ಲೈಫ್ ಸ್ಟೈಲ್
‘ತುಳಸಿ’ ಮನೆ ಮದ್ದು..!
ಸುದ್ದಿದಿನ ಡೆಸ್ಕ್ : ತುಳಸಿ ಎಂದರೆ ನಮಗೆ ಅದು ಪೂಜೆಯಲ್ಲಿ ಅಥವಾ ಆಯುರ್ವೇದದಲ್ಲಿ ಮಾತ್ರ ಬಳಸುತ್ತಾರೆ ಅಂದುಕೊಂಡಿದ್ದೇವೆ.ಅದರೆ, ತುಳಸಿಯನ್ನು ದೊಡ್ಡ ದೊಡ್ಡ ಕಂಪನಿಗಳು ಅವರು ತಯಾರಿಸುವ ಸೋಪ್, ಕ್ರೀಮ್ ಗಳಲ್ಲಿ ಬಳಸುತ್ತಾರೆ. ನಾವು ಅದನ್ನು ಪೂಜೆಗೆ ಮಾತ್ರ ಬಳಸುತ್ತೀವಿ. ಅದರಿಂದ ಅಗುವ ಮನೆ ಮದ್ದಿನ ಬಗ್ಗೆ ತಿಳಿದರೆ ಅದನ್ನು ನಮ್ಮ ಮನೆಯಲ್ಲಿ ಹೆಚ್ಚಾಗಿ ಬೆಳೆಸಿ ಉಪಯೋಗಿಸ ಬಹುದು.
ಉಪಯೋಗಗಳು
- ತುಳಸಿ ಗಿಡದ ಕಾಂಡದಿಂದ ಹುಳುಕಡ್ಡಿಯ ಭಾಗವನ್ನು ಚೆನ್ನಾಗಿ ಕೆರೆದು ಅನಂತರ ತುಳಸಿ ಸೊಪ್ಪಿನ ಕಷಾಯ ಮಾಡಿಕೊಂಡು ಅದರಿಂದ ಹುಳುಕಡ್ಡಿಯ ಸ್ಥಾನವನ್ನು ತೊಳೆಯಬೇಕು. ಅದಾದ ನಂತರ ತುಳಸಿ ಸೊಪ್ಪನ್ನು ಚೆನ್ನಾಗಿ ಅರೆದ ಹುಳುಕಡ್ಡಿಯ ಭಾಗಕ್ಕೆ ಲೇಪಿಸುವುದರಿಂದ ಶೀಘ್ರವೇ ಗುಣ ಕಂಡುಬರುವುದು.
- ತುಳಸಿ ಗಿಡದ ಹಸಿ ಬೇರಿನಿಂದ ಗಂಧವನ್ನು ತೆಗೆದು ಚೇಳು ಕುಟುಕಿದ ಸ್ಥಾನಕ್ಕೆ ಲೇಪಿಸುವುದರಿಂದ ಚೇಳಿನ ವಿಷ ಇಳಿದು ಹೋಗುವುದು.
- ಕಿವಿಯೊಳಗೆ ಹುಣ್ಣಾಗಿದ್ದರೆ ತುಳಸಿ ಎಲೆಯ ರಸವನ್ನು ತೆಗೆದು ಒಂದೆರಡು ತೊಟ್ಟು ರಸವನ್ನು ಕಿವಿಗೆ ಹಾಕುವುದಿಲ್ಲ ಶೀಘ್ರವೇ ಗುಣ ಕಂಡು ಬರುವುದು.
- ಕಿವಿಯಲ್ಲಿ ನೋವಿದ್ದರೆ ತುಳಸಿ ಎಲೆಗಳ ರಸವನ್ನು ಕಿವಿಗೆ ಹಿಂಡುತ್ತಿದ್ದರೆ ನೋವು ಮಾಯವಾಗುವುದು.
- ನೆಗಡಿ ವಾಸಿಯಾಗಲು ತುಳಸಿ ಸೊಪ್ಪಿನ ಕಷಾಯವನ್ನು ತಯಾರಿಸಿ ಅದಕ್ಕೆ ಜೇನುತುಪ್ಪ ಸೇರಿಸಿ ಸೇವಿಸಬೇಕು.
- ಅತಿಯಾದ ಕೆಮ್ಮು ನಿವಾರಣೆಗೆ ಶ್ರೀತುಳಸಿ ರಸ, ಬೆಳ್ಳುಳ್ಳಿ ರಸ ಹಾಗೂ ಜೇನುತುಪ್ಪವನ್ನು ಸಮ ಪ್ರಮಾಣದಲ್ಲಿ ಮಾಡಿಕೊಂಡ ಮೂರು ಗಂಟೆಗಳಿಗೆ ಒಂದು ಸಾರಿ ಒಂದು ಟೀ ಚಮಚದಷ್ಟು ಸೇವಿಸುತ್ತಿದ್ದರೆ ಕೆಮ್ಮು ನಿಂತು ಹೋಗುವುದು.
