ದಿನದ ಸುದ್ದಿ
ಭಾರೀ ಮಳೆ ; ಯೆಲ್ಲೊ ಅಲರ್ಟ್ ಘೋಷಣೆ
ಸುದ್ದಿದಿನ ಡೆಸ್ಕ್ : ರಾಜ್ಯದ ಒಳನಾಡಿನ ಹಲವೆಡೆ, ಕರಾವಳಿಯ ಅಲಲ್ಲಿ ಮಳೆಯಾಗಿದೆ. ರಾಣೆ ಬೆನ್ನೂರಿನಲ್ಲಿ 5, ಹಳಿಯಾಳ, ಆಳಂದ, ಬಾಳೆ ಹೊನ್ನೂರು, ಶಿವನಿ, ಎನ್ ಆರ್ ಪುರ, ಸಿ.ಆರ್. ಪಟ್ಟಣ, ಹುಂಚದಕಟ್ಟೆ, ಟಿ.ನರಸೀಪುರದಲ್ಲಿ ತಲಾ 4 ಸೆಂಟೀ ಮೀಟರ್ ಮಳೆಯಾಗಿದೆ.
ರಾಜ್ಯಾದ್ಯಂತ ಇಂದು ಮತ್ತು ನಾಳೆ ಬಾರಿ ಮಳೆಯಾಗುವ ಸಾಧ್ಯತೆ ಇದ್ದು, ಇಂದು ನಾಲ್ಕು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು 37.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮುನ್ಸೂಚನೆಯಂತೆ ದಕ್ಷಿಣ ಒಳನಾಡು, ಕರಾವಳಿಯ ಹಲವೆಡೆ, ಉತ್ತರ ಒಳನಾಡಿನ ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷಿತ.ಬೆಂಗಳೂರು ಹಾಗೂ ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತವಾರಣವಿರಲಿದ್ದು, ಗರಿಷ್ಠ 33, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243