ದಿನದ ಸುದ್ದಿ

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ, ಯಲ್ಲೊ ಅಲರ್ಟ್ ಘೋಷಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಹಲವು ಕಡೆ ಮಳೆಯಾಗಿದೆ. ಮುಂದಿನ 72 ಗಂಟೆಗಳ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ನೀಡಲಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ನಡುವೆ ಹಲವು ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕೊಂಕಣ, ಗೋವಾ, ಉತ್ತರಾಖಂಡ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗುಜರಾತ್‌ನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಬಿಹಾರದಲ್ಲಿ ಗುಡುಗು ಸಹಿತ ಮಿಂಚು ಮತ್ತು ಬಿರುಗಾಳಿ ಸಹಿತ ಹಲವು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಅನೇಕ ರಾಜ್ಯಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version