ಲೈಫ್ ಸ್ಟೈಲ್
7000 ವರ್ಷಗಳಿಂದ ಬಳಸುತ್ತಿರುವ ಬೆಳ್ಳುಳ್ಳಿಯ ಆರೋಗ್ಯದ ಗುಣಗಳ ಬಗ್ಗೆ ನಿಮಗೆಷ್ಟು ಗೊತ್ತು..?
ಸುದ್ದಿದಿನ ಡೆಸ್ಕ್ : 7000 ವರ್ಷಗಳಿಂದ ನಾವು ಬೆಳ್ಳುಳ್ಳಿಯನ್ನು ಉಪಯೋಗಿಸುತ್ತಿದ್ದೇವೆ. ಆರೋಗ್ಯದ ಹಾಗೂ ರುಚಿಯ ದೃಷ್ಟಿಯಿಂದ ಇದನ್ನು ಬಳಸಲಾಗುತ್ತಿದೆ.ಇದರ ಬಗ್ಗೆ ಇನ್ನೂ ಕೆಲವು ಉಪಯೋಗಗಳನ್ನು ತಿಳಿಯೋಣ.
ಉಪಯೋಗಗಳು
- ದೇಹವನ್ನು ಹೆಚ್ಚು ಶಾಕವಾಗಿಡಲು ಮತ್ತು ನರಗಳನ್ನು ಹೆಚ್ಚು ಚೈತನ್ಯ ತುಂಬಿಸಿಕೊಳ್ಳಲು ಬೆಳ್ಳುಳ್ಳಿಯನ್ನು ಪ್ರತಿದಿನವೂ ಸೇವಿಸಬೇಕು.
- ರೋಗ ಯುಕ್ತರಾದ ಕ್ಷಯರೋಗಿಗಳು ದೀರ್ಘಕಾಲ ಪ್ರತಿದಿನವೂ ಬೆಳ್ಳುಳ್ಳಿಯನ್ನು ಬಳಸುತ್ತಿದ್ದರೆ ರೋಗ ಮರುಕಳಿಸುವ ಭಯವಿರುವುದಿಲ್ಲ.
- ರಕ್ತದ ಒತ್ತಡ ಹೆಚ್ಚಾಗಿರುವ ರೋಗಿಗಳು ಬೆಳ್ಳುಳ್ಳಿಯನ್ನು ಖಂಡಿತವಾಗಿ ಬಳಸಲೇಬೇಕು.
- ಬೆಳ್ಳುಳ್ಳಿ, ಹಿಪ್ಪೇ ಅಥವಾ ಹೊಂಗೆ ಬೀಜ ಮತ್ತು ಅಡಿಗೆ ಉಪ್ಪನ್ನು ಅರೆದು ಗಾಯಗಳಿಗೆ ಹೆಚ್ಚುವುದರಿಂದ ಗಾಯ ಬಹುಬೇಗ ಗುಣವಾಗುವುದು.
- ಚೇಳು ಕುಟುಕಿದ ಜಾಗಕ್ಕೆ ಬೆಳ್ಳುಳ್ಳಿ ಎಸಳನ್ನು ಅರೆದು ಹಚ್ಚದರೆ ಯಾತನೆ ದೂರವಾಗುವುದು.
- ಜೇನುತುಪ್ಪದೊಂದಿಗೆ ಬೆಳ್ಳುಳ್ಳಿ ರಸವನ್ನು ಒಂದು ಟೀ ಚಮಚದಷ್ಟು ಸೇವಿಸುವುದರಿಂದ ಜಂತುಹುಳುಗಳು ಮಲದೊಂದಿಗೆ ಹೊರಬೀಳುವುವು.
- ಕಿವಿ ನೋವಿದ್ದರೆ ಬೆಳ್ಳುಳ್ಳಿಯ ಎಸಳನ್ನು ಹರಳೆಣ್ಣೆಯಲ್ಲಿ ಕರಿದು ನಂತರ ಆರಿದ ಮೇಲೆ ಕಿವಿಗೆ ಒಂದೆರಡು ತೊಟ್ಟು ಆ ಎಣ್ಣೆಯನ್ನು ಬಿಟ್ಟುಕೊಂದರೆ ನೋವು ಪರಿಹಾರವಗುವುದು.
- ಬೆಳ್ಳುಳ್ಳಿ ಸೇವನೆಯಿಂದ ವಾತನಾಶವಾಗುತ್ತದೆ. ಕ್ಷಯರೋಗವನ್ನು ನಿವಾರಿಸುತ್ತದೆ. ಕಾಲರಾಕ್ಕೆ ಇದರ ಸೇವನೆಯಿಂದ ಹೆಚ್ಚು ಉಪಯೋಗವಾಗುತ್ತದೆ.
- ಹಾಲಿನಲ್ಲಿ ಬೆಳ್ಳುಳ್ಳಿ ಎಸಳನ್ನು ಬೇಯಿಸಿ ಪ್ರತಿದಿನ ತಿನ್ನುವುದರಿಂದ ಉಬ್ಬಸ ರೋಗ ಗುಣವಾಗುತ್ತದೆ.
- ಬಾಣಂತಿಯರು ಬೆಳ್ಳುಳ್ಳಿಯ ಚೂರುಗಳನ್ನು ಹತ್ತಿಯಲ್ಲಿ ಸುತ್ತಿ ಇಟ್ಟುಕೊಂಡರೆ ಶೀತದಿಂದ ಕಿವಿ ಕಿವುಡಾಗುಗ ಸಾಧ್ಯತೆ ಇರುವುದಿಲ್ಲ.
