ದಿನದ ಸುದ್ದಿ
ಭಾರೀ ಮಳೆ ; 17 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ
ಸುದ್ದಿದಿನ ಡೆಸ್ಕ್ : ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ವರುಣನ ಅಬ್ಬರ ಜೋರಾಗಿದೆ. ಈ ನಡುವೆ ಮುಂದಿನ ನಾಲ್ಕೈದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ. ಜೊತೆಗೆ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243