Connect with us

ದಿನದ ಸುದ್ದಿ

ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್

Published

on

ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದರು.

ಗ್ಯಾರಂಟಿ ಅನುಷ್ಟಾನ ಕುರಿತು ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಯೋಜನೆಗಳು ಜಾರಿಗೆ ಬರಲಿವೆ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ ಎಂದರು. ಗೃಹಜ್ಯೋತಿ ಯೋಜನೆಯಡಿ – 200 ಯುನಿಟ್ ವರೆಗೆ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇಕಡ 10 ರಷ್ಟರವರೆಗಿನ ವಿದ್ಯುತ್ ಉಚಿತ.

ಜುಲೈ 1 ರಿಂದ ಆಗಸ್ಟ್ ವರೆಗಿನ ಖರ್ಚಿಗೆ ಇದು ಅನ್ವಯಿಸಲಿದೆ. ಜುಲೈನಿಂದ ವಿದ್ಯುತ್ ಬಿಲ್ ಆಗಸ್ಟ್‌ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ನೀಡುವುದಿಲ್ಲ ಎಂದರು.

ಗೃಹಲಕ್ಷ್ಮೀ ಯೋಜನೆಯಡಿ – ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್‌ವೇರ್ ತಂತ್ರಾಂಶ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮೆ ಆಗುವುದು. ಇದಕ್ಕಾಗಿ ಜೂನ್ 15 ರಿಂದ ಜುಲೈ 15 ರೊಳಗೆ ಆನ್‌ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.

18 ವರ್ಷ ತುಂಬಿದವರು. ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರಕ್ರಿಯೆ ನಡೆಸಿ, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಸೌಲಭ್ಯ ಇಲ್ಲ ಎಂದರು.

ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ,7 ಕೆ.ಜಿ. ಅಕ್ಕಿ ನೀಡುತ್ತಿದ್ದೆವು. ಅದನ್ನು ಬಿಜೆಪಿ ಸರ್ಕಾರ ಅದನ್ನು5 ಕೆ.ಜಿ.ಗೆ ಇಳಿಸಿದ್ದರು. ಇದೀಗ 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ಹೀಗಾಗಿ ಜುಲೈ 1 ರಿಂದ ಬಿಪಿಎಲ್ + ಅಂತ್ಯೋದಯ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ವಿವಿಧ ಮೂಲಗಳಿಂದ ತಂದು ವಿತರಿಸಲಾಗುತ್ತದೆ ಎಂದರು.

ಶಕ್ತಿ ಯೋಜನೆಡಿ ಸಮಾಜದಲ್ಲಿ ಶೇಕಡ ೫೦ ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು ಹೊರತುಪಡಿಸಿ ಉಳಿದೆಲ್ಲಾ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ. ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ಶೇಕಡ 50 ರಷ್ಟು ಆಸನವನ್ನು ಪುರುಷರಿಗೆ ಮೀಸಲಿರಿಸಲಾಗುವುದು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಯುವನಿಧಿ ಯೋಜನೆಯಡಿ – 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣವೂ ಸೇರಿ ಎಲ್ಲ ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಪದವೀಧರರಿಗೆ 1 ಸಾವಿರದ 500 ರೂಪಾಯಿ ನೀಡಲಾಗುವುದು. ಅಷ್ಟರೊಳಗೆ ಉದ್ಯೋಗ ಪಡೆದವರು ಅಂತವರು ಘೋಷಿಸಿಕೊಂಡರೆ ಅಂತವರಿಗೆ ಯುವ ನಿಧಿ ಭತ್ಯೆ ಕೊನೆಗೊಳ್ಳುತ್ತದೆ. ಈ ಯೋಜನೆಗೆ ಯುವಕ, ಯುವತಿ ಮತ್ತು ತೃತೀಯಲಿಂಗಿಗಳಿಗೂ ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending