ದಿನದ ಸುದ್ದಿ
ಹಿರಿಯೂರಿನಲ್ಲಿ 1 ಸಾವಿರದ 200 ಎಕರೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣ : ಸಚಿವ ಡಿ.ಸುಧಾಕರ್
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಹಿರಿಯೂರು ತಾಲೂಕಿನಲ್ಲಿ ಸುಮಾರು 1 ಸಾವಿರದ 200 ಎಕರೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣ ಆಗುತ್ತಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಾಂಖಿಕ ಮತ್ತು ಯೋಜನಾ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ.
ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ನೇರ ರೈಲು ಮಾರ್ಗದ ಭೂಸ್ವಾಧೀನ ಕುರಿತು ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಹಾಗೂ ಹಿರಿಯೂರು ಭಾಗದ ಮಾರ್ಗದಲ್ಲಿ ಸುಮಾರು 180 ಎಕರೆ ಭೂಸ್ವಾಧೀನ ಪ್ರಕ್ರಿಯೆ ಆಗಬೇಕಿದೆ ಎಂದು ಹೇಳಿದರು. ಭದ್ರಾ ಮೇಲ್ದಂಡೆ ಯೋಜನೆಯಡಿ ಹಾಗೂ ಸಣ್ಣ ನೀರಾವರಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಿರಿಯೂರಿನ ಕೆರೆಗಳನ್ನು ತುಂಬಿಸಲು ನೀಲ ನಕಾಶೆ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243