ದಿನದ ಸುದ್ದಿ
ಪೆಟ್ರೋ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಪೋಟ ; 6 ಮಂದಿ ಸಜೀವ ದಹನ
ಸುದ್ದಿದಿನ ಡೆಸ್ಕ್ : ಉತ್ತರಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪೆಟ್ರೋ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಸಜೀವ ದಹನವಾಗಿದ್ದಾರೆ.
ಬಿಜ್ನೊರ್‌ನಲ್ಲಿರುವ ಕಾರ್ಖಾನೆಯಲ್ಲಿ ಇಂದು ತೀವ್ರ ಸ್ಫೋಟ ಸಂಭವಿಸಿದ್ದರಿಂದ ಬೆಂಕಿ
ಹೊತ್ತಿ ಉರಿದಿದೆ. ಘಟನೆಯಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ
ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಬೀಡುಬಿಟ್ಟಿದ್ದು, ಬೆಂಕಿ ನಂದಿಸಲು ಹರಸಾಹಸ
ಪಡುತ್ತಿದ್ದಾರೆ. ತಮ್ಮವರನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.