ದಿನದ ಸುದ್ದಿ
ಸಹಾಯ ಹಸ್ತದ ನಿರೀಕ್ಷೆಯಲ್ಲಿ ಈ ಉತ್ಸಾಹಿ ದಿವ್ಯಾಂಗ ಯುವ ಪ್ರತಿಭೆ
- ಗಂಗಾಧರ ಬಿ ಎಲ್ ನಿಟ್ಟೂರ್
ಮನೆಯಲ್ಲಿ ಎಲ್ಲರ ಮುದ್ದಿನ ಕಣ್ಮಣಿಯಾಗಿದ್ದ ಆತ ಎಲ್ಲಾ ಮಕ್ಕಳಂತೆ ಉಂಡುಟ್ಟು, ಆಯಾಗಿ ಓಡಾಡಿಕೊಂಡಿದ್ದ. 3 – 4 ವರ್ಷದವನಿದ್ದಾಗ ಒಮ್ಮೆ ಕಾಡಿದ ಅತಿಸಾರ ಭೇದಿ ಮತ್ತು ಜ್ವರಕ್ಕೆಂದು ಕೊಡಿಸಿದ ಚಿಕಿತ್ಸೆ ಓವರ್ ಡೋಸ್ ಆಗಿ ಕಾಲಿನ ಸ್ವಾಧೀನ ಕಿತ್ತುಕೊಂಡಿದ್ದಲ್ಲದೆ ದೃಷ್ಟಿಯನ್ನೂ ಪ್ರತಿಶತಃ ಮಂದಗೊಳಿಸಿ ಮೂಲೆ ಹಿಡಿಸಿ ಬಿಟ್ಟಿತು. ಆದರೂ ಅವನೊಳಗಿನ ಅದಮ್ಯ ಉತ್ಸಾಹವನ್ನು ಮಾತ್ರ ಕಸಿದುಕೊಳ್ಳಲಾಗಲಿಲ್ಲ ಆ ದುರ್ವಿಧಿಗೆ. ಆತನ ಜೀವನೋತ್ಸಾಹ, ಪಾಸಿಟಿವ್ ಎನರ್ಜಿಯನ್ನು ಕಂಡ ಯಾರಿಗಾದರೂ ಖಂಡಿತ ಅಚ್ಚರಿಯಾಗುತ್ತದೆ.
ಹುಟ್ಟು ಅನಕ್ಷರಸ್ಥನಾದ ಆತನಿಗೆ ಹಾಡುವುದೆಂದರೆ ಪಂಚಪ್ರಾಣ. ಟಿವಿ, ಮೊಬೈಲ್ ನಲ್ಲಿ ಒಮ್ಮೆ ಕೇಳಿದ ಹಾಡನ್ನು ಸೀದಾ ಮಸ್ತಕಕ್ಕೇರಿಸಿಕೊಂಡು ಬಿಡುತ್ತಾನೆ. ಕವ್ವಾಲಿ, ಶರೀಫರ ತತ್ವಪದಗಳನ್ನು ಹಾಡುವುದೆಂದರೆ ಬಲು ಪ್ರೀತಿ. ಹಿಂದಿ ಮತ್ತು ಕನ್ನಡ ಸಿನಿಮಾ ಗೀತೆಗಳು ಸೇರಿದಂತೆ ನೂರಾರು ಹಾಡುಗಳ ಜತೆ ಪ್ರಸಿದ್ಧ ನಟರುಗಳ ಹಲವಾರು ಡೈಲಾಗ್ ಗಳು ಸಹ ಬಾಯಿಪಾಠವಾಗಿವೆ. ಸಂಗೀತವನ್ನು ಶಾಸ್ತ್ರೀಯವಾಗಿ ಅಭ್ಯಾಸ ಮಾಡದಿದ್ದರೂ ಯಾವುದೇ ಗೀತೆಗಳಿಗೆ ಭಾವತುಂಬಿ ಹಾಡುವ ಕಲೆ ಆತನಿಗೆ ಒಲಿದಿದೆ.
ಇಂತಹ ವಿಶೇಷ ವಿಶಿಷ್ಟ ದಿವ್ಯಾಂಗ ಪ್ರತಿಭೆಯ ಹೆಸರು ಕೆ. ಮೊಹಮ್ಮದ್ ಬಾಷಾ. ದಾವಣಗೆರೆ ನಗರದ ನಿಟುವಳ್ಳಿ ಹೊಸ ಬಡಾವಣೆಯ 2ನೇ ಮೇನ್ 4 ನೇ ಕ್ರಾಸ್ ನಲ್ಲಿ ವಾಸ. ತಂದೆ ದಿವಂಗತ ಬಾಬು ಸಾಬ್, ತಾಯಿ ಎಂ. ಮಾಮಾಜಾನ್. ಬಡತನದ ಬೇಗೆಯಲ್ಲಿ ಬೇಯುತ್ತಿರುವ ಕುಟುಂಬದ ಭಾರವನ್ನು ಮೊಹಮ್ಮದ್ ನ ಅಣ್ಣನಾದ ವಲಿಬಾಷಾರ ಆಟೋ ರಿಕ್ಷಾ ಹೊತ್ತು ಸಾಗುತ್ತಿದೆ.
ನಿರ್ವಹಣೆಯ ತೊಂದರೆ ಹಿನ್ನೆಲೆಯಲ್ಲಿ ದಿವ್ಯಾಂಗನಾದರೂ ಕಲಿಕೆಯಲ್ಲಿ ಅಪಾರ ಶ್ರದ್ಧೆ ಮತ್ತು ಆಸಕ್ತಿ ಹೊಂದಿರುವ ಮೊಹಮ್ಮದ್ ನನ್ನು ಓದು – ಬರಹ ಅಥವಾ ಸಂಗೀತಭ್ಯಾಸಕ್ಕಾಗಿ ಯಾವುದಾದರೂ ಉಚಿತ ವಸತಿ ಶಾಲೆ ಅಥವಾ ಆಶ್ರಮಗಳಿಗಾದರೂ ಕಳಿಸಲು ಸಾಧ್ಯವಾಗಲಿಲ್ಲ ಎಂಬುದು ಮಾಮಾಜಾನ್ ರ ನೋವಿನ ನುಡಿ.
ಪ್ರಸ್ತುತ 27 ರ ಪ್ರಾಯದ ಈ ಉತ್ಸಾಹಿ ಯುವಕನ ಪ್ರತಿಭೆ ಬೆಳಕಿಗೆ ಬರಲು ಸದ್ಯ ವೇದಿಕೆಯನ್ನು ಕಲ್ಪಿಸಿಕೊಡುವವರು, ಆರ್ಥಿಕವಾಗಿ ಸಹಕಾರ ನೀಡುವ ಔದಾರ್ಯ ಉಳ್ಳವರು ಮುಂದೆ ಬಂದು ಗುರುತಿಸಬೇಕಿದೆ. ಈತನ ಸಂಗೀತ ಕಲಿಕೆಯನ್ನು ಕ್ರಮಬದ್ಧ ಮತ್ತು ಶಾಸ್ತ್ರೀಯಗೊಳಿಸಲು ಬಿಡುವಿನ ವೇಳೆಯಲ್ಲಿ ಆತನ ಮನೆಗೆ ಹೋಗಿ ಉಚಿತವಾಗಿ ಸಂಗೀತ ಹೇಳಿಕೊಡುವ ಸಹೃದಯತೆಯನ್ನು ಸಂಗೀತ ಶಿಕ್ಷಕರು ತೋರಬೇಕಿದೆ .
ಸದ್ಯದ ಪರಿಸ್ಥಿತಿಯಲ್ಲಿ ಹೃದಯ ಶ್ರೀಮಂತಿಕೆಯಿಂದ ಯಾರಾದರೂ ತಾವಾಗಿಯೇ ಒಂದಷ್ಟು ಸಹಾಯ ಹಸ್ತ ಚಾಚಿದರೆ ಆತನ ಕುಟುಂಬದ ಆರ್ಥಿಕ ಬವಣೆ ನೀಗಲು ಸಹಾಯವಾಗುವ ಜೊತೆ ಸಂಗೀತ ಕ್ಷೇತ್ರಕ್ಕೆ ಈ ಪ್ರತಿಭೆಯಿಂದ ಸಾಕಷ್ಟು ಕೊಡುಗೆ ಲಭಿಸುವುದರಲ್ಲಿಯೂ ಸಂದೇಹವಿಲ್ಲ.
ದಯವಿಟ್ಟು ಈ ನಂಬರ್ ಗೆ ಸಂಪರ್ಕಿಸಿ ಸಹಾಯ ಹಸ್ತ ಚಾಚಿ : ಮೊಹಮ್ಮದ್ ಬಾಷಾ ನ ಮೊ.ಸಂ : 8088644148

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ5 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