- ಜ್ವರದಿಂದ ಕೂಡಿದ ಕೆಮ್ಮಿಗೆ ತುಳಸಿ ರಸದಲ್ಲಿ ಕಾಳುಮೆಣಸಿನ ಚೂರ್ಣವನ್ನು ಕಲಸಿ ಸೇವಿಸುವುದರಿಂದ ಗುಣ ಕಂಡುಬರುತ್ತದೆ.
- ಕಫ ನಿವಾರಣೆಗೆ ತುಳಸಿ ಹೂವುಗಳನ್ನು ಈರುಳ್ಳಿ ರಸ, ಶುಂಠಿ ರಸ ಮತ್ತು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಕಫ ನಿವಾರಣೆಯಾಗುತ್ತದೆ.
- ಮಲೇರಿಯಾ ಜ್ವರಕ್ಕೆ ಕೃಷ್ಣ ತುಳಸಿ ಸೊಪ್ಪಿನ ರಸವನ್ನು ತೆಗೆದು ಮೈಗೆ ತಿಕ್ಕಿ ಮಾಲೀಷ್ ಮಾಡುವುದರಿಂದ ಛಳಿ ನಿಲ್ಲುವುದು ಹಾಗೂ ತುಳಸಿ ರಸದೊಂದಿಗೆ ಕಾಳು ಮೆಣಸಿನ ಪುಡಿ ಸೇವಿಸುವುದರಿಂದ ಜ್ವರ ಗುಣವಾಗುವುದು.
- ಶ್ರೀತುಳಸಿ ಕಷಾಯವನ್ನು ತಯಾರಿಸಿ ಒಂದು ಟೀ ಚಮಚದಷ್ಟು ರಸವನ್ನು ದಿನಕ್ಕೆ ಮೂರು ಬಾರಿಯಂತೆ ನಾಲ್ಕೈದು ದಿನಗಳ ಕಾಲ ಸೇವಿಸುತ್ತಿದ್ದರೆ ಶ್ವಾಸನಳಿಕಾ ದಾಹ ಗುಣವಾಗುತ್ತದೆ.
- ಒಂದು ಟೀ ಚಮಚ ತುಳಸಿ ರಸವನ್ನು ದಿನಕ್ಕೆ ಎರಡು ಬಾರಿಯಂತೆ ಎರಡು ಮೂರು ದಿನಗಳ ಕಾಲ ಸೇವಿಸುವುದರಿಂದ ಅಜೀರ್ಣ ನಿವಾರಣೆಯಾಗುವುದು.
- ಶ್ರೀತುಳಸಿ ಸೊಪ್ಪಿನ ಕಷಾಯ ತಯಾರಿಸಿ ದಿನಕ್ಕೆ ಮೂರು ಬಾರಿ ಸೇವಿಸುವುದರಿಂದ ಬೆಳಗ್ಗೆ ಎದ್ದಾಗ ಉಂಟಾಗುವ ಅಸ್ವಸ್ಥತೆ ದೂರವಾಗುವುದು.
- ತುಳಸಿ ರಸವನ್ನು ಗಂಧದೊಂದಿಗೆ ತೇಯ್ದು ನೆತ್ತಿಗೆ ಹಚ್ಚುವುದರಿಂದ ತಲೆನೋವು ಉಪಶಮನವಾಗುತ್ತದೆ.
- ತುಳಸಿ ರಸವನ್ನು ಜೇನಿನೊಂದಿಗೆ ನಿಯಮಿತವಾಗಿ 6 ತಿಂಗಳು ತೆಗೆದುಕೊಂಡಲ್ಲಿ ಮೂತ್ರದಲ್ಲಿನ ಕಲ್ಲಿನ ಬಾಧೆ ಕಡಿಮೆಯಾಗುತ್ತದೆ.
- ತುಳಸಿಯ ಎಲೆಗಳು ನಮ್ಮ ಬುದ್ಧಿ ಶಕ್ತಿಯನ್ನು ಚುರುಕುಗೊಳಿಸುತ್ತದೆ ಹಾಗೂ ಉದರ ಬಾಧೆಗಳನ್ನು ನಿವಾರಿಸಿ ಶಕ್ತಿ ಕೊಡುತ್ತದೆ.
ಸುದ್ದಿದಿನ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


