Connect with us

ಲೈಫ್ ಸ್ಟೈಲ್

ವೀರ್ಯಾಣು ವೃದ್ಧಿಸೋ ‘ಮಾವಿನ ಹಣ್ಣಿನ’ ಉಪಯೋಗಗಳಿಷ್ಟು..!

Published

on

ಸುದ್ದಿದಿನ ಡೆಸ್ಕ್ : ಮಾವಿನ ಹಣ್ಣು, ಮಾವಿನ ಕಾಯಿ ಎಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ. ನೋಡಿದರೆ ಅಥವಾ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುತ್ತದೆ. ಅದನ್ನು ಹಾಗೆ ತಿನ್ನುವುದರ ಜೋತೆಗೆ ಅದರ ಉಪಯೋಗಗಳನ್ನು ತಿಳಿದರೆ ಇನ್ನೂ ಸವಿಯಲು ರುಚಿಯಾಗಿರುತ್ತದೆ. ಮಾವಿನಿಂದ ಯಾವ ಯಾವ ರೀತಿ ಉಪಯೋಗವಿದೆ ಸ್ವಲ್ಪ ತಿಳಿಯೋಣ.

ಉಪಯೋಗಗಳು

  1. ಮಾವಿನ ಕಾಯಿಯನ್ನು ತಿನ್ನುವುದರಿಂದ ಕಾಲರಾ, ಆಮಶಂಕೆ ರೋಗಗಳು ನಿರೋಧಿಸಲ್ಪಡುವುವು.
  2. ಮಾವಿನ ಕಾಯಿಯಲ್ಲಿ ‘ಸಿ’ ಜೀವಸತ್ವ ಸಾಕಷ್ಟು ಇರುವುದು. ಅದನ್ನು ಪ್ರತಿದಿನ ತಿನ್ನುವುದರಿಂದ ರಕ್ತಸಂಚಾರ ಉತ್ತಮಗೊಳ್ಳುತ್ತದೆ. ಹೃದಯ ದೌರ್ಬಲ್ಯ ತಗ್ಗಿ ನರಗಳ ರ್ದುಬಲತೆ ದೂರವಾಗುವುದು.
  3. ಉಪ್ಪಿನೊಡನೆ ಮಾವಿನಕಾಯಿಯನ್ನು ನಂಚಿಕೊಂಡು ತಿಂದರೆ ಬಾಯಾರಿಕೆ ಬಳಲಿಕೆ ಪರಿಹಾರವಾಗುತ್ತದೆ.
  4. ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಹೀಚು ಮಾವಿನಕಾಯಿ ತಿಂದರೆ ಮಲಬದ್ಧತೆ, ಅಜೀರ್ಣ ರೋಗಗಳಲ್ಲಿ ಗುಣಕಂಡು ಬರುವುದು.
  5. ಜೇನುತುಪ್ಪ ಮತ್ತು ಕಾಳು ಮೆಣಸಿನೊಂದಿಗೆ ಮಾವಿನಕಾಯಿಯನ್ನು ತಿನ್ನುವುದರಿಂದ ಅರಿಶಿನ ಕಾಮಾಲೆ ಕಾಯಿಲೆ ಸಂಭವಿಸುವ ಸಾಧ್ಯತೆ ಇರುವುದಿಲ್ಲ.
  6. ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿ ಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುತ್ತದೆ.
  7. ಮಾವಿನಕಾಯಿಯ ಸಿಪ್ಪೆಯನ್ನು ಹುರಿದು ತಿನ್ನುವುದರಿಂದ ಋತುಸ್ರಾವದಲ್ಲಿ ಗಣನೀಯ ಪ್ರಮಾಣದಲ್ಲಿ ರಕ್ತ ಹೀನತೆ ಆಗುವುದನ್ನು ತಡೆಯಬಹುದು.
  8. ಮಾವಿನ ಹಣ್ಣನ್ನು ಸೇವಿಸುವುದರಿಂದ ವೀರ್ಯ ವೃದ್ಧಿಯಾಗುತ್ತದೆ.
  9. ಶರೀರದ ಬಣ್ಣ ಉತ್ತಮಗೊಳ್ಳತ್ತದೆ.
  10. ಮಾವಿನ ಹಣ್ಣು ಹಿತಮಿತವಾಗಿ ತಿಂದರೆ ವಾಯುವನ್ನು ಶಮನಗೊಳಿಸುತ್ತದೆ.
  11. ಮಾವಿನಕಾಯಿಯನ್ನು ತಿನ್ನುವುದರಿಂದ ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಅತ್ಯಂತ ಹಿತವನ್ನುಂಟು ಮಾಡುತ್ತದೆ.
  12. ಮಾವಿನಕಾಯಿಯ ಸಿಪ್ಪೆಯನ್ನು ಚೆನ್ನಾಗಿ ಅರೆದು ಮಜ್ಜಿಗೆಯಲ್ಲಿ ಕದಡಿ ದಿನಕ್ಕೆ ಎರಡು ಬಾರಿ ತೆಗೆದುಕೊಂಡರೆ ಅತಿಸಾರ ಮತ್ತು ಆಮಶಂಕೆ ರೋಗಿಗಳು ನಿವಾರಣೆಯಾಗುತ್ತದೆ.
