Connect with us

ಲೈಫ್ ಸ್ಟೈಲ್

‘ತುಳಸಿ’ ಮನೆ ಮದ್ದು..!

Published

on

ಸುದ್ದಿದಿನ ಡೆಸ್ಕ್ : ತುಳಸಿ ಎಂದರೆ ನಮಗೆ ಅದು ಪೂಜೆಯಲ್ಲಿ ಅಥವಾ ಆಯುರ್ವೇದದಲ್ಲಿ ಮಾತ್ರ ಬಳಸುತ್ತಾರೆ ಅಂದುಕೊಂಡಿದ್ದೇವೆ.ಅದರೆ, ತುಳಸಿಯನ್ನು ದೊಡ್ಡ ದೊಡ್ಡ ಕಂಪನಿಗಳು ಅವರು ತಯಾರಿಸುವ ಸೋಪ್, ಕ್ರೀಮ್ ಗಳಲ್ಲಿ ಬಳಸುತ್ತಾರೆ. ನಾವು ಅದನ್ನು ಪೂಜೆಗೆ ಮಾತ್ರ ಬಳಸುತ್ತೀವಿ. ಅದರಿಂದ ಅಗುವ ಮನೆ ಮದ್ದಿನ ಬಗ್ಗೆ ತಿಳಿದರೆ ಅದನ್ನು ನಮ್ಮ ಮನೆಯಲ್ಲಿ ಹೆಚ್ಚಾಗಿ ಬೆಳೆಸಿ ಉಪಯೋಗಿಸ ಬಹುದು.

