ದಿನದ ಸುದ್ದಿ

ರಾಜ್ಯದಲ್ಲಿ ಗುರುವಾರ ಭಾರೀ ಬಿಸಿಗಾಳಿ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯದ 17 ಜಿಲ್ಲೆಗಳಲ್ಲಿ, ಇದೇ ಗುರುವಾರದವರೆಗೆ, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ, ಬಿಸಿಗಾಳಿ ಬೀಸಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಉಷ್ಣಾಂಶ ಗರಿಷ್ಠ ಮಟ್ಟ ತಲುಪಲಿದೆ ಎಂದು ಇಲಾಖೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version