  13. ಬಲಿತ ಮಾವಿನ ಕಾಯಿಗಳ ಉಪ್ಪಿನ ಕಾಯಿಯನ್ನು ಮಜ್ಜಿಗೆ ಅನ್ನದ ಜೊತೆಗೆ ನಂಚಿಕೊಂಡು ತಿನ್ನುವುದರಿಂದ ಚೆನ್ನಾಗಿ ಹಸಿವು ಆಗುವುದು.
  14. ಆಗ ತಾನೇ ಮಾವಿನಕಾಯಿಗಳನ್ನು ಕಿತ್ತಾಗ ಅದರ ತೊಟ್ಟು ಮುರಿದರೆ ಒಂದು ರೀತಿಯ ಬಿಳಿಯ ಅಂಟುದ್ರವ ಸುರಿಯುವುದು. ಅದನ್ನು ಹೆಚ್ಚಿದರೆ ಹುಳಕಡ್ಡಿ ಮತ್ತು ಇಸುಬು ರೋಗಗಳು ದೂರವಾಗುವುದು.
  15. ಮಾವಿನ ಹಣ್ಣುಗಳನ್ನು ತಿನ್ನುವುದರಿಂದ ಆಹಾರ ಚೆನ್ನಾಗಿ ಜೀರ್ಣಿಸುವುದು. ಜೊತೆಗೆ ಹೃದ್ರೋಗಕ್ಕೆ ಇದು ಅತ್ಯಂತ ದಿವ್ಯ ಔಷಧಿಯಂತೆ.
  16. ಮಾವಿನ ಹಣ್ಣಿನ ಸೀಕರಣೆ ಮಾಡಿಕೊಂಡ ಅದಕ್ಕೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ಶ್ರವಣಶಕ್ತಿ ಅಧಿಕವಾಗುವುದು.
  17. ಕಣ್ಣಿನ ಆರೋಗ್ಯ ರಕ್ಷಣೆಗೆ ಬಹು ಒಳ್ಳೆಯದು.
  18. ಒಣಗಿದ ಜಾತಿಯ ಮಾವಿನ ಹಣ್ಣುಗಳನ್ನು ಊಟವಾದ ನಂತರ ತಿಂದರೆ ಹಸಿವು ಹೆಚ್ಚುತ್ತದೆ. ದೈಹಿಕ ಚಟುವಟಿಕೆ ಅಧಿಕವಾಗುತ್ತದೆ.
  19. ಮಾವಿನ ಕಾಯಿ ಅಥವಾ ಹಣ್ಣಿನಲ್ಲಿರುವ ಗ್ಲೂಟಾಮೈನ್ ಆಸಿಡ್ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
  20. ಮಾವಿನ ಹಣ್ಣನ್ನು ಕತ್ತರಿಸಿ ಅದರ ಚಿಕ್ಕ ತುಂಡನ್ನು ತೆಗೆದುಕೊಂಡು ಮುಖಕ್ಕೆ ಹಚ್ಚಿ ನಂತರ ಸ್ನಾನ ಮಾಡುವುದರಿಂದ ಮೊಡವೆ ಕಡಿಮೆಯಾಗುವುದು.

ಇದನ್ನೂ ಓದಿ

https://suddidina.com/lifestyle/benefits-of-indian-gossberry/

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading
Advertisement

Title

ದಿನದ ಸುದ್ದಿ2 days ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ3 days ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ2 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

ದಿನದ ಸುದ್ದಿ2 weeks ago

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು...

ದಿನದ ಸುದ್ದಿ2 weeks ago

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ...

ದಿನದ ಸುದ್ದಿ3 weeks ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ1 month ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ1 month ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ1 month ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ1 month ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

Trending