ಉಪಯೋಗಗಳು

  1. ತುಳಸಿ ಗಿಡದ ಕಾಂಡದಿಂದ ಹುಳುಕಡ್ಡಿಯ ಭಾಗವನ್ನು ಚೆನ್ನಾಗಿ ಕೆರೆದು ಅನಂತರ ತುಳಸಿ ಸೊಪ್ಪಿನ ಕಷಾಯ ಮಾಡಿಕೊಂಡು ಅದರಿಂದ ಹುಳುಕಡ್ಡಿಯ ಸ್ಥಾನವನ್ನು ತೊಳೆಯಬೇಕು. ಅದಾದ ನಂತರ ತುಳಸಿ ಸೊಪ್ಪನ್ನು ಚೆನ್ನಾಗಿ ಅರೆದ ಹುಳುಕಡ್ಡಿಯ ಭಾಗಕ್ಕೆ ಲೇಪಿಸುವುದರಿಂದ ಶೀಘ್ರವೇ ಗುಣ ಕಂಡುಬರುವುದು.
  2. ತುಳಸಿ ಗಿಡದ ಹಸಿ ಬೇರಿನಿಂದ ಗಂಧವನ್ನು ತೆಗೆದು ಚೇಳು ಕುಟುಕಿದ ಸ್ಥಾನಕ್ಕೆ ಲೇಪಿಸುವುದರಿಂದ ಚೇಳಿನ ವಿಷ ಇಳಿದು ಹೋಗುವುದು.
  3. ಕಿವಿಯೊಳಗೆ ಹುಣ್ಣಾಗಿದ್ದರೆ ತುಳಸಿ ಎಲೆಯ ರಸವನ್ನು ತೆಗೆದು ಒಂದೆರಡು ತೊಟ್ಟು ರಸವನ್ನು ಕಿವಿಗೆ ಹಾಕುವುದಿಲ್ಲ ಶೀಘ್ರವೇ ಗುಣ ಕಂಡು ಬರುವುದು.
  4. ಕಿವಿಯಲ್ಲಿ ನೋವಿದ್ದರೆ ತುಳಸಿ ಎಲೆಗಳ ರಸವನ್ನು ಕಿವಿಗೆ ಹಿಂಡುತ್ತಿದ್ದರೆ ನೋವು ಮಾಯವಾಗುವುದು.
  5. ನೆಗಡಿ ವಾಸಿಯಾಗಲು ತುಳಸಿ ಸೊಪ್ಪಿನ ಕಷಾಯವನ್ನು ತಯಾರಿಸಿ ಅದಕ್ಕೆ ಜೇನುತುಪ್ಪ ಸೇರಿಸಿ ಸೇವಿಸಬೇಕು.
  6. ಅತಿಯಾದ ಕೆಮ್ಮು ನಿವಾರಣೆಗೆ ಶ್ರೀತುಳಸಿ ರಸ, ಬೆಳ್ಳುಳ್ಳಿ ರಸ ಹಾಗೂ ಜೇನುತುಪ್ಪವನ್ನು ಸಮ ಪ್ರಮಾಣದಲ್ಲಿ ಮಾಡಿಕೊಂಡ ಮೂರು ಗಂಟೆಗಳಿಗೆ ಒಂದು ಸಾರಿ ಒಂದು ಟೀ ಚಮಚದಷ್ಟು ಸೇವಿಸುತ್ತಿದ್ದರೆ ಕೆಮ್ಮು ನಿಂತು ಹೋಗುವುದು.
  7. ಜ್ವರದಿಂದ ಕೂಡಿದ ಕೆಮ್ಮಿಗೆ ತುಳಸಿ ರಸದಲ್ಲಿ ಕಾಳುಮೆಣಸಿನ ಚೂರ್ಣವನ್ನು ಕಲಸಿ ಸೇವಿಸುವುದರಿಂದ ಗುಣ ಕಂಡುಬರುತ್ತದೆ.
  8. ಕಫ ನಿವಾರಣೆಗೆ ತುಳಸಿ ಹೂವುಗಳನ್ನು ಈರುಳ್ಳಿ ರಸ, ಶುಂಠಿ ರಸ ಮತ್ತು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಕಫ ನಿವಾರಣೆಯಾಗುತ್ತದೆ.
  9. ಮಲೇರಿಯಾ ಜ್ವರಕ್ಕೆ ಕೃಷ್ಣ ತುಳಸಿ ಸೊಪ್ಪಿನ ರಸವನ್ನು ತೆಗೆದು ಮೈಗೆ ತಿಕ್ಕಿ ಮಾಲೀಷ್ ಮಾಡುವುದರಿಂದ ಛಳಿ ನಿಲ್ಲುವುದು ಹಾಗೂ ತುಳಸಿ ರಸದೊಂದಿಗೆ ಕಾಳು ಮೆಣಸಿನ ಪುಡಿ ಸೇವಿಸುವುದರಿಂದ ಜ್ವರ ಗುಣವಾಗುವುದು.
  10. ಶ್ರೀತುಳಸಿ ಕಷಾಯವನ್ನು ತಯಾರಿಸಿ ಒಂದು ಟೀ ಚಮಚದಷ್ಟು ರಸವನ್ನು ದಿನಕ್ಕೆ ಮೂರು ಬಾರಿಯಂತೆ ನಾಲ್ಕೈದು ದಿನಗಳ ಕಾಲ ಸೇವಿಸುತ್ತಿದ್ದರೆ ಶ್ವಾಸನಳಿಕಾ ದಾಹ ಗುಣವಾಗುತ್ತದೆ.
  11. ಒಂದು ಟೀ ಚಮಚ ತುಳಸಿ ರಸವನ್ನು ದಿನಕ್ಕೆ ಎರಡು ಬಾರಿಯಂತೆ ಎರಡು ಮೂರು ದಿನಗಳ ಕಾಲ ಸೇವಿಸುವುದರಿಂದ ಅಜೀರ್ಣ ನಿವಾರಣೆಯಾಗುವುದು.
  12. ಶ್ರೀತುಳಸಿ ಸೊಪ್ಪಿನ ಕಷಾಯ ತಯಾರಿಸಿ ದಿನಕ್ಕೆ ಮೂರು ಬಾರಿ ಸೇವಿಸುವುದರಿಂದ ಬೆಳಗ್ಗೆ ಎದ್ದಾಗ ಉಂಟಾಗುವ ಅಸ್ವಸ್ಥತೆ ದೂರವಾಗುವುದು.
  13. ತುಳಸಿ ರಸವನ್ನು ಗಂಧದೊಂದಿಗೆ ತೇಯ್ದು ನೆತ್ತಿಗೆ ಹಚ್ಚುವುದರಿಂದ ತಲೆನೋವು ಉಪಶಮನವಾಗುತ್ತದೆ.
  14. ತುಳಸಿ ರಸವನ್ನು ಜೇನಿನೊಂದಿಗೆ ನಿಯಮಿತವಾಗಿ 6 ತಿಂಗಳು ತೆಗೆದುಕೊಂಡಲ್ಲಿ ಮೂತ್ರದಲ್ಲಿನ ಕಲ್ಲಿನ ಬಾಧೆ ಕಡಿಮೆಯಾಗುತ್ತದೆ.
  15. ತುಳಸಿಯ ಎಲೆಗಳು ನಮ್ಮ ಬುದ್ಧಿ ಶಕ್ತಿಯನ್ನು ಚುರುಕುಗೊಳಿಸುತ್ತದೆ ಹಾಗೂ ಉದರ ಬಾಧೆಗಳನ್ನು ನಿವಾರಿಸಿ ಶಕ್ತಿ ಕೊಡುತ್ತದೆ.

