Connect with us

ದಿನದ ಸುದ್ದಿ

ಹಿಜಾಬ್ ವಿವಾದ | ಸಂವಿಧಾನದ ಆಶಯದಂತೆ ತೀರ್ಮಾನ ; ಭಾವನೆಗಳನ್ನು ಪಕ್ಕಕ್ಕಿಡಿ : ಹೈಕೋರ್ಟ್ | ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

Published

on

ಸುದ್ದಿದಿನ,ಬೆಂಗಳೂರು: “ಅನುಚಿತ ಗುಂಪಷ್ಟೇ ವಿವಾದವನ್ನು ಜೀವಂತವಾಗಿಡಬಲ್ಲದು ಮತ್ತು ಸಂವಿಧಾನದ ಮೇಲೆ ಎಲ್ಲರೂ ನಂಬಿಕೆ ಇಡಬೇಕು ಹಾಗೂ ಶಾಂತಿ ಕಾಪಾಡುವಂತೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮನವಿ” ಇದು ಜನತೆಯಲ್ಲಿ ಕರ್ನಾಟಕ ಹೈಕೋರ್ಟ್(Karnataka High Court) ನ್ಯಾಯಮೂರ್ತಿ ಎಎಸ್ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ಮಾಡಿರುವ ಮನವಿ.

ಕಾಲೇಜಿಗೆ ಹಿಜಬ್(Hijab) ಧರಿಸಿ ಹೋಗಲು ಅವಕಾಶ ನೀಡುವಂತೆ ಕೋರಿ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಪೀಠ ಮುಂದೂಡಿದೆ. ಇವತ್ತು ವಿದ್ಯಾರ್ಥಿನಿಯರ ಪರ ವಕೀಲ ದೇವದತ್ ಕಾಮತ್ ಅವರಷ್ಟೇ ವಾದ ಮಂಡನೆ ಮಾಡಿದರು. ಮಧ್ಯಹ್ನ 1 ಗಂಟೆಗೆ ಶುರುವಾದ ವಿಚಾರಣೆ ಸಂಜೆ 4:30ರವರೆಗೂ ನಡೆಯಿತು.

ವಾದ-ಪ್ರತಿವಾದದ ಆಲಿಸಿದ ಬಳಿಕ ಇವತ್ತೇ ತೀರ್ಪು ಹೊರಬರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನಾಳೆ ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ನ್ಯಾಯಮೂರ್ತಿ ಜೆಎನ್ ದೀಕ್ಷಿತ್ ನೇತೃತ್ವದ ಪೀಠ ಮುಂದೂಡಿದೆ. ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗಳ ಬಗ್ಗೆ ನ್ಯಾಯಮೂರ್ತಿಗಳು ತೀವ್ರ ಕಳವಳ ವ್ಯಕ್ತಪಡಿಸಿದರು. ಆದಷ್ಟು ಬೇಗ ತೀರ್ಪು ನೀಡುವುದಾಗಿ ತಿಳಿಸಿದರು.

ಅರ್ಜಿದಾರರ ಪರ ವಕೀಲರ ವಾದದಲ್ಲೇನಿದೆ..?

ಕುರಾನ್ ಪ್ರಕಾರ ಹಿಜಬ್ ಧರಿಸುವುದು ಮೂಲಭೂತ ಆಚರಣೆ. ಶೈಕ್ಷಣಿಕ ವರ್ಷ ಮುಗಿಯಲು 2 ತಿಂಗಳಷ್ಟೇ ಇದೆ. ಹಿಜಬ್ ಧರಿಸಿ ಹೋಗಲು ಅವಕಾಶ ಕೊಡಿ. ಪರೀಕ್ಷೆ ಮುಗಿಯುವವರೆಗೂ ಯೂನಿಫಾರಂ ಬಣ್ಣದ ಹಿಜಬ್ ಧರಿಸಲು ಅವಕಾಶ ಕೊಡಿ. ಆ ಬಳಿಕ ಬೇಕಾದರೆ ಈ ವಿಷಯದ ಬಗ್ಗೆ ಕೋರ್ಟ್ ನಿರ್ಧರಿಸಬಹುದು.

ಹಿಜಬ್ ಧರಿಸುವುದು ಮೂಲಭೂತ ಹಕ್ಕಲ್ಲ ಎಂಬ ಅರ್ಥದಲ್ಲಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಈ ಸುತ್ತೋಲೆ ಕೇರಳ, ಮದ್ರಾಸ್, ಬಾಂಬೆ ಹೈಕೋರ್ಟ್ ತೀರ್ಪನ್ನು ಪಾಲಿಸಿಲ್ಲ. ಉಡುಪು ಧರಿಸುವುದು ಸುಪ್ರೀಂಕೋರ್ಟ್ ನೀಡಿರುವ ಖಾಸಗಿತನವೂ ಮೂಲಭೂತ ಹಕ್ಕು ವ್ಯಾಪ್ತಿಯಲ್ಲಿ ಬರುತ್ತದೆ.

