Connect with us

ದಿನದ ಸುದ್ದಿ

ಮದ್ದೂರು | ಹೆಲ್ಮೆಟ್ ಜಾಗೃತಿ ಜಾಥಾ ಕ್ಕೆ ಚಾಲನೆ

Published

on

ಸುದ್ದಿದಿನ ಡೆಸ್ಕ್ : ಮದ್ದೂರು ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ಮತ್ತು ಸಂಚಾರ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಂಡ್ಯ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಾನವನ ದೇಹದಲ್ಲಿ ತಲೆಯು ಪ್ರಮುಖ ಅಂಗವಾಗಿದ್ದು ರಸ್ತೆ ಅಪಘಾತಗಳು ಸಂಭವಿಸಿದಾಗ ತಲೆಗೆ ಹೆಚ್ಚು ಪೆಟ್ಟು ಬಿಳುವುದರಿಂದ ತಲೆಯ ರಕ್ಷಣೆಗೆ ಹೆಲ್ಮೆಟ್ ಕಡ್ಡಾಯ ಹಾಕುವುದರಿಂದ ಸಾವನ್ನು ತಪ್ಪಿಸಬಹುದು. ಅದರಲ್ಲೂ ಮಂಡ್ಯ ಜಿಲ್ಲೆಯಲ್ಲಿ ವರ್ಷಕ್ಕೆ ರಸ್ತೆ ಅಪಘಾತದಲ್ಲಿ 350 ಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದು ಅತಿ ಹೆಚ್ಚು ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುತ್ತಿದ್ದು ತಲೆಗೆ ಹೆಲ್ಮೆಟ್ ಧರಿಸುವ ಮೂಲಕ ಸಾರ್ವಜನಿಕರು ಸಹಕರಿಸಲು ಕರೆ ನೀಡಿದರು.

ಹಾಗೂ ಪ್ರತಿ ತಾಲೂಕಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಇದು ಹಂತ ಹಂತವಾಗಿ ಜಾಗೃತಿ ಮೂಡಿಸಲಾಗುತ್ತದೆ ಮತ್ತು ನಾಡ ಹಬ್ಬ ದಸರಾ ಉತ್ಸವದ ಅಂಗವಾಗಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಧಿಕ ಸಂಖ್ಯೆಯ ವಾಹನಗಳು ಸಂಚರಿಸುವುದರಿಂದ ಸಾರ್ವಜನಿಕರು ಮೊಬೈಲ್ ಫೋನ್ ಬಳಕೆ ಮತ್ತು ಮಾಡಬಾರದು ಎಂದು ಮನವಿ ಮಾಡಿದರು. ನಂತರ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸಂಜಯ ವೃತ್ತದಿಂದ ಕೊಲ್ಲಿ ವೃತ್ತದ ವರಗೆ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮ ದ ವೇಳೆ ಡಿವೈಎಸ್ಪಿ ಎಚ್.ಎಂ.ಶೈಲೇಂದ್ರ ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್. ಸಂಚಾರಿ ಇನ್ಸ್ಪೆಕ್ಟರ್ ಮೋಹನ್ ಡಿ. ಪಟೇಲ್ ಪೋಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆ : ಜೀವಿತ ಪ್ರಮಾಣ ಪತ್ರ ಸಲ್ಲಿಕೆ

Published

on

ಸುದ್ದಿದಿನ,ದಾವಣಗೆರೆ:ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆಯಡಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಪಿಂಚಣಿದಾರರು ಪಿಂಚಣಿ ಪಡೆಯುತ್ತಿದ್ದು ಇದರಲ್ಲಿ 5577 ಪಿಂಚಣಿದಾರರು ಇದುವರೆಗೆ ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಿರುವುದಿಲ್ಲ. ಪಿಂಚಣಿದಾರರು ಜೀವಿತ ಪ್ರಮಾಣಪತ್ರವನ್ನು ಅಂಚೆ ಕಚೇರಿಯಲ್ಲಿ ಅಥವಾ ಬ್ಯಾಂಕ್‍ನಲ್ಲಿ ಸಲ್ಲಿಸಬಹುದು. ಅಥವಾ ತಮ್ಮ ಆಂಡ್ರಾಯ್ಡ್ ಮೊಬೈಲ್ ಪೋನ್ ಮೂಲಕ ಫೇಸ್ ಅಂಥೆಂಟಿಕೇಶನ್ ಟೆಕ್ನಾಲಜಿಯನ್ನು ಅಳವಡಿಸಿಕೊಂಡು ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬಹುದೆಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ ವಿದ್ಯುತ್ ಉತ್ಪಾದನೆಗೆ ಒತ್ತು; ಇಂಧನ ಸಚಿವ ಕೆ.ಜೆ.ಜಾರ್ಜ್

Published

on

ಸುದ್ದಿದಿನ,ದಾವಣಗೆರೆ:ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆದರೆ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದರು.

