ದಿನದ ಸುದ್ದಿ

ರಾಜ್ಯದ ವಿವಿಧೆಡೆ ಭಾರೀ ಮಳೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಈ ಮೂರು ಜಿಲ್ಲೆಯಲ್ಲಿ 204 ಮಿಲಿ ಮೀಟರ್ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿರುವುದರಿಂದ ಮತ್ತು ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಣೆಯಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಕಳಸ, ಎನ್.ಆರ್ ಪುರ, ಮೂಡಿಗೆರೆ ತಾಲೂಕುಗಳಲ್ಲಿ ಇಂದು ಕೂಡ ಮಳೆಯಾಗುತ್ತಿದೆ. ಮಳೆಯಿಂದ ಹಾನಿಯಾಗಿರುವ ಸ್ಥಳಗಳಿಗೆ ಶಾಸಕ ಟಿ.ಡಿ ರಾಜೇಗೌಡ ಭೇಟಿ ನೀಡಿ ಪರಿಶಿಲಿಸಿದ್ದಾರೆ.

ಜಿಲ್ಲೆಯಲ್ಲಿ ಇನ್ನೂ ಮೂರ್ನಾಲ್ಕು ದಿನ ಸಾಧಾರಣದಿಂದ ಬಾರಿ ಮಳೆಯಾಗುವ ಸಾಧ್ಯತೆ ಇದ್ದು, ನಾಳೆ ಆರೆಂಜ್ ಅಲರ್ಟ್ ಹಾಗು ನಾಡಿದ್ದು, ಯೆಲ್ಲೋ ಅಲಾರ್ಟ್ ಘೋಷಿಸಲಾಗಿದೆ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎ.ಟಿ. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version