ದಿನದ ಸುದ್ದಿ
ಅಸ್ಸಾಂನಲ್ಲಿ ಭಾರಿ ಮಳೆ ಹಿನ್ನೆಲೆ; ಕೇಂದ್ರದಿಂದ ಅಗತ್ಯ ನೆರವು : ಗೃಹ ಸಚಿವ ಅಮಿತ್ ಶಾ
ಸುದ್ದಿದಿನ ಡೆಸ್ಕ್ : ಅಸ್ಸಾಂನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಗೃಹ ಸಚಿವ ಅಮಿತ್ ಶಾ ಕಳವಳ ವ್ಯಕ್ತ ಪಡಿಸಿದ್ದಾರೆ.
ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಮತ್ತು ಈಗಾಗಲೇ ಎನ್ ಡಿ ಆರ್ ಎಫ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
Concerned about the situation in the wake of heavy rainfall in parts of Assam. Spoke to CM Shri @himantabiswa to take stock of the situation. NDRF teams are already been deployed. Assured all possible help from the central government.
— Amit Shah (@AmitShah) May 17, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಡಿನೆಲ್ಲೆಡೆ ಆಯುಧಪೂಜೆ ಸಡಗರ; ಮೈಸೂರು ಅರಮನೆಯಲ್ಲಿ ಪಟ್ಟದ ಹಸು, ಆನೆ, ಆಯುಧಗಳಿಗೆ ಯದುವೀರ್ ಒಡೆಯರ್ ಪೂಜೆ
ಸುದ್ದಿದಿನಡೆಸ್ಕ್:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿಯ 9ನೇ ದಿನವಾದ ಇಂದು ಸಾಂಪ್ರದಾಯಿಕವಾಗಿ ಆಯುಧಪೂಜೆ ನೆರವೇರಿತು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧಪೂಜೆ ನೆರವೇರಿಸಿದರು.
ಅರಮನೆ ಮುಂಭಾಗದಲ್ಲಿ ಪಟ್ಟದ ಹಸು, ಆನೆ, ಕುದುರೆ, ಒಂಟೆಗಳಿಗೆ, ಪಲ್ಲಕ್ಕಿ ಹಾಗೂ ರಾಜರ ಕಾರುಗಳಿಗೆ ಪೂಜೆ ಸಲ್ಲಿಸಿದರು. ಅರಮನೆಯ ಪೂರ್ವಜರು ಬಳಸುತ್ತಿದ್ದ ಆಯುಧಗಳನ್ನು ಸ್ವಚ್ಛಗೊಳಿಸಿ, ಅವುಗಳಿಗೂ ಪೂಜೆ ನೆರವೇರಿಸಲಾಯಿತು. ದಸರಾ ವೈಭವ ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಲಕ್ಷಾಂತರ ಪ್ರವಾಸಿಗರು ಆಗಮಿಸಿದ್ದಾರೆ.
ರಾಜ್ಯಾದ್ಯಂತ ನವರಾತ್ರಿಯ 9ನೇ ದಿನವಾದ ಇಂದು ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಆಯುಧಪೂಜೆ ಮತ್ತು ದಸರಾ ಮಹೋತ್ಸವದ ಸಂಭ್ರಮ ಇಮ್ಮಡಿಗೊಂಡಿದೆ. ಆಯುಧ ಪೂಜೆಯ ಭಾಗವಾಗಿ ಬೆಳಿಗ್ಗೆಯಿಂದ ಜನರು ವಾಹನಗಳನ್ನು ತೊಳೆದು ಹೂವು, ಬಾಳೆಕಂದುಗಳನ್ನು ಕಟ್ಟಿ ಪೂಜೆ ಸಲ್ಲಿಸುತ್ತಿರುವುದು ಸಾಮಾನ್ಯವಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಆಯುಧಪೂಜೆಯನ್ನು ಶ್ರಧಾ ಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ತಮ್ಮ ವಾಹನಗಳಿಗೆ ವಿವಿಧ ಬಗೆಯ ಹೂವುಗಳಿಂದ ಸಿಂಗರಿಸಿ ಪೂಜೆ ಸಲ್ಲಿಸಿದರು. ಕೋಲಾರ ಜಿಲ್ಲಾದ್ಯಂತ ಆಯುಧ ಪೂಜೆ ಹಾಗೂ ದಸರಾ ಹಬ್ಬವನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಯುಧ ಪೂಜೆ ಹಿನ್ನಲೆ ಜಿಲ್ಲೆಯ ಹಲವು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಆಯುಧಪೂಜೆ ಸಂಭ್ರಮ ಇಮ್ಮಡಿಗೊಂಡಿದ್ದು, ಕಾಫಿ ತೋಟಗಳಲ್ಲಿ ಮಾಲೀಕರು ತೋಟದ ಯಂತ್ರೋಪಕರಣಗಳನ್ನು ಶೃಂಗರಿಸಿ ಪೂಜೆ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಹಾವೇರಿ ಜಿಲ್ಲೆಯಾದ್ಯಂತ ಆಯುಧ ಪೂಜೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಉದ್ಯಮಿ ರತನ್ ಟಾಟಾ ನಿಧನ; ಗಣ್ಯರಿಂದ ಸಂತಾಪ
ಸುದ್ದಿದಿನಡೆಸ್ಕ್:ದೇಶದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮತ್ತು ಉದ್ಯಮಿಗಳು ಸಂತಾಪ ಸೂಚಿಸಿದ್ದಾರೆ.
ಟಾಟಾ ಸಮೂಹ ಸಂಸ್ಥೆಗಳ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಅವರು, ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಬೆಳಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಕಾರಣ, ಅವರನ್ನು ಮುಂಬೈಗೆ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಅವರು ನಿಧನರಾದರು.
ರತನ್ ಟಾಟಾ ಅವರ ನಿಧನದಿಂದ, ಭಾರತವು ಸಾಂಸ್ಥಿಕ ಬೆಳವಣಿಗೆಯನ್ನು ರಾಷ್ಟ್ರ ನಿರ್ಮಾಣದೊಂದಿಗೆ ಮತ್ತು ಶ್ರೇಷ್ಠತೆಯನ್ನು ನೀತಿಯೊಂದಿಗೆ ಸಂಯೋಜಿಸಿದ ವ್ಯಕ್ತಿಯನ್ನು ಕಳೆದುಕೊಂಡಿದೆ. ರತನ್ ಟಾಟಾ ಅವರು ಶ್ರೇಷ್ಠ ಟಾಟಾ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ದರು ಮತ್ತು ಹೆಚ್ಚು ಪ್ರಭಾವಶಾಲಿ ಜಾಗತಿಕ ಉಪಸ್ಥಿತಿಯನ್ನು ನೀಡಿದರು. ಅನುಭವಿ ವೃತ್ತಿಪರರು ಹಾಗೂ ಯುವ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡಿದರು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ರತನ್ ಟಾಟಾ ಅವರ ನಿಧನದಿಂದಾಗಿ ತೀವ್ರ ದುಃಖವಾಗಿದೆ. ಅವರು ದೊಡ್ಡ ಕನಸು ಕಾಣುವ ಮತ್ತು ಸಮಾಜಕ್ಕೆ ಮರಳಿ ನೀಡುವ ಉತ್ಸಾಹವನ್ನು ಹೊಂದಿದ್ದರು. ದೇಶದಲ್ಲಿ ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ ಮತ್ತು ಪ್ರಾಣಿ ಕಲ್ಯಾಣದಂತಹ ಪ್ರಮುಖ ಕ್ಷೇತ್ರಗಳಲ್ಲಿ ಟಾಟಾ ಸಮೂಹ ಮುಂಚೂಣಿಯಲ್ಲಿದೆ. ರತನ್ ಟಾಟಾ ಅವರು ಅಸಾಧಾರಣ ಮತ್ತು ದೂರದೃಷ್ಟಿಯ ಉದ್ಯಮಿಯಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಅ.12ರಂದು ಮದ್ಯ ಮಾರಾಟ ನಿಷೇಧ
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಅಕ್ಟೋಬರ್ 11 ಮತ್ತು 12 ರಂದು ಆಯುಧ ಪೂಜೆ ಮತ್ತು ವಿಜಯ ದಶಮಿ ಹಬ್ಬ ಆಚರಿಸಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 12 ರ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ6 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ5 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