ದಿನದ ಸುದ್ದಿ
ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ !
ಸುದ್ದಿದಿನ ಡೆಸ್ಕ್: ಒಡಿಶಾದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರದಲ್ಲಿ ಮತ್ತೆ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ಮುಂದೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ.
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲ ಭಾಗದಲ್ಲಿ ಆ.13ರಿಂದ 17ರವರೆಗೆ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎರಡು ದಿನಗಳಿಂದ ಕೇರಳ ಮತ್ತು ಕರ್ನಾಟಕದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎಂದು ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401