ಸುದ್ದಿದಿನ|ವಾಟ್ಸಾಪ್|9986715401

ದಿನದ ಸುದ್ದಿ

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.

ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.

ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಕ್ರೀಡೆ

ಬೆಳಗಿನ ಸುದ್ದಿ ಮುಖ್ಯಾಂಶಗಳು

Published

on

ಬೆಳಗಿನ ಸುದ್ದಿ ಮುಖ್ಯಾಂಶಗಳು

  1. ರಾಜ್ಯ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮುಂದಿನ ತಿಂಗಳ 3 ರಂದು ಚುನಾವಣೆ ನಡೆಯಲಿದೆ. ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 91ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.
  2. ದೇಶದ ಉತ್ತರದ ರಾಜ್ಯಗಳಲ್ಲಿ ನಿನ್ನೆ ತೀವ್ರ ಬಿಸಿಗಾಳಿ ವಾತಾವರಣ ಉಂಟಾಗಿತ್ತು. ಮುಂದಿನ 4 ದಿನಗಳಲ್ಲಿ ವಾಯವ್ಯ ಪೂರ್ವ ಹಾಗೂ ಮಧ್ಯಭಾರತದ ಬಯಲು ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚಿಸಿದೆ.
  3. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶಾದ್ಯಂತ 40 ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರ ಉಕ್ಕೇರಲಿದ್ದು, ಮುಂಜಾಗ್ರತಾ ಕ್ರಮವಾಗಿ ಬುಧವಾರದವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
  4. ತೈವಾನ್‌ನ ಅಧ್ಯಕ್ಷ ಹುದ್ದೆ ಆಯ್ಕೆಯಾಗಿರುವ ಲೈ ಛಿಂಗ್-ತೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ. ಕಳೆದ 4 ವರ್ಷಗಳಿಂದ ದೇಶದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ 64 ವರ್ಷದ ಲೈ ಅವರು, ತೈವಾನ್‌ನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.
  5. ಶ್ರೀಲಂಕಾದ ಸೀತಾಮಾತೆ ಮಂದಿರ-ಸೀತಾ ಇಳಿಯಾದಲ್ಲಿ ನಿನ್ನೆ ಕುಂಬಾಭಿಷೇಕ ಶ್ರದ್ಧಾ-ಭಕ್ತಿ ಸಡಗರ ಸಂಭ್ರಮಗಳಿಂದ ಜರುಗಿತು. ಅಯೋಧ್ಯೆಯ ಸರಯೂ ನದಿಯಿಂದ ತರಲಾಗಿದ್ದ ಸುಮಾರು 25ಲೀಟರ್ ಪವಿತ್ರ ಜಲದಿಂದ ಮಂದಿರದ ಗೋಪುರಕ್ಕೆ ಅಭಿಷೇಕ ನೆರವೇರಿಸಲಾಯಿತು. ಭಾರತ-ನೇಪಾಳ, ಶ್ರೀಲಂಕಾ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ್ದ ಭಕ್ತಾದಿಗಳು ಈ ದೃಶ್ಯವನ್ನು ಕಣ್ಮನಗಳಲ್ಲಿ ತುಂಬಿಕೊಂಡರು.
  6. ಭಾರತದ ಗ್ರಾಂಡ್ ಮಾಸ್ಟರ್ ಅರವಿಂದ್ ಚಿದಂಬರಂ ಶಾರ್ಜಾ ಮಾಸ್ಟರ್‍ಸ್ ಚೆಸ್ ಪಂದ್ಯಾವಳಿಯಲ್ಲಿ ಅತಿಥೇಯ ಶಾರ್ಜಾದ ಎ.ಆರ್. ಸುಲೆಹ್ ಸಲೀಂ ಅವರನ್ನು ಪರಾಭವಗೊಳಿಸಿ 4.5ಅಂಕಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
  7. ಗುವಾಹಾಟಿಯಲ್ಲಿ ನಿನ್ನೆ ರಾತ್ರಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ಕೊಲ್ಕೊತ್ತಾ ನೈಟ್ ರೈಡರ್‍ಸ್ ನಡುವಿನ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಕೆಲಕಾಲ ಮಳೆ ಬಂದು ನಿಂತ ನಂತರ ನಡೆದ ಟಾಸ್ ಗೆದ್ದ ಕೊಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಪುನಃ ಮಳೆ ಬಂದ ಹಿನ್ನೆಲೆ ಪಂದ್ಯ ರದ್ದುಗೊಳಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Published

