ಸಿನಿ ಸುದ್ದಿ
ನಟ ರವಿಚಂದ್ರನ್ ಗೆ ಗೌರವ ಡಾಕ್ಟರೇಟ್
ಸುದ್ದಿದಿನ,ಬೆಂಗಳೂರು : ಬೆಂಗಳೂರು ನಗರ ವಿಶ್ವವಿದ್ಯಾನಿಲಯವು ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಘೋಷಣೆ ಮಾಡಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ಸಂಗೀತ ನಿರ್ದೇಶಕ, ಸಂಕಲನಕಾರ, ಚಿತ್ರ ಸಾಹಿತಿ ಆಗಿ ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿರುವ ಕಾರಣ ಅವರ ಸಾಧನೆಯನ್ನು ಗುರುತಿಸಿ ಅವರರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ ಎಂದು ವಿವಿಯ ಕುಲಪತಿ ಲಿಂಗರಾಜ್ ಗಾಂಧಿ ಅವರು ತಿಳಿಸಿದ್ದಾರೆ.
ನೀಡಿರುವ ವಿಶ್ವವಿದ್ಯಾನಿಲಯದ ಕುಲಪತಿಯಾಗಿರುವ ಲಿಂಗ್‌ರಾಜ್ ಗಾಂಧಿ ಅವರು ಈ ಕುರಿತು ಮಾಹಿತಿ ನೀಡಿದ್ದು,
ಬೆಂಗಳೂರು ವಿವಿಯ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ನಟ ವಿ.ರವಿಚಂದ್ರನ್ ಸೇರಿದಂತೆ ಮೂವರು ಸಾಧಕರಿಗೆ ಗೌರವ ಪ್ರಧಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ |ತೋಟಗಾರಿಕೆ ತರಬೇತಿ ; ಅರ್ಜಿ ಆಹ್ವಾನ
ಈ ಪ್ರಶಸ್ತಿ ಪ್ರಧಾನ ಸಮಾರಂಭವು ಇದೇ ತಿಂಗಳ 11ರಂದು ಘಟಿಕೋತ್ಸವ ಕಾರ್ಯಕ್ರಮ ಆಯೋಜಿಸಿ ಗೌರವಿಸಲಾಗುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನ ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೊತಿ ಆಡಿಟೋರಿಯಂ ನಲ್ಲಿ ನಡೆಯಲಿದೆ ಎಂದು ಮಾಹಿತಿ ತಿಳಿಸಿದ್ದಾರೆ.
ಈ ಘಟಿಕೋತ್ಸವದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿ. ರವಿಚಂದ್ರನ್, ಸಮಾಜ ಸೇವೆಗಾಗಿ ಎಂ. ಆರ್ ಜೈ ಶಂಕರ್, ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಸತ್ಯನಾರಾಯಣ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243