- ಬೆಳ್ಳುಳ್ಳಿಯನ್ನು ಬೇಯಿಸಿ ಅದರ ನೀರನ್ನು ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ಗರ್ಭಾಶಯದ ನೋವು ಪರಿಹಾರವಾಗುವುದು.
- ಪ್ರತಿನಿತ್ಯ ಬೆಳ್ಳುಳ್ಳಿಯನ್ನು ಬಳಸುತ್ತಿದ್ದರೆ ಜಠರದಲ್ಲಿ ವಾಯು ಸೇರುವುದಿಲ್ಲ ಜೊತೆಗೆ ರಕ್ತದ ವೃದ್ಧಿಯಾಗುತ್ತದೆ.
- ಬೆಳ್ಳುಳ್ಳಿ ಹೊಟ್ಟಿನ ಹೊಗೆಯನ್ನು ಮನೆಯಲ್ಲಿ ಕೆಲವು ಗಂಟೆಗಳು ಹಾಕುವುದರಿಂದ ಮನೆಯಲ್ಲಿ ಒಂದು ವೇಳೆ ವಿಷಜಂತುಗಳು ಸೇರಿಕೊಂಡಿದ್ದರೆ ಅವು ಅದರ ವಾಸನೆಯನ್ನು ತಡೆಯಲಾರದೆ ಹೊರಗೆ ಹೊರಟು ಹೋಗುವುವು.
- ದೀರ್ಘಕಾಲದ ಕೆಮ್ಮು ಮತ್ತು ನೆಗಡಡಯಿಂದ ಬಳಲುತ್ತಿರುವವರು ಬೆಳ್ಳುಳ್ಳಿಯನ್ನು ಪ್ರತಿದಿನ ಬಳಸಿದರೆ ಖಾಯಿಲೆ ದೂರವಾಗುವುದು.
- ಬಿಸಿ ಮಾಡಿದ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಅಜೀರ್ಣ ಮತ್ತು ಹೊಟ್ಟೆ ಉಬ್ಬರ ದೂರವಾಗುವುದು.
- ಬೆಳ್ಳುಳ್ಳಿಯನ್ನು ಪ್ರತಿನಿತ್ಯವೂ ಬಳಸುವುದರಿಂದ ಪಚನಶಕ್ತಿ ಹೆಚ್ಚಿಸಿ ವೀರ್ಯವನ್ನು ವೃದ್ಧಿಸುತ್ತದೆ. ಇದರಿಂದ ದಮ್ಮು, ಕೆಮ್ಮು ಉಬ್ಬಸದ ವಿಕಾರಗಳಿಗೆ ಅತ್ಯುತ್ತಮ ಔಷಧವಾಗಿದೆ.
- ಬೆಳ್ಳುಳ್ಳಿಯನ್ನು ಬಳಸುವುದರಿಂದ ಜ್ವರ ಬಂದಾಗ ಪ್ಲೇಟ್ ಲೇಟ್ ಗಳು ಕಡಿಮೆ ಇರುವುದನ್ನು ಹೆಚ್ಚು ಮಾಡುತ್ತದೆ.
- ಬೆಳ್ಳುಳ್ಳಿಯು ಇನ್ಸುಲಿನ್ ಬಿಡುಗಡೆ ಹೆಚ್ಚಿಸಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿ ಇರುತ್ತದೆ.
- ಹಲ್ಲು ನೋವು ಇದಲ್ಲಿ ಬೆಳ್ಳುಳ್ಳಿಯ ಸಣ್ಣ ಚೂರು ಇಡುವುದರಿಂದ ನೋವು ಕಡಿಮೆಯಾಗುತ್ತದೆ.
- ಬೆನ್ನು ನೋವಿದ್ದರೆ ಬೆಳ್ಳುಳ್ಳಿ ರಸ ಹೆಚ್ಚುವುದರಿಂದ ನೋವು ಕಡಿಮೆ ಆಗುತ್ತದೆ.
ಇದನ್ನೂ ಓದಿ
https://suddidina.com/lifestyle/bananas-health-benifits/
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

ದಿನದ ಸುದ್ದಿ
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್ಗಳಾದ ಓಲಾ, ಉಬರ್, ರ್ಯಾಪಿಡೋ ನಂತಹ ಆ್ಯಪ್ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
http://Visit : www.suddidina.com
ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.
ನಮ್ಮ ಬಿಎಂಟಿಸಿ 2.0′ ಆ್ಯಪ್ನಲ್ಲಿ ಏನಿದೆ ಹೊಸತು?
ಖಾಸಗಿ ಆ್ಯಪ್ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್ನಲ್ಲಿ ಬಿಎಂಟಿಸಿ ನೆಟ್ವರ್ಕ್ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್ಗಳು ಸೇರಿದಂತೆ ಒಟ್ಟು 6,938 ಬಸ್ಗಳಿವೆ. ಪ್ರತಿದಿನ ಸರಾಸರಿ 6,200 ಬಸ್ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.
ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ:
ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
200 ಹೊಸ ಮಿನಿ ಬಸ್ಗಳ ಖರೀದಿ:
ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:
ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್ಗಳ ಪೈಕಿ 200 ಮಿನಿ ಎಸಿ ಇ-ಬಸ್ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.