on

  • ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ

90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು.

ಜನಸಾಮಾನ್ಯರ ಅರಿವಿನ-ಪರಿಧಿ ತಿಳಿಗೊಳ್ಳುವುದರ ಮೊದಲೇ ಊಹಿಸಲಾರದಷ್ಟು ಮಟ್ಟಿಗೆ ಇಂದು, ಸ್ವಚ್ಛಂದ ಹಳ್ಳಿ-ಸೊಬಗಿನ ಕೂಡು-ಕುಟುಂಬದ, ಮೈ-ಮನಸ್ಸು ತುಂಬಿದ, ಪರಿಶುದ್ಧ ಜೀವನ ಪ್ರೀತಿ, ಉತ್ಸಾಹ, ಮಮತೆಯನ್ನು ಇನ್ನಿಲ್ಲವಾಗಿಸಿದೆ ಎನಿಸುತ್ತದೆಯಲ್ಲವೆ?

ಹೇಗೆಂದರೆ, ಕಲ್ಪಿಸಿಕೊಂಡರೂ ಕಣ್ಣೆದುರಿಗೆ ತೆರೆದಿಡುವ ಅಮೂಲ್ಯ ಬದುಕು, ಅದೆಷ್ಟು ಬೇಗ ದಿಕ್ಕು-ದೆಸೆಯಿಲ್ಲದೆ ಕಣ್ಣು-ಕಟ್ಟಿದ ಸ್ಪರ್ಧೆಗಿಳಿದ ಕುದುರೆಯಂತೆ ಅಲೆಯುವಂತಾಗಿದೆ! ಅರೆಕ್ಷಣ, ಮೈಮನ ಕಸಿವಿಸಿಗೊಳ್ಳುತ್ತೆ! ಜೀವ ಮರುಗುತ್ತೆ. ಮತ್ತೆ ಮತ್ತೆ ಆ ಬಾಲ್ಯ, ಹಳ್ಳಿ ಬದುಕನ್ನ ಅರಸಿ ಬಯಸುತ್ತೆ! ಜನತೆ, ಹಳ್ಳಿಯಲ್ಲಿನ ಗಿಡ-ಮರ, ಪಶು-ಪಕ್ಷಿ, ಹಳ್ಳ-ಕೊಳ್ಳ, ಬೆಟ್ಟ-ಗುಡ್ಡ ಮುಂತಾದ ಪರಿಸರದ ಸಕಲ ಜೀವಿಗಳೊಂದಿಗೆ ಒಂದಾಗಿ ನಲ್ಮೆಯಿಂದ ಪರಿಶುದ್ಧ ಮನದಿ, ಭೂ ತಾಯಿ, ತಿಳಿ-ನೀಲಿ ಆಗಸ, ಮಳೆ, ಗಾಳಿ, ಬೆಳಕನ್ನ ಇನ್ನಿಲ್ಲದೆ ಅಪ್ಪಿ, ಅತ್ಯಂತ ಸಂತಸ-ಖುಷಿಯಿಂದ, ಇರುವ ಪರಿಸ್ಥಿತಿಗೆ ಒಗ್ಗಿ , ಬದುಕು ರೂಪಿಸಿಕೊಂಡು ಜೀವನೋತ್ಸಾಹ ತಳೆಯುತ್ತಿದ್ದರು.