ಜ್ಯಾತ್ಯಾತೀತತೆ ಚಿಂತನೆಯಡಿ ಧಾರ್ಮಿಕ ಆಚರಣೆಗಳನ್ನು ಪರೀಕ್ಷೆಗೊಳಪಡಿಸಲು ಸಾಧ್ಯವಿಲ್ಲ. ಧರ್ಮದ ಮೂಲಭೂತ ಆಚರಣೆಯನ್ನು ಧಾರ್ಮಿಕತೆಯ ನಂಬಿಕೆ ಮೇಲಷ್ಟೇ ನಿರ್ಧರಿಸಬೇಕು, ಜ್ಯಾತ್ಯಾತೀತ ಭಾವನೆಗಳ ಆಧಾರದಲ್ಲಿ ಅಲ್ಲ. ಅಲ್ಪಸಂಖ್ಯಾತ ಸಂಸ್ಥೆಗಳಲ್ಲಿನ ಮೂಲಭೂತ ಹಕ್ಕಿಗೂ ಸರ್ಕಾರಿ ಸಂಸ್ಥೆಯಲ್ಲಿ ಆಚರಿಸಲಾಗುವ ಮೂಲಭೂತ ಹಕ್ಕಿಗೂ ವ್ಯತ್ಯಾಸ ಇದೆ.

ಹಿಜಬ್ ಧರ್ಮದ ಅವಿಭಾಜ್ಯ ಭಾಗವೆಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಕಾಲೇಜು ಪ್ರವೇಶಾತಿಯ ಆರಂಭದಿಂದಲೂ ವಿದ್ಯಾರ್ಥಿನಿಯರು ಹಿಜಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದರು. ಹಿಜಬ್ ಧರಿಸುವುದು ಕೆಲವುಗಳ ಉಲ್ಲಂಘನೆ ಎಂದು ಕೆಲವರು ಭಾವಿಸುವವರೆಗೂ ಏನೂ ತೊಂದರೆ ಆಗಿರಲಿಲ್ಲ. ಪ್ರತಿಯೊಂದು ಧಾರ್ಮಿಕ ಆಚರಣೆಗೂ ಸರ್ಕಾರ ಸಾರ್ವಜನಿಕ ಸುವ್ಯವಸ್ಥೆಯ ಬಣ್ಣ ನೀಡಲು ಹೊರಟರೆ ಏನಾಗಬಹುದು? ಬ್ರಾಹ್ಮಣರು ನಾಮ ಧರಿಸಿ ಅಥವಾ ಸಿಖ್ಖರು ಟರ್ಬನ್ ಧರಿಸಿ ಶಾಲೆಗೆ ಹೋದರೆ ಅದು ಸಾರ್ವಜನಿಕ ಸುವ್ಯವಸ್ಥೆಗೆ ಪರಿಣಾಮ ಬೀಳುತ್ತದೆ ಎಂದು ಸರ್ಕಾರ ಹೇಳಲಾದಿತೇ?

ಹಿಜಬ್ ಧರಿಸಿ ಹೊರಗಡೆ ಓಡಾಡಿದ್ರೆ ಸಾರ್ವಜನಿಕ ಸುವ್ಯವಸ್ಥೆ ವಿಷಯವಲ್ಲ, ಮಾರ್ಕೆಟ್‍ಗೆ ಹೋದರೆ ಸಾರ್ವಜನಿಕ ಸುವ್ಯವಸ್ಥೆಯ ವಿಷಯವಲ್ಲ. ಆದರೆ ಹಿಜಬ್ ಧರಿಸಿ ಕಾಲೇಜಿಗೆ ಹೋದರೆ ಸಾರ್ವಜನಿಕ ಸುವ್ಯವಸ್ಥೆ ಹೇಗಾತ್ತದೆ? ಜನರು ತಮ್ಮ ಮೂಲಭೂತ ಹಕ್ಕು ಚಲಾಯಿಸಲು ಸರ್ಕಾರ ವ್ಯವಸ್ಥೆ ಮಾಡಬೇಕು. ಶಾಲೆಗೆ ಹೋಗುವ ವಿದ್ಯಾರ್ಥಿಗಳ ಹಕ್ಕನ್ನು ಸರ್ಕಾರ ರಕ್ಷಣೆ ಮಾಡಬೇಕು.

ಶಾಲೆಗಳಲ್ಲಿ ಯಾರೋ ನಾಮ ಧರಿಸಿ ಬಂದರೆ, ಹಿಜಬ್ ಧರಿಸಿ ಬಂದರೆ, ಕ್ರಾಸ್ ಧರಿಸಿ ಬಂದರೆ ಅದು ಸಕಾರಾತ್ಮಕ ಜ್ಯಾತ್ಯಾತೀತತೆ. ನಾಲ್ಕೈದು ದಿನಗಳಿಂದ ಹಿಜಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ. ಕಾಲೇಜುಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ಮಾಡಲಾಗಿದೆ. ಹಿಜಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸಿದ್ದು `ಧಾರ್ಮಿಕ ಅಸ್ಪ್ರಶ್ಯತೆ’. ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಕಾನೂನು ಮಾಡಬಹುದು, ಬಾರ್ ಕೌನ್ಸಿಲ್ ರೀತಿಯಲ್ಲೇ. ಆದರೆ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರಬಹುದೇ ಎಂಬುದೇ ಪ್ರಶ್ನೆ.

ಜಡ್ಜ್‌ ಹೇಳಿದ್ದೇನು..?

ಸಂವಿಧಾನ ಏನು ಹೇಳಿದೆಯೋ ಅದರಂತೆಯೇ ತೀರ್ಮಾನ. ಸಂವಿಧಾನವೇ ನನಗೆ ಭಗವದ್ಗೀತೆ. ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ, ಭಾವನೆಗಳನ್ನು ಪಕ್ಕಕ್ಕಿಡಿ. ಎರಡು ತಿಂಗಳ ಬಳಿಕ ನಿಯಮ (ಯೂನಿಫಾರಂ ನಿಯಮ) ಮಾಡಿದರೆ ಪಾಲಿಸುತ್ತೀರಾ?

ಪ್ರತಿ ದಿನ ವಿದ್ಯಾರ್ಥಿಗಳು ಬೀದಿಯಲ್ಲಿ ಹೋರಾಟ ಮಾಡುವುದನ್ನು ನೋಡಲಾಗದು. ಇದು ಒಳ್ಳೆಯ ದೃಶ್ಯ ಅಲ್ಲ. ನಮ್ಮನ್ನು ಅಂತಾರಾಷ್ಟ್ರೀಯ ಸಮುದಾಯ ಗಮನಿಸುತ್ತಿದೆ. ವಾಟ್ಸಾಪ್ ಓಪನ್ ಮಾಡಿದಾಗಲೆಲ್ಲ ಹಲವು ಮೆಸೇಜ್‍ಗಳು ಬರುತ್ತಿವೆ. ಕೋರ್ಟ್ ಆ ಆದೇಶ ಹೊರಡಿಸಿದೆ ಈ ಆದೇಶ ಹೊರಡಿಸಿದೆ ಎಂದು ಅಸಂಖ್ಯಾತ ಸಂಖ್ಯೆಗಳಿಂದ ಮೆಸೇಜ್ ಬರುತ್ತಿದೆ.

`ಹಿಜಬ್’ ಇಸ್ಲಾಂ ಅವಿಭಾಜ್ಯ ಅಂಗವೇ ಎಂಬ ಬಗ್ಗೆಯಷ್ಟೇ ವಿಚಾರಣೆ ಮಾಡುತ್ತೇವೆ. ಉಡುಪು ಧರಿಸುವುದು ಖಾಸಗಿತನ ಹಕ್ಕಿನ ವ್ಯಾಪ್ತಿಗೆ ಬರುತ್ತದೆ. ನಾನು ವಿದ್ಯಾರ್ಥಿಯಾದ ದಿನದಿಂದ ಇಂಥಾ ಸಂಘರ್ಷವನ್ನು ನೋಡಿರಲಿಲ್ಲ. ಪ್ರತಿಭಟನೆ ಮಾಡುವುದು, ಬೀದಿಗಿಳಿಯುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು. ವಿದ್ಯಾರ್ಥಿಗಳು ಇತರರ ಮೇಲೆ ಹಲ್ಲೆ ನಡೆಸುವುದು ಒಳ್ಳೆಯದಲ್ಲ. ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು.. ಜನರು ಸುವ್ಯವಸ್ಥೆ ಪಾಲಿಸಬೇಕು. ಕೋರ್ಟ್‍ಗೆ ನಂಬಿಕೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending