Connect with us

ದಿನದ ಸುದ್ದಿ

ಶಿವಮೊಗ್ಗ | ಪ್ರವಾಹ ಪೀಡಿತರಿಗಾಗಿ ಜಿಲ್ಲಾಡಳಿತದಿಂದ ನೆರವು ಸ್ವೀಕೃತಿ ಕೇಂದ್ರ ಸ್ಥಾಪನೆ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರವಾಹ ಪೀಡಿತರಿಗೆ ನೆರವು ಒದಗಿಸಲು ಬಯಸುವ ದಾನಿಗಳಿಂದ ನೆರವು ಪಡೆಯಲು ಸ್ವೀಕೃತಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ಶಿವಕುಮಾರ್ ತಿಳಿಸಿದ್ದಾರೆ.ಶಿವಮೊಗ್ಗ ನಗರದಲ್ಲಿ ಮಹಾನಗರ ಪಾಲಿಕೆ ಕಚೇರಿ ಹಾಗೂ ಎಲ್ಲಾ ತಾಲೂಕುಗಳ ತಹಶೀಲ್ದಾರ್ ಕಚೇರಿಯಲ್ಲಿ ಸ್ವೀಕೃತಿ ಕೇಂದ್ರ ಆರಂಭಿಸಲಾಗಿದ್ದು, ಈ ಕೆಳಕಂಡ ಪ್ಯಾಕ್ ಮಾಡಲಾದ ಪಡಿತರ ಸಾಮಾಗ್ರಿಗಳು ಹಾಗೂ ಅಗತ್ಯ ವಸ್ತುಗಳನ್ನು ಸ್ವೀಕರಿಸಲಾಗುವುದು. ಸಿದ್ಧಪಡಿಸಿದ ಆಹಾರವನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬೇಕಾಗಿರುವ ಸಾಮಗ್ರಿಗಳು

ಬಿಸ್ಕಿಟ್ ಪ್ಯಾಕ್, ಬೇಳೆ ಕಾಳುಗಳು, ಮೆಣಸಿನ ಪುಡಿ, ಉಪ್ಪು, ಅಕ್ಕಿ, ಸಾಂಬಾರು ಪದಾರ್ಥಗಳು, ಸೋಪು, ಟೂತ್ ಪೇಸ್ಟ್ ಮತ್ತು ಬ್ರಷ್, ಅಡುಗೆ ಎಣ್ಣೆ, ಕೊಬ್ಬರಿ ಎಣ್ಣೆ, ಹಿಟ್ಟಿನ ಪ್ಯಾಕ್‍ಗಳು, ಹೊಸ ಸೀರೆಗಳು, ರವಿಕೆ, ನೈಟಿ, ಚೂಡಿದಾರ್, ಪ್ಯಾಂಟ್, ಶರ್ಟು, ಲುಂಗಿ, ಟವಲ್, ಒಳ ಉಡುಪುಗಳು, ಸ್ವೆಟರ್, ಬ್ಲಾಂಕೆಟ್‍ಗಳು, ಶೂ, ಚಪ್ಪಲ್‍ಗಳು, ಸೋಪ್ ಕಿಟ್‍ಗಳು, ಸ್ಯಾನಿಟರಿ ಪ್ಯಾಡ್‍ಗಳು, ಅಡುಗೆ ಪಾತ್ರೆ ಪಗಡೆ, ಒಲೆಗಳು, ರೈನ್ ಕೋಟ್, ಕೊಡೆ, ವಾಷಿಂಗ್ ಪೌಡರ್, ನೋಟ್ ಬುಕ್, ನವಜಾತ ಶಿಶು ಮತ್ತು ಬಾಣಂತಿಯರ ಅಗತ್ಯ ಸಾಮಾಗ್ರಿಗಳು, ಚಾಪೆ, ದಿಂಬು, ಸೊಳ್ಳೆ ಬತ್ತಿ, ಮೇಣದ ಬತ್ತಿ, ಬೆಂಕಿ ಪೆಟ್ಟಿಗೆ, ಟಾರ್ಪಾಲುಗಳು, ಜಾನುವಾರುಗಳಿಗೆ ಹಿಂಡಿ, ಹಗ್ಗ ಇತ್ಯಾದಿ.

ಸ್ವೀಕೃತಿ ಕೇಂದ್ರಗಳಲ್ಲಿ ಸಾಮಾಗ್ರಿಗಳನ್ನು ನೀಡಿ ಸ್ವೀಕೃತಿ ಪಡೆದುಕೊಳ್ಳಬಹುದಾಗಿದೆ. ಹಣ ನೀಡಲು ಅವಕಾಶ ಇರುವುದಿಲ್ಲ. ಯಾವುದೇ ಮಧ್ಯವರ್ತಿಗಳು ಜಿಲ್ಲಾಡಳಿತದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ದುರ್ಬಳಕೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಪ್ರವಾಹ ಪೀಡಿತರಿಗೆ ಹಣದ ರೂಪದಲ್ಲಿ ನೆರವು ನೀಡಲು ಬಯಸುವವರು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ನೇರವಾಗಿ ಸಲ್ಲಿಕೆ ಮಾಡಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending