ದಿನದ ಸುದ್ದಿ

ಮದ್ದೂರು | ಹೆಲ್ಮೆಟ್ ಜಾಗೃತಿ ಜಾಥಾ ಕ್ಕೆ ಚಾಲನೆ

Published

on

ಸುದ್ದಿದಿನ ಡೆಸ್ಕ್ : ಮದ್ದೂರು ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ಮತ್ತು ಸಂಚಾರ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಂಡ್ಯ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮಾನವನ ದೇಹದಲ್ಲಿ ತಲೆಯು ಪ್ರಮುಖ ಅಂಗವಾಗಿದ್ದು ರಸ್ತೆ ಅಪಘಾತಗಳು ಸಂಭವಿಸಿದಾಗ ತಲೆಗೆ ಹೆಚ್ಚು ಪೆಟ್ಟು ಬಿಳುವುದರಿಂದ ತಲೆಯ ರಕ್ಷಣೆಗೆ ಹೆಲ್ಮೆಟ್ ಕಡ್ಡಾಯ ಹಾಕುವುದರಿಂದ ಸಾವನ್ನು ತಪ್ಪಿಸಬಹುದು. ಅದರಲ್ಲೂ ಮಂಡ್ಯ ಜಿಲ್ಲೆಯಲ್ಲಿ ವರ್ಷಕ್ಕೆ ರಸ್ತೆ ಅಪಘಾತದಲ್ಲಿ 350 ಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದು ಅತಿ ಹೆಚ್ಚು ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುತ್ತಿದ್ದು ತಲೆಗೆ ಹೆಲ್ಮೆಟ್ ಧರಿಸುವ ಮೂಲಕ ಸಾರ್ವಜನಿಕರು ಸಹಕರಿಸಲು ಕರೆ ನೀಡಿದರು.

ಹಾಗೂ ಪ್ರತಿ ತಾಲೂಕಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಇದು ಹಂತ ಹಂತವಾಗಿ ಜಾಗೃತಿ ಮೂಡಿಸಲಾಗುತ್ತದೆ ಮತ್ತು ನಾಡ ಹಬ್ಬ ದಸರಾ ಉತ್ಸವದ ಅಂಗವಾಗಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಧಿಕ ಸಂಖ್ಯೆಯ ವಾಹನಗಳು ಸಂಚರಿಸುವುದರಿಂದ ಸಾರ್ವಜನಿಕರು ಮೊಬೈಲ್ ಫೋನ್ ಬಳಕೆ ಮತ್ತು ಮಾಡಬಾರದು ಎಂದು ಮನವಿ ಮಾಡಿದರು. ನಂತರ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸಂಜಯ ವೃತ್ತದಿಂದ ಕೊಲ್ಲಿ ವೃತ್ತದ ವರಗೆ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮ ದ ವೇಳೆ ಡಿವೈಎಸ್ಪಿ ಎಚ್.ಎಂ.ಶೈಲೇಂದ್ರ ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್. ಸಂಚಾರಿ ಇನ್ಸ್ಪೆಕ್ಟರ್ ಮೋಹನ್ ಡಿ. ಪಟೇಲ್ ಪೋಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version