಸುದ್ದಿದಿನ,ಉಡುಪಿ : ಕರಾವಳಿ ಜನ ಹಿಂದುತ್ವ ಕ್ಕೆ ಬಲಿಯಾಗುತ್ತಿದ್ದು ಹಿಂದೂ- ಮುಸಲ್ಮಾನರು ಸಂಘರ್ಷಕ್ಕೆ ಒಳಗಾಗಬೇಡಿ. ನಾವು ಬಿಜೆಪಿಗಿಂತ ಒಳ್ಳೆಯ ಹಿಂದುತ್ವ ಪಾಲಿಸುತ್ತೇವೆ. ಹಿಂದುತ್ವದಲ್ಲಿ ನಾವು ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ನಾವಿದ್ದೇವೆ. ಬಿಜೆಪಿ ಭಾವನಾತ್ಮಕ ವಿಚಾರ ಜನರ ಮುಂದಿಡುತ್ತ ಚುನಾವಣೆ ನಡೆಸುತ್ತದೆ. ಬಿಜೆಪಿ ನಾಯಕರು ಸರಕಾರ ಬೀಳುವ ಕನಸಲ್ಲಿದ್ದಾರೆ, ನಮಗೆ ದೈವ ಪ್ರೇರೇಪಣೆ ಇದೆ ಎಂದು ಉಡುಪಿಯ ತ್ರಾಸಿಯಲ್ಲಿ ಕು ಸಿಎಂ ಕುಮಾರಸ್ವಾಮಿ ಹೇಳಿದರು.
ನಾನು ಎಷ್ಟು ದಿನ ಅಧಿಕಾರದಲ್ಲಿರಬೇಕಂತ ದೇವರು ತೀರ್ಮಾನಿಸ್ತಾರೆ. ಉಪಚುನಾವಣೆ ನಂತರ ನಾನು ಮನೆಗೆ ಹೋಗಲ್ಲ. ಯಡಿಯೂರಪ್ಪ ಹೇಳಿದಂತೆ ಯಾವುದೂ ಆಗಲ್ಲ. ಬಡವರ ಮನೆಗೆ ನಾನು ಬರ್ತೇನೆ.
ಬಡವರ ಮನೆಯಲ್ಲಿ ಕುಳಿತು ಚರ್ಚೆ ಮಾಡ್ತೇನೆ.
ಸರ್ಕಾರದ ಖಜಾನೆಯಲ್ಲಿ ಸಾಕಷ್ಟು ದುಡ್ಡು ಇದೆ
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿಲ್ಲ. ಉಪಚುನಾವಣೆವಲ್ಲಿ ಅಪ್ಪ ಮಕ್ಕಳನ್ನು ಸೋಲಿಸಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ರಾಜಕೀಯ
ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲ? : ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು : ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ಈಗ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಖಚಿತ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಏಕೆ ಬಂಧಿಸಿಲ್ಲ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲ? ಎಂದು ಬಿಜೆಪಿ ಸರ್ಕಾರಕ್ಕೆ ಪ್ರಶ್ನಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತ ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ, ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ಅವುಗಳನ್ನು ವಾಪಾಸು ಪಡೆಯುತ್ತಿಲ್ಲ ಎಂದರು.
ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲವೇ? 3/4
— Siddaramaiah (@siddaramaiah) January 27, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಜಯನಗರ ಜಿಲ್ಲೆ ರಚನೆ; ಆಕ್ಷೇಪಣೆ ಪರಿಶೀಲಿಸಿ ಶೀಘ್ರ ನಿರ್ಣಯ: ಸಚಿವ ಆನಂದಸಿಂಗ್

ಸುದ್ದಿದಿನ,ಬಳ್ಳಾರಿ: ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ 30ಸಾವಿರ ಆಕ್ಷೇಪಣೆಗಳು ಬಂದಿದ್ದು;ಅವುಗಳನ್ನು ಪರಿಶೀಲಿಸಿ ಜಿಲ್ಲೆ ರಚನೆ ಕುರಿತು ಶೀಘ್ರ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳು ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ಕೊಡುವುದು ಬೇಡ ಅಂದಿದ್ದಾರೆ;ಪ್ರತಿಕ್ರಿಯೆ ನೀಡಲ್ಲ. ಜ.28ರಿಂದ ಅಧಿವೇಶನ ಆರಂಭವಾಗಲಿದ್ದು,ಸಹಜವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವುದು ಎಂದು ಹೇಳಿದ ಸಚಿವ ಆನಂದಸಿಂಗ್ ಅವರು ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಮಾಧ್ಯಮದವರು ಪದೇಪದೆ ಕೇಳಿದ ಪ್ರಶ್ನೆಗೆ ನೋ ರಿಯಾಕ್ಷನ್ ಒನ್ಲಿ ಆ್ಯಕ್ಷನ್ ಎಂದರು.
ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದೆ.ಸಂಕಷ್ಟದ ಸಂದರ್ಭದಲ್ಲಿ ಡಿಎಂಎಫ್ ಅನುದಾನ ನೆರವಾಗಿದೆ ಎಂದು ಹೇಳಿದ ಸಚಿವ ಆನಂದಸಿಂಗ್ ಅವರು ಡಿಎಂಎಫ್ ಅನುದಾನ ಬಳಸಿಕೊಂಡು ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಕಚೇರಿ ಬಳ್ಳಾರಿಯಲ್ಲಿ ಅರಂಭಿಸುವುದಕ್ಕೆ ಕ್ರಮವಹಿಸಲಾಗುವುದು ಎಂದು ಅವರು ವಿವರಿಸಿದರು.
ಮೊದಲ ಹಂತದಲ್ಲಿ ಆರೋಗ್ಯ ಸೇವಾ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆದವರಿಗೆ ಯಾವುದೇ ರೀತಿಯ ಅಡ್ಡ ಪರಿಣಾಮಗಳಾಗಿಲ್ಲ. ಜಿಲ್ಲೆಯಲ್ಲಿ ನೋಂದಣಿಯಾದ 20ಸಾವಿರ ಆರೋಗ್ಯ ಸಿಬ್ಬಂದಿಯಲ್ಲಿ ಅಂದಾಜು 7ಸಾವಿರ ಜನರು ಇದುವರೆಗೆ ಲಸಿಕೆ ಪಡೆದುಕೊಂಡಿದ್ದಾರೆ. ಇನ್ನೂಳಿದವರು ಇನ್ನೂ ಕೆಲದಿನಗಳಲ್ಲಿ ಪಡೆದುಕೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಸದ ದೇವಿಂದ್ರಪ್ಪ, ಶಾಸಕ ನಾಗೇಂದ್ರ, ಡಿಸಿ ಪವನಕುಮಾರ್ ಮಾಲಪಾಟಿ,ಜಿಪಂ ಸಿಇಒ ಕೆ.ಆರ್.ನಂದಿನಿ,ಎಸ್ಪಿ ಸೈದುಲು ಅಡಾವತ್,ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಹನುಮಂತಪ್ಪ ಮತ್ತಿತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕುರುಬ ಎಸ್ ಟಿ ಹೋರಾಟ | ಪಾದಯಾತ್ರೆಯಲ್ಲಿ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಕೊಟ್ರು ಡೆಡ್ ಲೈನ್..!

ಸುದ್ದಿದಿನ, ದಾವಣಗೆರೆ : ರಾಜ್ಯ ಸರ್ಕಾರಕ್ಕೆ ಒಂದರ ಮೇಲೊಂದು ತಲೆ ನೋವು ಶುರುವಾಗ್ತಿದೆ. ಒಂದು ಕಡೆ ಪಂಚಮಸಾಲಿ ಹೋರಾಟ, ಮತ್ತೊಂದೆಡೆ ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಆಗ್ರಹ. ಕಾಗಿನೆಲೆ ಶ್ರೀ ಗಳ ನೇತೃತ್ವದಲ್ಲಿ ಹೊರಟಿರುವ ಪಾದಯಾತ್ರೆ ಬೆಣ್ಣೆನಗರಿಗೆ ಬಂದು ತಲುಪಿದ್ದು, ಮೊದಲ ಭಾರೀಗೆ ಸರ್ಕಾರಕ್ಕೆ ಕಾಗಿನೆಲೆ ಶ್ರೀಗಳು ಖಡಕ್ ವಾರ್ನಿಂಗ್ ನೀಡುವ ಡೆಡ್ ಲೈನ್ ನೀಡಿದ್ದಾರೆ.
ಆ ಒಂದು ಪಾದಯಾತ್ರೆಯಲ್ಲಿ ಕೇಳಿದ್ದು ಒಂದೇ ಘೋಷಣೆ ವಾಕ್ಯ ಬೇಕೆ ಬೇಕು ಎಸ್ ಟಿ ಬೇಕು, ಬೇಕೆ ಬೇಕು ಎಸ್ ಟಿ ಬೇಕು. ಹೌದು., ಸಾಗರೋಪಾದಿಯಲ್ಲಿ ಜನ ಆ ಒಬ್ಬ ಸ್ವಾಮಿಜಿ ಜೊತೆ ಕೈಗೊಡಿಸಿದ್ದರು, ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಸದ್ಯ ತೀವ್ರ ಸ್ವರೂಪ ಪಡೆದುಕೊಂಡಿದೆ.
