ದಿನದ ಸುದ್ದಿ

ಮುಂಗಾರು ಪ್ರವೇಶ | ಈ 7 ಜಿಲ್ಲೆಗಳಲ್ಲಿ ಭಾರೀ ಮಳೆ

Published

on

ಸುದ್ದಿದಿನ ಡೆಸ್ಕ್ : ರಾಜ್ಯದ ಕರಾವಳಿಗೆ ಮುಂಗಾರು ಪ್ರವೇಶವಾಗಿದ್ದು, 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗೆ ಆರೆಂಜ್ ಹಾಗೂ ರಾಮನಗರ, ತುಮಕೂರು, ಬೆಂಗಳೂರು ನಗರ, ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಈ ಬಾರಿ ಅವಧಿಗೆ ಮೊದಲೇ ರಾಜ್ಯಕ್ಕೆ ಮುಂಗಾರು ಮಾರುತ ಪ್ರವೇಶಿಸಿದೆ. ಹೀಗಾಗಿ ಹವಾಮಾನ ಇಲಾಖೆಯು ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ನಿನ್ನೆ ತಡರಾತ್ರಿವರೆಗೂ ಭಾರಿ ಮಳೆ ಸುರಿದಿದ್ದು, 29.6ಸೆಂ.ಮೀ ಮಳೆ ದಾಖಲಾಗಿದೆ. ಬೆಂಗಳೂರಿನ ಹೆಚ್‌ಎಎಲ್ ನಲ್ಲಿ 50.5ಸೆಂ.ಮೀ. ಮಳೆಯಾಗಿದೆ. ಇಂದು ಸಹ ಬೆಂಗಳೂರಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version