ರಾಜ್ಯದಲ್ಲಿ ಪ್ರತಿನಿತ್ಯ 18500 ಮೆಗಾವ್ಯಾಟ್ ಬೇಡಿಕೆ ಇದ್ದು ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದರಿಂದ ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯುತ್ ಬ್ಯಾಂಕಿಂಗ್ ಮಾಡಿಕೊಂಡು ಜೂನ್‍ನಿಂದ ಆ ರಾಜ್ಯಗಳಿಗೆ ಕರ್ನಾಟಕದಿಂದ ವಿದ್ಯುತ್ ನೀಡಿ ಬೇಸಿಗೆಯಲ್ಲಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಉದ್ದೇಶಿಸಲಾಗಿದೆ. ಗುಣಮಟ್ಟದ ವೋಲ್ಟೇಜ್‍ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ

ಕುಸುಮ್-ಸಿ ಯೋಜನೆಯ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಸೋಲಾರ್‍ನಿಂದದದದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಕುಸುಮ್ ಯೋಜನೆಯಡಿ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

3000 ಪವರ್ ಮ್ಯಾನ್ ನೇಮಕ

ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ. ಆದರೆ ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ, ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದರು.

ಎಸ್ಕಾಂಗಳು ನಷ್ಟದಲ್ಲಿಲ್ಲ

ಇಂಧನ ಇಲಾಖೆಯಲ್ಲಿನ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ, ಆದರೆ ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಕಂಪನಿಗಳಿಗೆ ಬರಬೇಕಾದ ಹಣ ಬಾಕಿ ಇದೆ. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುವ ಯೋಜನೆ ಇದ್ದು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಉದ್ದೇಶಿಸಿ ಇದನ್ನು ಪೈಲೆಟ್ ಕಾರ್ಯಕ್ರಮವಾಗಿ ರೂಪಿಸಲಾಗುತ್ತದೆ. ಪಂಚಾಯಿತಿಗಳು ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್‍ನ್ನು ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ ಸೋಲಾರ್ ಪ್ಯಾನಲ್ ಅಳವಡಿಸಿ ಗ್ರಿಡ್‍ಗೆ ವಿದ್ಯುತ್ ನೀಡಿ ಅಷ್ಟೆ ವಿದ್ಯುತ್‍ನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ವಿದ್ಯುತ್ ಉಳಿತಾಯವಾಗಲಿದೆ ಮತ್ತು ಪಂಚಾಯಿತಿಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದರು.

ವಿದ್ಯುತ್ ದರ ಪರಿಷ್ಕರಣೆ ಕೆಇಆರ್‍ಸಿಗೆ

ಎಲ್ಲಾ ಎಸ್ಕಾಂಗಳ ವಿದ್ಯುತ್ ದರ ಏರಿಕೆಯ ನಿರ್ಧಾರವನ್ನು ಕೆಇಆರ್‍ಸಿ ಮಾಡಲಿದೆ. ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆಯುವ ಮೂಲಕ ದರ ಏರಿಕೆ ನಿರ್ಣಯಗಳನ್ನು ಕೆಇಆರ್‍ಸಿ ನಿರ್ಧರಿಸಲಿದೆ. ಯಾರದೂ ಕೂಡ ಹಸ್ತಕ್ಷೇಪ ಇರುವುದಿಲ್ಲ, ಕಳೆದ ವರ್ಷ ಯಾವುದೇ ವಿದ್ಯುತ್ ದರ ಏರಿಕೆ ಮಾಡಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಜ್ಯೋತಿ

ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹಜ್ಯೋತಿ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸಲಿದ್ದು 200 ಯುನಿಟ್ ವರೆಗೆ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಇದನ್ನು ಅವರು ವರ್ಷದಲ್ಲಿ ಉಪಯೋಗಿಸುವ ಯುನಿಟ್‍ಗಳನ್ನಾಧರಿಸಿ ಹೆಚ್ಚುವರಿಯಾಗಿ ಶೇ 10 ರಷ್ಟು ಸೇರಿಸಿ ಬಳಕೆಯ ಯುನಿಟ್ ನಿಗದಿಯಾಗುತ್ತದೆ. ಆದರೆ 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ನೊಂದಣಿಯಾದ 433897 ಆರ್.ಆರ್.ಸಂಖ್ಯೆಗಳಿದ್ದು ವಿದ್ಯುತ್ ಸಂಪರ್ಕ ಪಡೆದ ಸ್ಥಾವರಗಳಲ್ಲಿ ಶೇ 88.93 ರಷ್ಟು ಗೃಹಜ್ಯೋತಿಯಲ್ಲಿವೆ. ಈ ಸ್ಥಾವರಗಳಿಗೆ 2023 ರ ಆಗಸ್ಟ್ ನಿಂದ 2024 ರ ಡಿಸೆಂಬರ್ ಅಂತ್ಯದವರೆಗೆ 309 ಕೋಟಿಯಷ್ಟು ಹಣವನ್ನು ಗ್ರಾಹಕರಿಗೆ ಸಬ್ಸಿಡಿ ನೀಡಿದ್ದು ಸರ್ಕಾರ ಇದನ್ನು ಭರಿಸಿದೆ ಎಂದರು.

