ದಿನದ ಸುದ್ದಿ
ಕರಾವಳಿಯಲ್ಲಿ ಭಾರಿ ಮಳೆ: ತುಂಬಿ ಹರಿಯುತ್ತಿದೆ ಭದ್ರಾ !
ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇತ್ತ ಭದ್ರಾ ಜಲಾಶಯ ತುಂಬಿ ಹರಿಯುತ್ತಿದೆ. ಜುಲೈ 10ರವರೆಗೆ ಭಾರಿ ಮಳೆ ಬೀಳುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆಯಿಂದ ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ಕೆಲವೆಡೆ ಭೂಮಿ ಕುಸಿತವಾಗಿದೆ. ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿದೆ. ಹಲವೆಡೆ ವಿದ್ಯುತ್ ಕಡಿತವಾಗಿದೆ ಎಂದು ವರದಿಯಾಗಿದೆ.