ಮಕರ ಸಂಕ್ರಾಂತಿಗೆ ಸೂರ್ಯ ತನ್ನ ದಿಕ್ಕು ಬದಲಿಸುವಂತೆ ನಿರಂಜನಾನಂದಪುರಿ ಸ್ವಾಮೀಜಿ ಕುರುಬ ದಿಕ್ಕು ಬದಲಿಸುವ ಪಣ ತೊಟ್ಟಿದ್ದಾರೆ. ಅದಕ್ಕೆ ಜನವರಿ ೧೫ ರಂದೆ ಹಾವೇರಿಯ ಕಾಗಿನೆಲೆ ಪೀಠದಿಂದ ಪಾದಯಾತ್ರೆ ಆರಂಭಿಸಿದ್ದು ಸದ್ಯ ಪಾದಯಾತ್ರೆ ದಾವಣಗೆರೆಗೆ ಬಂದು ತಲುಪಿದೆ, ಡೊಳ್ಳು ಕುಣಿತ, ಕುಂಬಮೇಳದ ಸ್ವಾಗತದೊಂದಿಗೆ ಜನರು ಸಾಗರೋಪಾದಿಯಲ್ಲಿ ಬಂದು ಜೈ ಎಂದಿದ್ದು, ಇದು ಎಸ್ ಟಿ ಹೋರಾಟಕ್ಕೆ ಮತ್ತುಷ್ಟು ಬಲ ನೀಡಿದೆ.
ಈ ವೇಳೆ ಹೋರಾಟವನ್ನುದ್ದೇಶಿಸಿ ಮಾತನಾಡಿದ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಮ್ಮ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಶಾಂತಿಯುತವಾಗಿ ನಡೆಯುತ್ತಿದೆ. ಒಂದು ವೇಳೆ ನಮ್ಮ ಹೋರಾಟಕ್ಕೆ ಸರಿಯಾದ ಬೆಲೆ ಸಿಗದೆ ಹೋದಲ್ಲಿ ನಮ್ಮ ಹೋರಾಟ ತೀವ್ರಗೊಳ್ಳಲಿದೆ, ಟಗರು ಗುದ್ದಿದರೆ ಸಂಸತ್ ಭವನ ನಡುಗಲಿದೆ ಅಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಹದಿನೈದು ಸಾವಿರಕ್ಕೂ ಹೆಚ್ಚು ಸೇರಿದ್ದು ಪಾದಯಾತ್ರೆಗೆ ಮತ್ತಷ್ಟು ಶಕ್ತಿ ತುಂಬಿತು.. ಇನ್ನೂ ಸಮಾವೇಶಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಆಗಮಿಸಿ, ಸಿದ್ದರಾಮಯ್ಯ ವಿರುದ್ದ ಗುಡುಗಿದ್ರು, ಸಿದ್ದರಾಮಯ್ಯ ಕೇವಲ ನಾಲ್ಕು ಜಿಲ್ಲೆಗೆ ಶಿಫಾರಸ್ಸು ಮಾಡಿದ್ರು, ಈಗ ನಾವು ಇಡೀ ಕರ್ನಾಟಕಕ್ಕೆ ST ಕೇಳುತ್ತಿದ್ದೇವೆ, ಕೈಮುಗಿದು ಕೇಳುತ್ತೇನೆ ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ನವರಿಗೆ ಟಾಂಗ್ ಕೊಟ್ರು.
|ನಿರಂಜನಾನಂದಪುರಿ ಸ್ವಾಮೀಜಿ, ಕನಕಗುರು ಪೀಠ
ಒಟ್ಟಾರೆ ಈಗಾಗಲೇ ಸಂಪುಟ ವಿಸ್ತರಣೆಯಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಸರ್ಕಾರಕ್ಕೆ ಇದೀಗ ST ಹೋರಾಟ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಅದರಲ್ಲೂ ಆಡಳಿತ ಪಕ್ಷದವರೆ ಆದ ಕೆಎಸ್ ಈಶ್ವರಪ್ಪ, ಎಂ ಟಿಬಿ ನಾಗರಾಜ್, ಆರ್ ಶಂಕರ್, ಎಚ್ ವಿಶ್ವನಾಥ್ ಹೋರಾಟಕ್ಕೆ ದುಮುಕಿದ್ದು, ಸರ್ಕಾಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
| ಕೆ.ಎಸ್. ಈಶ್ವರಪ್ಪ, ಸಚಿವರು
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
-
ದಿನದ ಸುದ್ದಿ1 day ago
ದಾವಣಗೆರೆ | ಅತ್ಯಾಚಾರ ಅಪರಾಧಿಗೆ 15 ವರ್ಷ ಸಜೆ, 26 ಸಾವಿರ ದಂಡ
-
ಬಹಿರಂಗ1 day ago
ಸಂವಿಧಾನ ದಿನಾಚರಣೆ ಹೇಗೆ ಗಣರಾಜ್ಯೋತ್ಸವವಾಯಿತು..?
-
ದಿನದ ಸುದ್ದಿ2 days ago
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
-
ದಿನದ ಸುದ್ದಿ1 day ago
ಹೊಲಿಗೆ ಯಂತ್ರ ಸೌಲಭ್ಯ ನೀಡುವ ಅರ್ಜಿ ಅವಧಿ ವಿಸ್ತರಣೆ
-
ಅಂತರಂಗ1 day ago
ಭಾರತದ ಸಂವಿಧಾನ : ಪ್ರಜೆಗಳ ಓದು
-
ಬಹಿರಂಗ3 days ago
ನುಡಿದ ಸತ್ಯವನ್ನು ಬಂಧಿಸಲಾಗದು
-
ದಿನದ ಸುದ್ದಿ1 day ago
ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