ರೈತರಿಗೆ 7 ಗಂಟೆ ವಿದ್ಯುತ್

ರೈತರ ಕೃಷಿ ಪಂಪ್ ಸೆಟ್‍ಗಳಿಗೆ ದಿನದಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆ ಆನಗೋಡು, ಮಾಯಕೊಂಡ ಭಾಗದಲ್ಲಿ 3 ಅಥವಾ 4 ಗಂಟೆಗಳ ಕಾಲ ಮಾತ್ರ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದಾಗ ಎಲ್ಲಾ ರೈತರಿಗೂ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸರ್ಕಾರದ ನೀತಿಯಾಗಿದ್ದು ಅದರಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು. ಓವರ್ ಲೋಡಿಂಗ್ ಆದರೆ ಅದನ್ನು ಬೇರೆಡೆ ವರ್ಗಾಯಿಸಿ 7 ಗಂಟೆ ಕೃಷಿ ಪಂಪ್‍ಸೆಟ್‍ಗೆ ವಿದ್ಯುತ್ ನೀಡಲೇಬೇಕೆಂದು ಸೂಚನೆ ನೀಡಿದರು.

ಪಂಪ್‍ಸೆಟ್‍ಗಳಿಗೆ ಶೀಘ್ರ ಸಂಪರ್ಕಕ್ಕೆ ಕ್ರಮ

ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ ಇರುವ 4946 ಪಂಪ್‍ಸೆಟ್‍ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತವಾಗಿ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್‍ಸೆಟ್‍ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು.

ಕಸುಮ್-ಬಿ

ಕುಸುಮ್ ಬಿ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ. 7.5 ಹೆಚ್‍ಪಿ ವರೆಗೆ ಅವಕಾಶ ಇದ್ದು ರೈತರು ಶೇ 20 ರಷ್ಟು ವಂತಿಗೆಯನ್ನು ಕಟ್ಟಬೇಕು. ಕೇಂದ್ರ ಶೇ 30 ಹಾಗೂ ರಾಜ್ಯ ಶೇ 50 ರಷ್ಟು ಸಹಾಯಧನ ಘಟಕ ವೆಚ್ಚಕ್ಕೆ ನೀಡಲಿದೆ. ಮತ್ತು ಕುಸುಮ್-ಸಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಿಡ್‍ಗೆ ಪೂರೈಕೆ ಮಾಡುವುದಾಗಿದೆ. ರೈತರು ಸೋಲಾರ್ ಪಂಪ್‍ಸೆಟ್ ಅಳವಡಿಕೆಗೆ ಮುಂದೆ ಬಂದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಲತಾ ಮಲ್ಲಿಕಾರ್ಜುನ್, ಬಿ.ದೇವೇಂದ್ರಪ್ಪ, ಕೆಪಿಟಿಸಿಎಲ್ ಎಂಡಿ ಪಂಕಜ್‍ಕುಮಾರ್ ಪಾಂಡೆ, ಬೆಸ್ಕಾಂ ಎಂಡಿ ಡಾ; ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪಾಟೀಲ್ ಹಾಗೂ ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮ ಸ್ಥಾಪನೆ ಹೊರಗುತ್ತಿಗೆ ನೌಕರರಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ವಿವಿಧ ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಕಾನೂನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮವನ್ನು ನೂತನವಾಗಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.
ಈಗಾಗಲೇ ವಿವಿಧ ಸಂಸ್ಥೆಗಳ ಮೂಲಕ ಹೊರಗುತ್ತಿಗೆಯಡಿ ಟೆಂಡರ್ ಮೂಲಕ ಸೇವೆಯನ್ನು ಸಲ್ಲಿಸಲಾಗುತ್ತಿದ್ದು ಈ ಎಲ್ಲಾ ಹೊರಗುತ್ತಿಗೆ ನೌಕರರು ಇನ್ನು ಮುಂದೆ ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ದಿ ಸಹಕಾರ ಸಂಘದಡಿಯಲ್ಲಿ ಕೆಲಸ ನಿರ್ವಹಿಸುವರು. ಈ ನೌಕರರಿಗೆ ಜಿಲ್ಲಾ ಸಂಘದಿಂದಲೇ ನೇರವಾಗಿ ವೇತನ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಹೊರಗುತ್ತಿಗೆ ನೌಕರರು ಈ ಸಹಕಾರ ಸಂಘದ ಸದಸ್ಯರಾಗಿರುವರು. ಆದ್ದರಿಂದ ಹೊರಗುತ್ತಿಗೆ ನೌಕರ ಸಿಬ್ಬಂದಿಯವರು ಸಂಘದ ಸದಸ್ಯತ್ವ ಪಡೆಯಬಹುದಾಗಿದ್ದು ತಮ್ಮ ಇಲಾಖೆ ಮುಖ್ಯಸ್ಥರುಗಳಿಂದ ಅರ್ಜಿ ಪಡೆದು ನೊಂದಣಿ ಮಾಡಿಕೊಳ್ಳಲು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
Continue Reading
Advertisement