ನಿಜ ಹೇಳಬೇಕೆಂದರೆ, ಪರಿಸರವೇ ಪಾಠ; ಭೂ ತಾಯಿಯೇ ಹಾಸಿಗೆ; ಆಗಸವೇ ಹೊದಿಕೆಯಾಗಿ, ದುಡಿದ, ದಣಿವರಿದ ಮನದಿ, ಕಣ್ತುಂಬಿ ನೆಮ್ಮದಿಯ ನಿಟ್ಟುಸಿರುಗೈವ ಕ್ಷಣಗಳು ಅದಾಗಿತ್ತು!

ಹಳ್ಳಿಯಲ್ಲಿನ ಆಟೋಟಗಳು, ತಮಾಷೆಯ ಕ್ಷಣಗಳು, ಆಟಿಕೆಗಳು, ಸಾಮಾನುಗಳು, ಹಬ್ಬ-ಹರಿದಿನಗಳು, ಜಾತ್ರೆ-ಸಂತೆಗಳು, ಒಕ್ಕಲು ಸಮಯದ ಸುಗ್ಗಿಯ ಮಧುರ ಕ್ಷಣಗಳು ಇತ್ಯಾದಿ ಜನತೆಯ ಮುಗ್ಧ -ಮನಸ್ಸು ಮತ್ತು ಹೊಳೆವ ಮುಖದಲ್ಲಿ, ನಿಷ್ಕಲ್ಮಶ ಮಂದಹಾಸ ಮೂಡಿಸಿ, ಬೆಲೆ ಕಟ್ಟಲಾಗದ ಖುಷಿಯ ಕ್ಷಣಗಳನ್ನು ಸದಾ ಅವರಲ್ಲಿ ಕಂಗೊಳಿಸುತ್ತಿದ್ದವು.

ಎಲ್ಲರೂ ದುಡಿವವರು; ಎಲ್ಲರೂ ಭಾಗಿಯಾಗುವವರು; ಎಲ್ಲರೊಳಗೊಂದಾಗಿ ಬಾಳುವವರು; ಎಲ್ಲರಲ್ಲೂ ಧನ್ಯತಾ ಭಾವ; ಆದರಣೀಯತೆ, ಪೂಜ್ಯತಾ-ಭಾವ ತುಂಬಿತ್ತು! ಅಂತಃಕರಣೆ, ಕರುಣೆ, ಪ್ರೀತಿ-ವಿಶ್ವಾಸ, ತಕ್ಕಮಟ್ಟಿಗೆ ಮಾನವೀಯತೆ ಬದುಕ-ಪ್ರೀತಿ ಹೆಚ್ಚಿಸಿತ್ತು!

ಈಗಾಗಲೇ, ನಾವು ಯಾವ ಸ್ಥಿತಿ ತಲುಪಿದ್ದೇವೆಂದರೆ: ಶಾಲಾ ರಜೆಯ ದಿನಗಳಲ್ಲಿ, ಈಗಿನ ಮಕ್ಕಳಿಗೆ ಆ ಕಾಲದ ಹಳ್ಳಿಗಳ ಜೀವನ ಪರಿಚಯಿಸಲು ಗೊಟಗೋಡಿಯ ರಾಕ್ ಗಾರ್ಡನ್ – ಹಾವೇರಿ, ಹೆರಿಟೇಜ್ ವಿಲೇಜ್ – ಮಣಿಪಾಲ, ಅಲ್ಲಲ್ಲಿ ಸಾರ್ವಜನಿಕ ಉದ್ಯಾನವನ, ಹಾಗೂ ಇತರೆ ಕೆಲವು ಮ್ಯೂಸಿಯಮ್ ಗಳತ್ತ ಮುಖ ಮಾಡಿಬೇಕೆ ಹೊರತು ನೈಜ ಚಿತ್ರಣ ಪ್ರಸ್ತುತ ಹಳ್ಳಿಗಾಡಿನಲ್ಲೂ ಕಾಣಸಿಗದು! ಸ್ವತಃ ಹಳ್ಳಿಗರೇ ಪರಿತಪಿಸುವ ಸ್ಥಿತಿ.

