ದಿನದ ಸುದ್ದಿ
ಮಾಜಿ ಪ್ರಧಾನಿ ಇಂದಿರಾಗಾಂಧಿ ಭಾವಚಿತ್ರಕ್ಕೆ ಮಸಿ; ಕಿಡಿಗೇಡಿಗಳ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಶಾಸಕ ಶಾಂತನಗೌಡ
ಸುದ್ದಿದಿನ,ದಾವಣಗೆರೆ: ಚಿಗಟೇರಿ ಆಸ್ಪತ್ರೆ ಬಳಿಯ ಇಂದಿರಾಗಾಂಧಿ ಕ್ಯಾಂಟೀನ್ ನಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದಿದ್ದು, ಮಾಜಿ ಶಾಸಕ ಜಿ.ಶಾಂತನಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಮಾಜಿ ಪ್ರಧಾನಿಗೆ ಅಪಚಾರ ಮಾಡಿರುವ ಕಿಡಿಗೇಡಿಗಳ ಈ ಕೃತ್ಯ ಖಂಡನೀಯ. ಕೆಲವರಲ್ಲಿ ವಿಕೃತ ಮನಸ್ಥಿತಿ ಹೆಚ್ಚಾಗುತ್ತಿದೆ. ಸಂವಿಧಾನ ಶಿಲ್ಪಿ ದಾದಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳಿಗೂ ಅಪಚಾರ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ. ದೇಶಕ್ಕೆ ಸೇವೆ ಸಲ್ಲಿಸಿದ ಗಣ್ಯರಿಗೆ ಅಪಚಾರ ಮಾಡುವುದು ಹೀನ ಮನಸ್ಥಿತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಲಿಂಕ್ ಮೇಲೆ ಕ್ಲಿಕ್ ಮಾಡಿ
https://suddidina.com/daily-news/about-indira-gandhi-and-davangere/
ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರು ದೇಶದ ಪ್ರಗತಿ ಹಲವು ಕೊಡುಗೆ ನೀಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಬಡವರ ಹಸಿವು ನೀಗಿಸುವ ಕೆಲಸ ಮಾಡಿದ್ದಾರೆ. ಉಳುವವನೇ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ಯೋಜನೆ ಮೂಲಕ ನಿರ್ಗತಿಕರ ಬಡತನ ದೂರ ಮಾಡಿದ್ದಾರೆ. ಅಂತಹವರ ಬಗ್ಗೆ ಕೆಲವರು ರಾಜಕೀಯ ಕಾರಣಕ್ಕಾಗಿ ಹೆಸರಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಇದು ಸಲ್ಲದು. ಮಹನೀಯರ ಭಾವಚಿತ್ರ ಹಾಗೂ ಪ್ರತಿಮೆಗಳಿಗೆ ಅಪಮಾನ ಮಾಡುವವರಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243