ದಿನದ ಸುದ್ದಿ
ಹಿಂದೂ ಯಾತ್ರಾರ್ಥಿಗಳಿಗೆ ಕಾಶಿ ಯಾತ್ರೆ ಪ್ರಾಯೋಜನೆ : ಕರ್ನಾಟಕ ಸರ್ಕಾರ ಆದೇಶ
ಸುದ್ದಿದಿನ ಡೆಸ್ಕ್ : ಹಿಂದೂ ಯಾತ್ರಾರ್ಥಿಗಳಿಗೆ ಕಾಶಿ ಯಾತ್ರೆಯನ್ನು ಪ್ರಾಯೋಜಿಸಲು, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕಾಶಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಧನಸಹಾಯ ನೀಡುವ ಕಾರ್ಯಕ್ರಮ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ ಎಂದು ಕರ್ನಾಟಕದ ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಪ್ರಸಕ್ತ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ವಾರಾಣಸಿಯಲ್ಲಿ ಯಾತ್ರಾರ್ಥಿಗಳಿಗೆ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹಾಯ ಮಾಡಿದ್ದಾರೆ ಇಂದು ಅದನ್ನು ದಿವ್ಯ ಕಾಶಿ-ಭವ್ಯ ಕಾಶಿ ಎಂದು ಕರೆಯಲಾಗುತ್ತದೆ ಎಂದು ಸಚಿವರು ಹೇಳಿದರು.
ರಾಜ್ಯದ ಅನೇಕರು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ ಮತ್ತು ವಾರಾಣಸಿಗೆ ಭೇಟಿ ನೀಡಲು ರಾಜ್ಯ ಸರ್ಕಾರ ಈ ವರ್ಷ 30ಸಾವಿರ ಯಾತ್ರಾರ್ಥಿಗಳಿಗೆ ತಲಾ ಐದು ಸಾವಿರ ರೂಪಾಯಿ ನೀಡಲಿದೆ. ಮಹಾರಾಷ್ಟ್ರದ ಪಂಢರಾಪುರದಲ್ಲಿ ಕರ್ನಾಟಕದ ಭಕ್ತರಿಗೆ ತಂಗಲು ಸುಸಜ್ಜಿತ ಅತಿಥಿ ಗೃಹ ನಿರ್ಮಿಸಲು 750 ಲಕ್ಷ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243