Connect with us

ದಿನದ ಸುದ್ದಿ

ರಾಜ್ಯಾದ್ಯಂತ ಮುಂದುವರೆದ ಮಳೆ ; ಹಲವೆಡೆ ಯೆಲ್ಲೋ ಆಲರ್ಟ್ ಘೋಷಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಭಾರೀ ವರ್ಷಧಾರೆ (HeavyRain ) ಮುಂದುವರೆದಿದೆ. ಬೆಂಗಳೂರು, ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ( Yellow Alert ) ಘೋಷಿಸಿದೆ.

ಅನೇಕ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದ ರಾಜ್ಯದ ಅನೇಕ ಭಾಗಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಅನೇಕ ಭಾಗಗಳಲ್ಲಿ ಮರಗಳು ಧರೆಗುರುಳಿವೆ, ವಿದ್ಯುತ್ ಪೂರೈಕೆಗೆ ಅಡಚಣೆಯಾಗಿದೆ. ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ.

ಬೆಂಗಳೂರು ನಗರದಲ್ಲಿ ಮಳೆ ಬೀಳುವ ಮುನ್ಸೂಚನೆ ಹಿನ್ನೆಲೆಯಲ್ಲಿ ಅನೇಕ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು, ರಾಮನಗರ ಮತ್ತು ಚನ್ನಪಟ್ಟಣ ಭಾಗಕ್ಕೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಾಮರ್ಶಿಸಿದ್ದರು. ಮಳೆಯಿಂದಾದ ಬೆಳೆ ನಷ್ಟ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಲಿದ್ದಾರೆ. ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸರಿ ಸುಮಾರು 16 ಜಿಲ್ಲೆಗಳು ಬಾಧಿತವಾಗಿವೆ.

ರಾಮನಗರ ಜಿಲ್ಲೆಯ ಮಳೆ ಬಾಧಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚನ್ನಪಟ್ಟಣದಲ್ಲಿ ಸ್ಥಾಪಿಸಲಾಗಿರುವ ’ಕಾಳಜಿ ಕೇಂದ್ರಕ್ಕೆ ಭೇಟಿ’ ನೀಡಿದ ಕುಮಾರಸ್ವಾಮಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಜಿಲ್ಲಾಡಳಿತ ನೆರೆಪಿಡಿತ ಸಂತ್ರಸ್ತರ ನೆರವಿಗೆ ಅಗತ್ಯ ಕ್ರಮ ವಹಿಸಿದೆ. ಕೆರೆಗಳ ದಂಡೆಯಲ್ಲಿರುವ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಗದಗ ಜಿಲ್ಲೆಯ ಮಳೆ ಬಾಧಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಪರಿಹಾರ ವಿತರಣೆಗೆ ತ್ವರಿತ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ | ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಐದು ಮನೆಗಳು ಕುಸಿದಿದ್ದು, ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ತಾಲ್ಲೂಕು ಆಡಳಿತಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಉಂಟಾದ ಹಾನಿಯ ಬಗ್ಗೆ ತುರ್ತಾಗಿ ಸಮೀಕ್ಷೆ ಕೈಗೊಂಡು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending