ದಿನದ ಸುದ್ದಿ
ಮುಂದಿನ 10 ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆ

ಸುದ್ದಿದಿನ ಡೆಸ್ಕ್ : ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೇರಳ, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಮತ್ತಿತರ ಕೇಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
ಕೇರಳದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಮತ್ತು ನಾಳೆ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ರಕ್ಷಣಾ ಪಡೆಗಳು ಸನ್ನದ್ಧವಾಗಿದ್ದು, ಇತರೆ ಪರಿಹಾರೋಪಾಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಚಿತ್ರದುರ್ಗಗಳಲ್ಲಿ ಆರೆಂಜ್ ಅಲರ್ಟ್, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ಹವಾಮಾನ ಇಲಾಖೆ ನಿರ್ದೇಶಕರಾದ ಗೀತಾ ಅಗ್ನಿಹೋತ್ರಿ ಆಕಾಶವಾಣಿಯೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಪ್ರಾಂತ್ಯದಲ್ಲಿ ನೈಋತ್ಯ ಮುಂಗಾರು ಹೆಚ್ಚಾಗಿದೆ. ಮುಂದಿನ 10 ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಕಾರವಾರ ಕರಾವಳಿ ಪ್ರಾಂತ್ಯದಲ್ಲಿ ನಿನ್ನೆ 18 ಸೆಂಟಿಮೀಟರ್ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲಾಡಳಿತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲಾ-ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.
ಮಳೆಯಿಂದಾಗಿ ಸಂಭವಿಸಬಹುದಾದ ವಿಪತ್ತುಗಳನ್ನು ತಡೆಗಟ್ಟಲು ವಿಪತ್ತು ನಿರ್ವಹಣಾ ಪ್ರಾಧಿಕಾರ ತಂಡವನ್ನು ರಚಿಸಿದೆ. ಅಗತ್ಯವಿದ್ದಲ್ಲಿ 1022ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದೆಂದು ಸೂಚಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೇಸಿಗೆ ವಾಲಿಬಾಲ್ ತರಬೇತಿ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಟಿ ಸ್ಟಾರ್ ವಾಲಿಬಾಲ್ ಕ್ಲಬ್, ಫ್ರೆಂಡ್ಸ್ ಸ್ಪೋಟ್ಸ್ ಕ್ಲಬ್ ಹಾಗೂ ಗೋಲ್ಡನ್ ಈಗಲ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರವನ್ನು ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ 6.30 ರವರೆಗೆ ಆಯೋಜಿಸಲಾಗಿದೆ.
ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಎಂ.ಎಸ್. ಜಮಾ ಅಹಮ್ಮದ್-ಮೊ.ನಂ: 9141091590, ದರ್ಶನ್ ಮೊ.ನಂ: 8147842647 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ರೈತರ ಜಮೀನಿಗೆ ಕೆರೆ ಮಣ್ಣು ಸಾಗಿಸಲು ಅವಕಾಶ ಕಲ್ಪಿಸಿ ; ಅಧಿಕಾರಿಗಳಿಗೆ ಡಿಸಿ ಸೂಚನೆ

ಸುದ್ದಿದಿನ,ದಾವಣಗೆರೆ:ಕೆರೆಯಲ್ಲಿನ ಮಣ್ಣನ್ನು ರೈತರ ಜಮೀನುಗಳಿಗೆ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿ, ಮಣ್ಣು ತೆಗೆಯಲು ಸ್ಥಳವನ್ನು ಗುರುತು ಮಾಡಿಕೊಡುವ ಜವಾಬ್ದಾರಿ ಆಯಾ ಇಲಾಖೆ ಅಧಿಕಾರಿಗಳದ್ದಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.
ಅವರು ಸೋಮವಾರ (ಏ.7) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆ ಒತ್ತುವರಿ ತೆರವು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆ ಕಾಲದಲ್ಲಿ ಕೆರೆಯ ಮಣ್ಣನ್ನು ರೈತರ ಜಮೀನುಗಳಿಗೆ ನೀಡುವುದರಿಂದ ಹೂಳೆತ್ತಿದಂತಾಗುತ್ತದೆ. ಮತ್ತು ಮಳೆಗಾಲದಲ್ಲಿ ಕೆರೆಯಲ್ಲಿ ನೀರಿನ ಸಂಗ್ರಹ ಹೆಚ್ಚು ಮಾಡಲು ಅವಕಾಶ ಇದ್ದು ರೈತರ ತೋಟ, ಜಮೀನುಗಳಿಗೆ ಹೊಸ ಮಣ್ಣು ಹಾಕವುದರಿಂದ ಬೆಳೆಯು ಉತ್ತಮವಾಗಿ ಬಂದು ರೈತರಿಗೂ ಅನುಕೂಲ, ಅಂತರ್ಜಲ ಮಟ್ಟವೂ ಹೆಚ್ಚಳವಾಗಲಿರುವುದರಿಂದ ಸ್ವಯಂ ಪ್ರೇರಿತವಾಗಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿ ಸಣ್ಣ ನೀರಾವರಿ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆ, ಜಿಲ್ಲಾ ಪಂಚಾಯತ್ ಕೆರೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಜಾಗ ಗುರುತಿಸಿ ರೈತರಿಗೆ ಹೂಳೆತ್ತಲು ಅವಕಾಶ ಮಾಡುವ ಕೆಲಸ ಮಾಡಬೇಕೆಂದು ತಿಳಿಸಿದರು.
