ಲೈಫ್ ಸ್ಟೈಲ್
ಜೇನುತುಪ್ಪದಿಂದ ಆರೋಗ್ಯ ಭಾಗ್ಯ..!
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.
ಜೇನುತುಪ್ಪದ ಉಪಯೋಗಗಳು
- ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ .
- ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.
- ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.
- ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.
- ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು.
- ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು.
- ಯಾವುದೇ ಔಷಧಿಯನ್ನು ಜೇನು ತುಪ್ಪದೊಂದಿಗೆ ಸೇವಿಸಿದರೆ ಶೀಘ್ರ ಗುಣ ಕಂಡು ಬರುತ್ತದೆ.
- ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.
- ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.
- ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.
- ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.
- ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.
- ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
- ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.
- ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.
- ಜೇನು ತುಪ್ಪವನ್ನು ನಿಯಮಿತವಾಗಿ ಸೇವಿಸುವುದರಿಂದ ಸಂಭೋಗ ಶಕ್ತಿಯಲ್ಲಿ ವೃದ್ಧಿ ಉಂಟಾಗುವುದು. ಸ್ವಪ್ನ ಸ್ಖಲನವಾಗುವ ಸಾಧ್ಯತೆ ಇರುವುದಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ3 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ23 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