Title

ದಿನದ ಸುದ್ದಿ7 hours ago

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆ : ಜೀವಿತ ಪ್ರಮಾಣ ಪತ್ರ ಸಲ್ಲಿಕೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆಯಡಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಪಿಂಚಣಿದಾರರು ಪಿಂಚಣಿ ಪಡೆಯುತ್ತಿದ್ದು ಇದರಲ್ಲಿ 5577 ಪಿಂಚಣಿದಾರರು ಇದುವರೆಗೆ ತಮ್ಮ ಜೀವಿತ ಪ್ರಮಾಣ...

ದಿನದ ಸುದ್ದಿ7 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ ವಿದ್ಯುತ್ ಉತ್ಪಾದನೆಗೆ ಒತ್ತು; ಇಂಧನ ಸಚಿವ ಕೆ.ಜೆ.ಜಾರ್ಜ್

ಸುದ್ದಿದಿನ,ದಾವಣಗೆರೆ:ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ...

ದಿನದ ಸುದ್ದಿ7 hours ago

ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮ ಸ್ಥಾಪನೆ ಹೊರಗುತ್ತಿಗೆ ನೌಕರರಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ವಿವಿಧ ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಕಾನೂನಾತ್ಮಕವಾಗಿ ನೀಡಬೇಕಾದ...

ದಿನದ ಸುದ್ದಿ7 hours ago

ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1.99 ಕೋಟಿ

ಸುದ್ದಿದಿನ,ದಾವಣಗೆರೆ:ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್‍ಸಾಬ್ ಅನುಮೋದನೆ ನೀಡಿದ್ದಾರೆ...

ದಿನದ ಸುದ್ದಿ22 hours ago

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್...

ದಿನದ ಸುದ್ದಿ2 days ago

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸುದ್ದಿದಿನಡೆಸ್ಕ್: 2024-25ನೇ ಸಾಲಿನ ರಾಜ್ಯ ಮುಂಗಡ ಪತ್ರ ಹಿನ್ನೆಲೆಯಲ್ಲಿ ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಸಭೆ ನಡೆಸಿದರು.ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...

ದಿನದ ಸುದ್ದಿ2 days ago

ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಮಾರ್ಚ್ 7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ...

ದಿನದ ಸುದ್ದಿ2 days ago

ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ

ಸುದ್ದಿದಿನ,ದಾವಣಗೆರೆ: ನಮಗೆ ಇಂದು ಭಕ್ತಿ ಮತ್ತು ಜ್ಞಾನ ಎರಡೂ ಮುಖ್ಯ. ಭಕ್ತಿ ಹೆಚ್ಚಿಸುವ ದೇವಾಲಯಗಳ ಜತೆಯಲ್ಲೇ ಜ್ಞಾನ ವಿಸ್ತರಿಸುವ ವಿದ್ಯಾಲಯಗಳೂ ಹೆಚ್ಚಬೇಕು ಎಂದು ಹೊಸದುರ್ಗ ಕನಕ ಶಾಖಾ...

ದಿನದ ಸುದ್ದಿ3 days ago

ಕವಿತೆ | ನಾನೊಲಿದೆನಯ್ಯಾ

ರಮ್ಯ ಕೆ ಜಿ, ಮೂರ್ನಾಡು ಅಲೆಯುತ್ತಿದೆ ಈ ರೂಹು ನನ್ನೊಳಗಿಂದ ಚಿಗಿದು ನಿನ್ನ ತುದಿಬೆರಳಲಿ ಕುಣಿದು ಗಾಳಿತುಟಿಯ ಸೋಕಿದಾಕ್ಷಣ ಬೆವೆತು, ಮಳೆ ಹೊಯ್ಯಿಸಿ ಮಣ್ಣ ಘಮದೊಳಗೆ ಲೀನವಾಗುವಂತೆ....

ದಿನದ ಸುದ್ದಿ4 days ago

ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ

ಸುದ್ದಿದಿನ,ಬೆಂಗಳೂರು:ಫೆ 10 ರಂದು ಜನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸುವ ಬೃಹತ್ ಕಾರ್ಯ ಕ್ರಮವನ್ನು ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ...

Trending