ದಿನದ ಸುದ್ದಿ
ನಾಡಿನಾದ್ಯಂತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಶಿವಶರಣೆ, ಮಹಾಸಾದ್ವಿ, ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು. ಬೇರೆ ಬೇರೆ ಜಿಲ್ಲೆಗಳಲ್ಲಿ ಜಯಂತಿ ಆಚರಿಸಿದ ವರದಿಗಳು ಬಂದಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿಂದು ಮಲ್ಲಮ್ಮ ಜಯಂತಿ ಆಚರಿಸಲಾಯಿತು. “ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ” ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪುಷ್ಪನಮನ ಸಲ್ಲಿಸಿ, ತಮ್ಮ ಕಾಯಕದ ಮೂಲಕ ಬದುಕಿನ ಮೌಲ್ಯವನ್ನು ಜನತೆಗೆ ಸರಳವಾಗಿ ತಿಳಿಸಿದ್ದಾರೆ ಎಂದು ಸ್ಮರಿಸಿದರು.
ರಾಯಚೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಮ್ಮ ಭಾವಚಿತ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಆಚಾರ್ ಹಾಲಪ್ಪ ಬಸಪ್ಪ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಬಳ್ಳಾರಿಯಲ್ಲಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಭಾವಚಿತ್ರದ ಮೆರವಣಿಗೆಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಚಾಲನೆ ನೀಡಿದರು.
ದುರ್ಗಮ್ಮ ದೇವಸ್ಥಾನದಿಂದ ಬಸವಭವನದವರೆಗೆ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ಜರುಗಿತು. ಶಾಸಕ ಜಿ.ಸೋಮಶೇಖರ ರೆಡ್ಡಿ ಮತ್ತಿತರರು ಹಾಜರಿದ್ದರು. ಧಾರವಾಡದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಯೋಗದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಧಾರ್ಮಿಕ, ಆಧ್ಯಾತ್ಮಿಕ ಮೌಲ್ಯಗಳನ್ನು ನಿರ್ಲಕ್ಷ್ಯ ಮಾಡಬಾರದು. ಜಯಂತಿ ಆಚರಣೆ ಮೂಲಕ ಮಹಾನ್ ಸಾಧಕರ ತತ್ವ- ಆದರ್ಶಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243