ದಿನದ ಸುದ್ದಿ
ಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
ಸುದ್ದಿದಿನ,ಹೊಳಲ್ಕೆರೆ: ತಾಲ್ಲೂಕಿನ ಮಲ್ಲಾಡಿಹಳ್ಳಿಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನುಬಾಹಿರವಾಗಿ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಭಾಗಿಯಾಗಿರುವ ಪ್ರಾಂಶುಪಾಲ ಡಾ.ರವಿ ಎಸ್.ಪಿ ಇವರ ವಿರುದ್ಧ ವಕೀಲ ಡಾ.ಕೆ.ಎ.ಓಬಳೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಡಾ.ಕೆ.ಎ.ಓಬಳೆಶ್ ಅವರು ಮಾಹಿತಿಹಕ್ಕು ಅಡಿಯಲ್ಲಿ ಸದರಿ ಕಾಲೇಜಿಗೆ 2019-20 ರಿಂದ 2023-24ನೇ ಸಾಲಿನ ಅವಧಿಯಲ್ಲಿ ಕಾಲೇಜು ನಿರ್ವಹಣೆಗೆ ಬಿಡುಗಡೆಯಾದ ಅನುದಾನದ ಮಾಹಿತಿಯನ್ನು ಖರೀದಿಗೆ ಸಂಬAಧಿಸಿದ ದಾಖಲೆ ಪಡೆದು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಕೆ.ಟಿ.ಪಿ.ಪಿ ನಿಯಮವನ್ನು ಉಲ್ಲಂಘನೆ ಮಾಡಿ ಖರೀದಿ ವ್ಯವಹಾರ ನಡೆಸಿರುವುದು ಮಾತ್ರವಲ್ಲದೆ ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಖರೀದಿ ವ್ಯವಹಾರಕ್ಕೆ ಮುಂದಾಗಿರುವುದು ಕಂಡುಬಂದಿರುತ್ತದೆ.
ಇಷ್ಟೆ ಅಲ್ಲದೆ ಲಕ್ಷಾಂತರ ರೂಪಾಯಿಗಳ ಖರೀದಿ ವ್ಯವಹಾರದಲ್ಲೂ ಟಿ.ಡಿ.ಎಸ್ ಕಟಾವಣೆ ಮಾಡದೆ ಸರ್ಕಾರದ ಬೊಕ್ಕಸಕ್ಕೆ ವಂಚಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತಾಕ್ಕೆ ನೀಡಿದ ದೂರು ಅರ್ಜಿಯಲ್ಲಿ ಆರೋಪಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243