/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

​ಬಿಗ್ ಬ್ರೇಕಿಂಗ್: ಮಳೆ ಆರ್ಭಟಕ್ಕೆ 22 ಬಲಿ !

Published

on

ಸುದ್ದಿದಿನ ಡೆಸ್ಕ್: ಕೇರಳದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ೨೪ ಗಂಟೆಗಳಲ್ಲಿ ‌‌‌‌‌‌೨೨ ಮಂದಿ ಸಾವನ್ನಪ್ಪಿದ್ದು, ವರುಣನ ಆರ್ಭಟ ಮುಂದುವರಿದಿದೆ. ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ಇಬ್ಬರು ಮೃತ ಪಟ್ಟಿದ್ದಾರೆ.

ಎರ್ನಾಕುಲಂ ಜಿಲ್ಲೆಯಲ್ಲಿ ಮನ್ನೂರಿನಲ್ಲಿ ಮಳೆ ನೀರಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಕೊಚ್ಚಿಕೊಂಡು ಹೋಗಿದ್ದಾರೆ. ಕೇರಳದಲ್ಲಿ ಬುಧವಾರದಿಂದ ಭಾರಿ ಮಳೆ ಆಗುತ್ತಿರುವುದರಿಂದ ಪ್ರವಾಹ, ಭೂಕುಸಿತ ಉಂಟಾಗುತ್ತಿದೆ. ಭಾರಿ ಮಳೆ ಹಿನ್ನಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ. ಅಲ್ಲದೇ ಚಿರುತೋಣಿ ಜಲಾಶಯದ ನೀರು ಬಿಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವಾಯನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಭೂ ಸೇನಾ ದಳ ಬೀಡುಬಿಟ್ಟಿದೆ. ವಿಪತ್ತು ನಿರ್ವಹಣೆ ಕಾರ್ಯದಲ್ಲಿ ಎರಡು ಹೆಲಿಕಾಪ್ಟರ್ ಕಾರ್ಯಾಚರಣೆಯಲ್ಲಿವೆ. ಮಳೆ ಪೀಡಿತ ಜಿಲ್ಲೆಗಳಲ್ಲಿ ನೂರಕ್ಕೂ ಅಧಿಕ ಪೊಲೀಸ್ ಠಾಣೆ ತೆರೆಯಲಾಗಿದೆ. ತಿರುವನಂತಪುರಂ, ಅಲಪ್ಪುಝ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೊಜಿಕೋಡ್, ವಯಾನಾಡು, ಕಣ್ಣೂರು ಜಿಲ್ಲೆಗಳಲ್ಲಿ ರಿಲೀಫ್ ಕ್ಯಾಂಪ್ ತೆರೆಯಲಾಗಿದೆ.

Leave a Reply

Your email address will not be published. Required fields are marked *

Trending

Exit mobile version