ದಿನದ ಸುದ್ದಿ

ಮಧ್ಯಪ್ರದೇಶದಲ್ಲಿ ಹಿಜಬ್‌ ವಿವಾದ ಇಲ್ಲ : ಗೃಹ ಸಚಿವ ನರೋತ್ತಮ್‌ ಮಿಶ್ರಾ

Published

on

ಸುದ್ದಿದಿನ,ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವು, ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ ಧರಿಸುವುದನ್ನು ನಿಷೇಧಿಸುವ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ ಎಂದು ಬುಧವಾರ ತಿಳಿಸಿದೆ.

ಮಧ್ಯಪ್ರದೇಶದಲ್ಲಿ ಹಿಜಬ್‌ ಕುರಿತು ಯಾವುದೇ ವಿವಾದ ಇಲ್ಲ. ಹಿಜಬ್‌ ನಿಷೇಧಿಸುವ ಸಂಬಂಧ ಯಾವುದೇ ಪ್ರಸ್ತಾವನೆ ಪರಿಗಣಿಸುತ್ತಿಲ್ಲ. ಈ ಸಂಬಂಧ ಯಾವುದೇ ಗೊಂದಲ ಬೇಡ ಎಂದು ಗೃಹ ಸಚಿವ ನರೋತ್ತಮ್‌ ಮಿಶ್ರಾ ತಿಳಿಸಿದ್ದಾರೆ.

ಮಧ್ಯಪ್ರದೇಶದ ಶಿಕ್ಷಣ ಸಚಿವ ಇಂದರ್‌ ಸಿಂಗ್‌ ಪರ್ಮರ್‌ ಅವರು ಹಿಜಬ್‌ ವಿರೋಧಿ ಪ್ರತಿಭಟನಾಕಾರರನ್ನು ಬೆಂಬಲಿಸಿ, ಹಿಜಬ್‌ ನಿಷೇಧ ಕುರಿತು ನಿನ್ನೆ ಮಾತನಾಡಿದ್ದರು. ಆದರೆ ಇಂದು ಈ ಸಂಬಂಧ ಯಾವುದೇ ಪ್ರಸ್ತಾಪ ಪರಿಗಣಿಸುವುದಿಲ್ಲ ಎಂದು ಸಚಿವ ಮಿಶ್ರಾ ಅವರು ಸ್ಪಷ್ಟಪಡಿಸಿದ್ದಾರೆ.

ನಂತರ ಪ್ರತಿಕ್ರಿಯಿಸಿರುವ ಇಂದರ್‌ ಸಿಂಗ್‌, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಹೊಸ ಸಮವಸ್ತ್ರ ನಿಯಮವನ್ನು ನಾವು ಅಳವಡಿಸುತ್ತಿಲ್ಲ. ಈಗಿರುವ ಸಮವಸ್ತ್ರ ನಿಯಮವೇ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version