ದಿನದ ಸುದ್ದಿ

ಶಾಲಾ ಪಠ್ಯದಲ್ಲಿ ಕ್ರೀಡೆಗೆ ಹೆಚ್ಚಿನ ಆದ್ಯತೆ : ಸಚಿವ ಅನುರಾಗ್ ಸಿಂಗ್ ಠಾಕೂರ್

Published

on

ಸುದ್ದಿದಿನ ಡೆಸ್ಕ್ : ಶಾಲಾ ಪಠ್ಯ ಕ್ರಮದ ವಿವಿಧ ( school syllabus ) ಆಯಾಮಗಳಲ್ಲಿ ಕ್ರೀಡೆಯನ್ನು ಸೇರ್ಪಡೆ ( Sports ) ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ( Anurag Thakur – Minister of Youth Affairs and Sports of India ) ಹೇಳಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನದ ಹಿನ್ನೆಲೆಯಲ್ಲಿ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಅವರು, ಶಾಲಾ ಹಂತದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ ಎಂದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿ, ಕ್ರೀಡೆಯನ್ನು ಜನಪ್ರಿಯಗೊಳಿಸಲು ಹಾಗೂ ಕ್ರೀಡಾ ಪ್ರತಿಭಾ ಶೋಧಕ್ಕೆ ಎಲ್ಲ ರೀತಿಯ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಕ್ರೀಡೆಗೆ ಪ್ರಾಧಾನ್ಯತೆ ಕೊಡುತ್ತಿದ್ದು, ದೇಹದ ಸದೃಡತೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಜೀವನ ಪರ್ಯಂತ ದೈಹಿಕ ಶ್ರಮತೆಯನ್ನು ಅನುಸರಿಸುವುದನ್ನು ರೂಢಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version