ದಿನದ ಸುದ್ದಿ

ಹಿಂದಿ ದಿವಸ್‌ ಆಚರಿಸಲು ನಾವು ಹಿಂದಿ ಭಾಷಿಕರಲ್ಲ : ದುನಿಯಾ ವಿಜಯ್

Published

on

ಸುದ್ದಿದಿನ,ಬೆಂಗಳೂರು:ಹಿಂದಿ ದಿವಸ್‌ ಆಚರಿಸಲು ನಾವು ಹಿಂದಿ ಭಾಷಿಕರಲ್ಲ, ನಮ್ಮ ರಾಜ್ಯದಲ್ಲಿ ಆಡಳಿತ ಭಾಷೆ ಹಿಂದಿಯೂ ಅಲ್ಲ. ನನಗೆ ಹುಟ್ಟಿದಾಗಿನಿಂಲದೂ ಗೊತ್ತಿರುವುದು ಕನ್ನಡ ಒಂದೆ ಎಂದು ನಟ ದುನಿಯಾ ವಿಜಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದು ಕೊಂಡಿರುವ ಅವರು, ಆಗಿನಿಂದಲೂ ನಾನು ನಮ್ಮ ಕನ್ನಡದ ಮೇಲೆ ಬೇರೆ ಭಾಷೆಗಳ ಆಕ್ರಮಣ ನಮ್ಮ ಮೇಲೆ ಯಾವ ಮಟ್ಟಕ್ಕೆ ಇದೆ ಎಂಬುದನ್ನು ಬಹಳ ಹತ್ತಿರದಿಂದ ಕಂಡಿದ್ದೇನೆ.ಪ್ರತಿಯೊಬ್ಬ ಮನುಷ್ಯನಿಗೂ ತನ್ನ ಮಾತೃಭಾಷೆ ಜೀವನ ಮಾಡುವ ಬಗೆ ಮತ್ತು ಜೀವನ ಶೈಲಿಯನ್ನು ಕಲಿಸುತ್ತದೆ. ಹಾಗಂತ ನಾನು ಹಿಂದಿ ಕಲಿಯುವುದೇ ಇಲ್ಲ ಎಂದು ಹೇಳುತ್ತಿಲ್ಲ. ಕಲಿಯುತ್ತೇನೆ, ಅದರ ಅವಶ್ಯಕತೆ ನನಗೆ ಎಷ್ಟಿದಿಯೋ ಅಷ್ಟನ್ನು ಮಾತ್ರ. ಅದನ್ನು ಬಿಟ್ಟು ಸಂಪೂರ್ಣವಾಗಿ ನಮ್ಮ ಮೇಲೆ ಹೇರಲು ಬಂದರೆ ನಾವೆಂದು ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ.

ಕನ್ನಡದ ಬಗೆಗಿನ ಶ್ರದ್ಧೆ ಇಂದು ನನ್ನನ್ನು ಇಲ್ಲಿಯವರೆಗೂ ಕರೆತಂದಿದೆ. ಪ್ರತಿಯೊಬ್ಬ ಮನುಷ್ಯ ಜೀವನ ಪ್ರೀತಿಗಾಗಿ ಹಾತೋರೆಯುತ್ತಾನೆ. ಅದೇ ರೀತಿ ತನ್ನ ಆಸ್ಮಿತೆಗಾಗಿಯೂ ಆತ ಹಂಬಲಿಸುತ್ತಾನೆ. ನಾವು ಕನ್ನಡಿಗರು ಯಾವಾಗಲೂ ನಮ್ಮ ಕನ್ನಡತನದ ಅಸ್ಮಿತೆಗಾಗಿ ಹಂಬಲಿಸೋಣ. ನಮ್ಮ ಸಂವಿಧಾನದಂತೆ ನಾವು ಬದುಕುತ್ತಿದ್ದೇವೆ ಬದುಕಲು ಬಿಡಿ, ಹಿಂದಿ ಹೇರಿಕೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಜೈ ಕರ್ನಾಟಕ ಮಾತೆ. ..ದಿನವೂ ಕನ್ನಡ .. ಅನುದಿನವೂ ಕನ್ನಡ ಎಂದು ತಮ್ಮ ಕನ್ನಡ ಪ್ರೇಮವನ್ನು ಅಭಿವ್ಯಕ್ತಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version