ದಿನದ ಸುದ್ದಿ
ರಾಜ್ಯದಲ್ಲಿ ಭಾರಿ ಮಳೆ ‘ರೆಡ್ ಅಲರ್ಟ್’ ಘೋಷಣೆ..!
ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ ಸೆ.14ರಿಂದ 17ರವರೆಗೆ ಭಾರಿ ಮಳೆಯಾಗಲಿದೆ. ಅದರಲ್ಲೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಸೆ.14ರಿಂದ ಸೆ.17ರವರೆಗೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿದ್ದು, ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸೆ.17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243