ದಿನದ ಸುದ್ದಿ

ಕರ್ನಾಟಕ, ಕೇರಳ, ಮಹಾರಾಷ್ಟ್ರಗಳಲ್ಲಿ ಭಾರೀ ಮಳೆ; ಮುನ್ನೆಚ್ಚರಿಕೆ ಘೋಷಣೆ; ಎನ್‌ಡಿಆರ್‌ಎಫ್ ತಂಡಗಳು ಸನ್ನದ್ಧ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರೀ ಮಳೆಯಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಮಹಾರಾಷ್ಟ್ರದಾದ್ಯಂತ ಸಾಕಷ್ಟು ಮಳೆಯಾಗುತ್ತಿದ್ದು, ಸಮುದ್ರ ತೀರದ ಪ್ರದೇಶಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಎನ್‌ಡಿಆರ್‌ಎಫ್ ಹಾಗೂ ಇನ್ನತರೆ ರಕ್ಷಣಾ ತಂಡಗಳು ಕಾರ್ಯಚರಣೆಗಾಗಿ ಸನ್ನದ್ಧವಾಗಿವೆ. ಮುಖ್ಯಮಂತ್ರಿ ಏಕನಾಥ್ ಸಿಂಧೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version