ಕೆರೆ ಒತ್ತುವರಿ ತೆರವಿಗೆ ಕ್ರಮ
ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳ ವ್ಯಾಪ್ತಿಯಲ್ಲಿ 538 ಕೆರೆಗಳಿದ್ದು ಇದರಲ್ಲಿ ಸಣ್ಣ ನೀರಾವರಿ ಇಲಾಖೆಯ 72 ಕೆರೆಗಳಿವೆ. ಮತ್ತು ಶಾಂತಿಸಾಗರ ಮತ್ತು ಇತರೆ ನೀರಿನ ಸಂಗ್ರಹವಾಗುವ 22 ಕೆರೆಗಳು ಜಲಸಂಪನ್ಮೂಲ ಇಲಾಖೆಗೆ ಬರಲಿದ್ದು ಉಳಿದಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಹಾಗೂ ಗ್ರಾಮ ಪಂಚಾಯಿತಿ, ಅರಣ್ಯ ಇಲಾಖೆ ವ್ಯಾಪ್ತಿಯ ಕೆರೆಗಳಾಗಿವೆ. ಈ ಕೆರೆಗಳ ಒತ್ತುವರಿಯನ್ನು ತೆರವು ಮಾಡಲೇಬೇಕು.
ಶಾಂತಿಸಾಗರ ಕೆರೆಯು 5447.10 ಎಕರೆಯಷ್ಟಿದ್ದು ಇದರಲ್ಲಿ 280 ಎಕರೆಯಷ್ಟು ಒತ್ತುವರಿಯಾಗಿದೆ. ಈ ಕೆರೆ 45 ಕಿ.ಮೀ ಸುತ್ತಳತೆಯನ್ನು ಹೊಂದಿರುತ್ತದೆ. ಈ ಕೆರೆಯ ಒತ್ತುವರಿಯನ್ನು ತೆರವು ಮಾಡಲು ತಹಶೀಲ್ದಾರರು ಹಾಗೂ ಜಲಸಂಪ್ಮೂಲ ಇಲಾಖೆಯವರು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 72 ಕೆರೆಗಳಿಂದ 10807.27 ಎಕರೆ ವಿಸ್ತೀರ್ಣವಿದೆ. 39 ಕೆರೆಗಳ ಅಳತೆ ಮಾಡಿದ್ದು 33 ಕೆರೆಗಳು ಬಾಕಿ ಇವೆ. ಇದರಲ್ಲಿ 21 ಕೆರೆಗಳಿಂದ 262 ಎಕರೆ ಒತ್ತುವರಿಯಾಗಿದೆ ಎಂದು ಗುರುತಿಸಿ 20 ಕೆರೆಗಳ 254 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಒತ್ತುವರಿ ತೆರವಿಗೆ 1 ಕೆರೆ ಬಾಕಿ ಇದೆ. ಜಗಳೂರು ಕೆರೆ ಒತ್ತುವರಿಯನ್ನು ತೆರವು ಮಾಡುವ ಪ್ರಕರಣ ಹೈಕೋರ್ಟ್‍ನಲ್ಲಿದ್ದು ಪುನರ್ ಪರಿಶೀಲಿಸಲು ಆದೇಶವಾಗಿರುವುದರಿಂದ ಮತ್ತೆ ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ತಹಶೀಲ್ದಾರ್‍ಗೆ ಸೂಚನೆ ನೀಡಿದರು.
ಸಭೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರಣ್ಣನವರ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಅಭಿಷೇಕ್, ರೈತ ಮುಖಂಡರಾದ ಬಲ್ಲೂರು ರವಿಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಮುಖ್ಯಮಂತ್ರಿ ಪದಕ ; ಮುಖ್ಯ ಪೊಲೀಸ್ ಪೇದೆ ಕೊಟ್ರೇಶ್ ಅಯ್ಕೆ
-
ದಿನದ ಸುದ್ದಿ7 days ago
ಹೊಸ ಹಣಕಾಸು ವರ್ಷ ಆರಂಭ | ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ; ಇಲ್ಲದಿದ್ದರೆ ಭಾರೀ ದಂಡ
-
ದಿನದ ಸುದ್ದಿ5 days ago
ದಾವಣಗೆರೆ ವಿ.ವಿ 12ನೇ ಘಟಿಕೋತ್ಸವ | ವಿಶ್ವವಿದ್ಯಾಲಯಗಳಲ್ಲಿ 2500 ಹುದ್ದೆಗಳು ಖಾಲಿ ಇವೆ : ಸಚಿವ ಡಾ.ಎಂ.ಸಿ. ಸುಧಾಕರ್
-
ದಿನದ ಸುದ್ದಿ6 days ago
ಜನಪದ ಕಲೆ ಗ್ರಾಮೀಣ ಜನರ ಜೀವನಾಡಿ : ಪ್ರಾಚಾರ್ಯೆ ಡಾ.ಶಶಿಕಲಾ.ಎಸ್
-
ದಿನದ ಸುದ್ದಿ6 days ago
ದಾವಣಗೆರೆ | ವೃತ್ತಿಪರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂರ ಕಡೆಗಣನೆ, ಆಸ್ತಿ ಹಕ್ಕು ಕಸಿದುಕೊಳ್ಳುವ ಅಸ್ತ್ರ: ಸೈಯದ್ ಖಾಲಿದ್ ಅಹ್ಮದ್
-
ದಿನದ ಸುದ್ದಿ4 days ago
ದಾವಣಗೆರೆ | ನಾಳೆ ಡಾ.ಬಾಬು ಜಗಜೀವನ ರಾಂ 118ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ4 days ago
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