ಕಾರಣ ಇಷ್ಟೆ: ತಂತ್ರಜ್ಞಾನದ ಆವಿಷ್ಕಾರ ಮತ್ತು ಎಲ್ಲ ಕ್ಷೇತ್ರಗಳಲ್ಲೂ ಹೊಕ್ಕಿರುವ ಅದರ ಗಾಢವಾದ ಛಾಯೆ. ಇಡೀ ‘ಪ್ರಪಂಚವೇ ಒಂದು ಹಳ್ಳಿ’ (Global Village) ಯಾಗಿ ಮಾರ್ಪಟ್ಟಿರುವ ಭಾವನೆ. ವಿಶೇಷವಾಗಿ, ದೂರವಾಣಿ, ಇಂಟರ್ನೆಟ್, ಯುಟ್ಯೂಬ್, ನೇರ ಮೆದುಳಿಗೆ ಕೈ ಹಾಕಿರುವ ಸಾಮಾಜಿಕ ಜಾಲತಾಣಗಳ ಡ್ರಗ್ಸ್ ರೀತಿಯ ಮಾನಸಿಕ ಮೋಹ ಬೆಂಬಿಡದೆ ಇಂದಿನ ಆಧುನಿಕ ಜನತೆಯ ಚಿಂತನಾರ್ಹ ಯೋಚನಾ ಶಕ್ತಿ, ಆರೋಗ್ಯ , ಕೌಟುಂಬಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಒಟ್ಟಾರೆ ಜೀವನ ಶೈಲಿಯನ್ನೇ ಅಕ್ಷರಸಃ ನುಂಗಿಹಾಕಿವೆ! ಅಲ್ಲದೆ, ಇದು ಇಂದಿನ ಅನಿವಾರ್ಯವೆಂಬಂತೆ ಕಠೋರ ಸನ್ನಿವೇಶ ಹುಟ್ಟುಹಾಕಿವೆ.

ಒಂದೆಡೆ, ‘ಅತೀಯಾದ ಅಮೃತವೂ ವಿಷ’ವೆನ್ನುವಂತೆ, ಹಾಗೂ ಊಟದಲ್ಲಿ ‘ರುಚಿಗೆ ತಕ್ಕಷ್ಟು ಉಪ್ಪಿ’ರುವಂತೆ ಹಲವು ಒಳಿತು-ಕೆಡುಕಗಳ ನಡುವೆ ಎಲ್ಲವೂ ಹಿತಮಿತವಾಗಿ ಬಳಕೆಯಲ್ಲಿದ್ದರೆ ಚೆನ್ನ. ಅಲ್ವೇ? ಮೈ ಮನ ಆರೋಗ್ಯಕರವಾಗಿರುತ್ತೆ; ಜೀವನ ಉತ್ಸಾಹದಿಂದ ಕೂಡಿರುತ್ತೆ.
ಜೊತೆಗೆ, ಇತ್ತೀಚೆಗೆ ಜಗತ್ತಿನೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿರುವ ‘ಕೃತಕ ಬುದ್ಧಿಮತ್ತೆ’ (Artificial Intelligence – AI) ಹಾಗೂ ‘ಬಯೋಚಿಪ್’ ತಂತ್ರಜ್ಞಾನಗಳು. ಈ ಎರಡೂ ತಂತ್ರಜ್ಞಾನಗಳು ಬಹುತೇಕ ಮನುಷ್ಯನನ್ನ ಸಹ ಒಂದು ಸರಕಾಗಿ ನೋಡುವ ದೂರದೃಷ್ಟಿ ಹೊಂದಿವೆ ಎಂದರೆ ತಪ್ಪಾಗಲಿಕ್ಕಿಲ್ಲ! ತೀರ ಇತ್ತೀಚೆಗೆ, ತಂತ್ರಜ್ಞಾನ ಜಗತ್ತಿನ ಹೆಸರಾಂತ ಉದ್ಯಮಿ: ಎಲಾನ್ ಮಸ್ಕ್ ತಮ್ಮ ‘ನ್ಯೂರಾಲಿಂಕ್’ (Neuralink) ಸಂಸ್ಥೆಯ ಮೂಲಕ ಪ್ರಪಂಚದ ಮೊಟ್ಟ ಮೊದಲ ಪ್ರಯತ್ನವಾಗಿ ಆರೋಗ್ಯವಂತ ವ್ಯಕ್ತಿಯೊಬ್ಬರ ಮೆದುಳಿನಲ್ಲಿ ಪ್ರಾಯೋಗಿಕ – ‘ಮೊದಲ ಬಯೋಚಿಪ್’ ಅಳವಡಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ! ಇದುವರೆಗೂ, ಮೊಬೈಲ್ ನಲ್ಲಿ ಕೇವಲ ‘ಮೆಮೊರಿ ಕಾರ್ಡ್’ ಬಳಸಿ, ಅದರಲ್ಲಿ ಸಂಗ್ರಹಿಸಿದ ಮಾಹಿತಿ ಬೇಕೆಂದಾಗ ಆಲಿಸುವ, ನೋಡುವ ಪರಿಪಾಠದ ಪರಿಚಯವಿದ್ದ ನಮಗೆ, AI ಹಾಗೂ Biochip ತಂತ್ರಜ್ಞಾನಗಳ ಅವತಾರಗಳು ಊಹೆಗೂ ಮೀರಿದ್ದು ಅನ್ಸುತ್ತೆ ಕೂಡ.

ಆಗ, ಜಗತ್ತು ಹೇಗಿರಬೇಡ? ತಂತ್ರಜ್ಞಾನ ತೊರೆದು ಮನುಷ್ಯ, ಜೀವನ ಕಲ್ಪಿಸಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು, ಕೇವಲ ಮನುಷ್ಯನ ಅವಶ್ಯಕತೆಗಳಿಗೆ ಪೂರಕವಾಗಿರಬೇಕೆ ಹೊರತು; ಆತನನ್ನ ಆಳುವ ಸ್ಥಿತಿ ತಲುಪಬಾರದು! ಮುಂದಿನ ದಿನಗಳಲ್ಲಿ, ಮನುಷ್ಯ ಎದುರಿಸಬಹುದಾದ ಭಯಾನಕ ತಂತ್ರಜ್ಞಾನ ಸಂಕೋಲೆಗಳನ್ನು ಕುರಿತು ಚರ್ಚಿಸುವ ಅಗತ್ಯ ಇಂದಿನ ತುರ್ತು ಅನಿವಾರ್ಯ. ಆದರೆ, ಎಲ್ಲವೂ ಸಲೀಸಾಗಿ ಕೈಗೆಟುಕುವ ಇಂದಿನ ದಿನಗಳಲಿ, ಅತಿಯಾಗಿ ಮಿತಿಮೀರಿರುವ ಅನುಕೂಲಗಳು ಅಮೂಲ್ಯ ಖುಷಿಯ ಕ್ಷಣಗಳನ್ನು ಎಂದಿಗೂ ನೀಡಲಾರವು.

ಬದಲಿಗೆ, ಪ್ರತಿಷ್ಠೆಯ ಹೆಮ್ಮರಗಳಾಗಿ, ಜನತೆ ನಾಲ್ಕು ದಿನದ ಈ ಬಾಳಲಿ ಏನೋ ಬಹುದೊಡ್ಡ ಸಾಧನೆಗೈದವರಂತೆ, ಯಂತ್ರಮಾನವರಂತೆ ಬೀಗುವವರೆ!!? ಮೂಲಭೂತವಾಗಿ, ಮಾನವ ಸಹಿತ ಸಕಲ ಜೀವ-ಸಂಕುಲವೂ ವಾಸಯೋಗ್ಯ ಸ್ವಚ್ಛಂದ ಭೂಮಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಭೂಮಿಯಲ್ಲಿ, ಮಣ್ಣಿನ ಫಲವತ್ತತೆ ಹಾಗೂ ನೀರು ಸಂರಕ್ಷಿಸದೆ; ಗಿಡ-ಮರ ಬೆಳೆಸದೆ; ಹಸಿರು ಹೆಚ್ಚಿಸದೆ, ಮತ್ತು ಪರಿಸರ ಸಮತೋಲನ ಕಾಪಾಡದೆ; ಕೇವಲ ತಂತ್ರಜ್ಞಾನ ತಲೆಯಲಿ ಹೊತ್ತು, ಮನುಷ್ಯ ಉತ್ತಮ ಆಹಾರ, ಆರೋಗ್ಯ ಮತ್ತು ಜೀವನ ಕಟ್ಟಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ಸಮರೋಪಾದಿಯಲ್ಲಿ, ಜನತೆ ಸ್ವ ಇಚ್ಛೆಯಿಂದ ಹಳ್ಳಿ-ಹಳ್ಳಿಗಳಿಂದ, ನಗರಗಳು, ಬೆಟ್ಟ-ಗುಡ್ಡಗಳಲ್ಲೆಡೆ ಬೃಹತ್ ಸಂಖ್ಯೆಯಲ್ಲಿ ಸಸಿಗಳನ್ನ ನೆಟ್ಟು, ಪಾಲನೆ-ಪೋಷಣೆಗೈಯ್ಯುವ ಚಳುವಳಿ ರೂಪದ ಆಂದೋಲನ ದೇಶಾದ್ಯಂತ ಅತ್ಯಂತ ತ್ವರಿತವಾಗಿ ಕೈಗೂಡಬೇಕು. ಈ ನಿಟ್ಟಿನಲ್ಲಿ, ಎಲ್ಲರೂ ಕೈಜೋಡಿಸಬೇಕು.

(ಲೇಖಕರು : ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ15 mins ago

ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!

ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ...

ದಿನದ ಸುದ್ದಿ41 mins ago

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ...

ದಿನದ ಸುದ್ದಿ3 hours ago

ಕವಿತೆ | ಒಂದು ಕಪ್ ಕಾಫಿ

ಲಕ್ಕೂರು ಆನಂದ್ ಕೊನೆಯ ಸಾರಿ ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ? ನಾನು ತಪ್ಪು ಮಾಡಿದೆನೊ, ನೀನು ತಪ್ಪು ಮಾಡಿದೆಯೊ, ಬಿಟ್ಟು ಬಿಡೋಣ: ಕೊನೆಯ ಸಾರಿ...

ದಿನದ ಸುದ್ದಿ4 hours ago

ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ ಚುನಾವಣೆ ಪ್ರಯುಕ್ತ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆಯನ್ನು ಬೆಂಗಳೂರಿನ ಜೆಪಿ...

ದಿನದ ಸುದ್ದಿ12 hours ago

ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು

ರುದ್ರಪ್ಪ ಹನಗವಾಡಿ ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ, ಕುವೆಂಪು ಅವರ ಮಾನಸಪುತ್ರರೆಂದೇ ಖ್ಯಾತರಾಗಿದ್ದ ಕನ್ನಡದ ಗದ್ಯ ಬರಹಗಾರ ಪ್ರೊ. ದೇ.ಜ.ಗೌ. ಅವರು ಎರಡು ಅವಧಿಗೆ ಉಪಕುಲಪತಿಗಳಾಗಿದ್ದರು. ಅವರ...

ದಿನದ ಸುದ್ದಿ1 day ago

ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ...

ದಿನದ ಸುದ್ದಿ1 day ago

ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸುದ್ದಿದಿನ,ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿ ಆರೋಪಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೋಪಿಗೆ ಮೂರ್ಛೆ ರೋಗವಿದ್ದು...

ಕ್ರೀಡೆ1 day ago

ಮಧ್ಯಾಹ್ನದ ಪ್ರಮುಖ ಸುದ್ದಿಗಳು 

ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು  ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ...

ದಿನದ ಸುದ್ದಿ2 days ago

ಈ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆ

ಸುದ್ದಿದಿನ ಡೆಸ್ಕ್ ; ರಾಜ್ಯದ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ...

ದಿನದ ಸುದ್ದಿ2 days ago

ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ ಡೆಸ್ಕ್ : ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ...

Trending