ದಿನದ ಸುದ್ದಿ

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ; ಜೂನ್ 8 ರೊಳಗೆ ಅಹವಾಲು ಸಲ್ಲಿಸಲು ವಿಚಾರಣಾ ಆಯೋಗಕ್ಕೆ ಸೂಚನೆ

Published

on

ಸುದ್ದಿದಿನ ಡೆಸ್ಕ್ : ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತು ವರದಿ ಸಲ್ಲಿಸಲು ರಚಿತವಾಗಿರುವ ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗಕ್ಕೆ ಅಹವಾಲು ಅಥವಾ ಸಲಹೆಗಳನ್ನು ಇದೇ ತಿಂಗಳ 8 ರೊಳಗೆ ಸಲ್ಲಿಸುವಂತೆ ಆಯೋಗ ತಿಳಿಸಿದೆ.

ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಮೂರು ತಿಂಗಳೊಳಗೆ ವಿಚಾರಣಾ ವರದಿಯನ್ನು ಸಲ್ಲಿಸಲು ಆಯೋಗಕ್ಕೆ ಸೂಚಿಸಿದೆ. ಸಾರ್ವಜನಿಕರು, ವಿಶೇಷವಾಗಿ ಜನಪ್ರತಿನಿಧಿಗಳು, ಕಾರ್ಯದರ್ಶಿಗಳು, ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗ, ಕೊಠಡಿ ಸಂಖ್ಯೆ, 133ಮತ್ತು 134ಮೊದಲನೇ ಮಹಡಿ, ವಿಕಾಸಸೌಧ ಇಲ್ಲಿ ತಮ್ಮ ಅಹವಾಲು ಅಥವಾ ಸಲಹೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version