ದಿನದ ಸುದ್ದಿ

ಏ. 18ರಿಂದ 22 ರವರೆಗೆ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಆರೋಗ್ಯ ಮೇಳ ಆಯೋಜನೆ

Published

on

ಸುದ್ದಿದಿನ ಡೆಸ್ಕ್ : ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ್ ಕಾರ್ಯಕ್ರಮ ಪ್ರಾರಂಭಿಸಿದ ನಾಲ್ಕನೇ ವರ್ಷದ ಅಂಗವಾಗಿ ಇದೇ ತಿಂಗಳ 18 ರಿಂದ 22 ರವರೆಗೆ ರಾಜ್ಯದ ಎಲ್ಲಾ 176ತಾಲೂಕು ಕೇಂದ್ರಗಳಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಲಾಗುತ್ತಿದೆ.

ಸಾರ್ವಜನಿಕರಿಗೆ ರೋಗ ಪತ್ತೆ, ಚಿಕಿತ್ಸೆ ಹಾಗೂ ಆರೋಗ್ಯವರ್ಧಕ ಸಲಹೆಗಳನ್ನು ಉಚಿತವಾಗಿ ನೀಡುವ ಗುರಿಯೊಂದಿಗೆ ಈ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಮೇಳದಲ್ಲಿ ಆರೋಗ್ಯ ತಪಾಸಣೆಗೆ ನೋಂದಣಿ, ವೈಯಕ್ತಿಕ ಡಿಜಿಟಲ್ ಐಡಿ ರಚನೆಯನ್ನು ಉಚಿತವಾಗಿ ಮಾಡಲಾಗುವುದು. ತಜ್ಞ ವೈದ್ಯರಿಂದ ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್ ಮತ್ತಿತರ ಆಸಾಂಕ್ರಾಮಿಕ ರೋಗಗಳಿಗೆ ಉಚಿತ ತಪಾಸಣೆ ಮಾಡಿ, ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ.

ಆರೋಗ್ಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದಲ್ಲದೇ, ಉತ್ತಮ ಆಹಾರ ಸೇವನೆ ಬಗ್ಗೆ ಆಪ್ತ ಸಮಾಲೋಚನೆ, ವ್ಯಾಯಾಮ, ಯೋಗ ಮತ್ತು ಧ್ಯಾನ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಮೇಳದಲ್ಲಿ ಉಚಿತ ಮಾಹಿತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version