ಲೈಫ್ ಸ್ಟೈಲ್
ಗುರುವಾರದ ಭವಿಷ್ಯ | ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹದಂತಹ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ಪರಿಹಾರ : ಕರೆಮಾಡಿ
ಶ್ರೀ ದತ್ತಾತ್ರೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ:9945410150
ಮೇಷ ರಾಶಿ
ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸುವುದು ನಿಮ್ಮ ಕಾಯಿಲೆಯನ್ನು ಇನ್ನಷ್ಟು ಉಲ್ಬಣಿಸಬಹುದಾದ್ದರಿಂದ ಹಾಗೆ ಮಾಡಬೇಡಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರು ಬೆಂಬಲ ನೀಡಿದರೂ ತುಂಬ ಬೇಡಿಕೆಯಿಡುತ್ತಾರೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಇಂದು ಪ್ರಣಯದ ಯಾವುದೇ ಆಸೆಯಿಲ್ಲ ದೇಶಿ ವ್ಯಾಪಾರಕ್ಕೆ ಸೇರಿರುವ ಜನರು, ಇಂದು ಅವರು ಅಪೇಕ್ಷಿತ ಫಲಿತಾಂಶವನ್ನು ಪಡೆಯುವ ಸಂಪೂರ್ಣ ಭರವಸೆ ಇದೆ. ಇದರೊಂದಿಗೆ ಉದ್ಯೋಗಕ್ಕೆ ಸಂಬಂಧಿಸಿದ ಈ ರಾಶಿಚಕ್ರದ ಜನರು, ತನ್ನ ಪ್ರತಿಭೆಯ ಪೂರ್ತಿ ಬಳಕೆಯನ್ನು ಕೆಲಸದ ಸ್ಥಳದಲ್ಲಿ ಮಾಡಬಹುದು. ಹಣಕಾಸು, ಪ್ರೀತಿ, ಕುಟುಂಬದಿಂದ ದೂರ ಹೋಗಿ ಇಂದು ನೀವು ಆನಂದವನ್ನು ಹುಡುಕುತ್ತ ಯಾವುದೇ ಆಧ್ಯಾತ್ಮಿಕ ಗುರುವನ್ನು ಭೇಟಿ ಮಾಡಲು ಹೋಗಬಹುದು. ನಿಮ್ಮ ಸಂಗಾತಿ ನೀವು ಹೊಂದಿರುವ ಅಷ್ಟೇನೂ ಸಾಮರಸ್ಯವಿರದ ವೈವಾಹಿಕ ಜೀವನದ ಬಗ್ಗೆ ನಿಮ್ಮ ಜೊತೆ ಜಗಳವಾಡಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ಜಾಮೀನು ನೀಡುವುದು ಅಥವಾ ಮತ್ತೊಬ್ಬರ ಸಾಲಗಳಿಗೆ ಹೊಣೆ ಯಾಗುವುದು ಸರಿಯಲ್ಲ, ಇದು ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರ. ಗೃಹ ಖರೀದಿಗೆ ಆಸಕ್ತಿ ವಹಿಸುವಿರಿ. ಕಟ್ಟಡ ಕಾಮಗಾರಿಗಳು ವೇಗ ಪಡೆಯಲಿದೆ. ಸುಸ್ಥಿರ ಆರ್ಥಿಕ ಅಭಿವೃದ್ಧಿ ಒತ್ತು ನೀಡುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಮಕ್ಕಳ ವರ್ತನೆ ಬಗ್ಗೆ ಆದಷ್ಟು ಗಮನ ಇಡುವುದು ಸೂಕ್ತ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಸಿಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಉತ್ತಮವಾಗಿ ನಡೆಯಲಿದೆ. ವ್ಯವಹಾರದಲ್ಲಿ ಮೋಸ ಹೋಗಬಹುದಾದ ಸಾಧ್ಯತೆ ಇದೆ ಎಚ್ಚರ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಪತ್ನಿಯೊಡನೆ ವಿನಾಕಾರಣ ವೈಮನಸ್ಸು ಸೃಷ್ಟಿಸುವುದು ಸರಿ ಕಾಣುವುದಿಲ್ಲ. ನಿಮ್ಮ ಕಠೋರ ಮಾತುಗಳಿಂದ ಸಮಸ್ಯೆ ಬರಬಹುದಾಗಿದೆ. ಕಚೇರಿ ಕಾರ್ಯಗಳಲ್ಲಿ ವಿಳಂಬವಾಗುವ ಸಾಧ್ಯತೆ ಕಾಣಬಹುದು. ಆರ್ಥಿಕ ವ್ಯವಹಾರಗಳಲ್ಲಿ ಜಾಗ್ರತೆಯಾಗಿ ಇರತಕ್ಕದ್ದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಕುಶಲಕರ್ಮಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಹಳೆಯ ಹೂಡಿಕೆಗಳು ಲಾಭಾಂಶ ತರಲಿದೆ. ಆತ್ಮೀಯರೊಡನೆ ಈ ದಿನ ಸಂತೋಷವಾಗಿ ಕಾಲ ಕಳೆಯುತ್ತೀರಿ. ಮನೆಗೆ ನೆಂಟರಿಷ್ಟರ ಆಗಮನ ಆಗುವುದು. ದುಂದುವೆಚ್ಚವನ್ನು ಆದಷ್ಟು ಸರಿಪಡಿಸಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಇನ್ನೊಬ್ಬರೊಡನೆ ತುಲನೆ ಮಾಡಿಕೊಳ್ಳುವ ಸ್ವಭಾವ ತೆಗೆದುಹಾಕಿ. ನಿಮ್ಮ ದಿನ ಆತ್ಮಬಲವನ್ನು ವೃದ್ಧಿಸಿಕೊಂಡು ಕಾರ್ಯದಲ್ಲಿ ಪಾಲ್ಗೊಳ್ಳಿ. ಸಂಗಾತಿಯ ಚುಚ್ಚು ಮಾತುಗಳು ನಿಮಗೆ ಸಿಟ್ಟು ತರಿಸಬಹುದು ತಾಳ್ಮೆ ಅಗತ್ಯವಾಗಿದೆ. ಯೋಗಧ್ಯಾನ ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಪರಿಹರಿಸಿಕೊಳ್ಳುವುದು ಕ್ಷೇಮ. ಮಧ್ಯವರ್ತಿ ಕೆಲಸಗಾರರಿಗೆ ಅತ್ಯುತ್ತಮವಾಗಿದ್ದು ಹೆಚ್ಚಿನ ಲಾಭಾಂಶದ ದಿಕ್ಸೂಚಿ ಕಾಣಲಿದೆ. ಮಾಡುವ ಕೆಲಸದಲ್ಲಿ ಅಂತಿಮ ಘಟ್ಟದವರೆಗೂ ಸಹ ಕ್ರಿಯಾಶೀಲತೆ ತುಂಬಿಕೊಳ್ಳಿ. ಹಣಕಾಸಿನ ವಿಷಯದಲ್ಲಿ ಅಷ್ಟೇನೂ ಸಾಧಕವಾಗಿ ಕಂಡುಬರುವುದಿಲ್ಲ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಹಿರಿಯರೊಡನೆ ಮನಸ್ತಾಪ ವಾಗುವ ಸಾಧ್ಯತೆ ಇದೆ. ಪ್ರಯಾಣ ಗಳಿಂದ ದೇಹದಲ್ಲಿ ಆಯಾಸ ಹೆಚ್ಚಾಗುತ್ತದೆ. ಮೋಸದ ಹೂಡಿಕೆಗಳಿಂದ ದೂರವಿರಿ. ಸಾಲ ತೆಗೆದುಕೊಳ್ಳುವ ಅಥವಾ ಕೊಡುವ ವಿಚಾರಕ್ಕೆ ಕೈಹಾಕಬೇಡಿ. ಮಕ್ಕಳಿಂದ ನಿಮ್ಮಲ್ಲಿ ಮೂಡುವ ಬೇಸರ ಮಾಯವಾಗುತ್ತದೆ. ಕಿರಿಕಿರಿಯೆನಿಸುವ ಸಂದರ್ಭಗಳು ಹೆಚ್ಚಾಗುತ್ತದೆ. ಧೈರ್ಯ ಸರ್ವತ್ರ ಸಾಧನ ಎಂಬಂತೆ ನೀವು ನಡೆದುಕೊಳ್ಳಿ. ಉದ್ಯೋಗ ಸ್ಥಳದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿದೆ, ಇದು ಸಹವರ್ತಿಗಳಿಂದ ಹೊಟ್ಟೆಕಿಚ್ಚು ಪಡುವ ವಾತಾವರಣ ನಿರ್ಮಿಸುವುದು ನಿಶ್ಚಿತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಆಧ್ಯಾತ್ಮದತ್ತ ಒಲವು ಮೂಡಲಿದೆ, ಗುರುವಿನ ಕೃಪಾಕಟಾಕ್ಷ ನಿಮಗೆ ಸಿದ್ದಿ ಸಬಹುದಾದ ದಿನ. ಕ್ರಿಯಾತ್ಮಕ ಚಟುವಟಿಕೆಗಳಿಂದ ಕಾರ್ಯವನ್ನು ಮಾಡಲಿದ್ದೀರಿ, ಅದನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಉತ್ತೆಜನಕ್ಕೆ ವ್ಯವಸ್ಥೆ ಮಾಡಿಕೊಳ್ಳಿ. ಕುಟುಂಬದಲ್ಲಿ ನಿರ್ಮಾಣವಾಗಿರುವ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳಿತು. ಕುಲಾದೇವತಾ ದರ್ಶನಕ್ಕೆ ಹೋಗುವ ಯೋಚನೆಯಲ್ಲಿ ಇರುವುದು ಕಂಡುಬರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ನಿಮ್ಮ ಬಹುದಿನದ ಪ್ರಯತ್ನಗಳು ಶುಭಕರವಾಗಿ ಸಕಾರಗೊಳ್ಳುವ ಸಮಯವನ್ನು ಈ ದಿನ ವೀಕ್ಷಿಸಲಿದ್ದೀರಿ. ಉದ್ಯೋಗದಲ್ಲಿನ ಕೆಲವು ಪ್ರಮಾದಗಳನ್ನು ಸರಿಪಡಿಸಿಕೊಳ್ಳುವ ಮನಸ್ಥಿತಿಯಲ್ಲಿ ಕಾಣಬಹುದಾಗಿದೆ. ವ್ಯಾಜ್ಯಗಳಲ್ಲಿ ನಿರೀಕ್ಷಿತ ಗೆಲುವು ನಿಮ್ಮಂತೆಯೇ ಕಂಡುಬರುತ್ತದೆ. ಹಿರಿಯರು ನಿಮ್ಮ ವಿಶಾಲ ಮನಸ್ಥಿತಿಯನ್ನು ಕಂಡು ಸಂಪೂರ್ಣ ಜವಾಬ್ದಾರಿಯನ್ನು ನೀಡಲಿದ್ದಾರೆ. ಮಧ್ಯವರ್ತಿ ಕೆಲಸಗಾರರಿಗೆ ಉತ್ತಮವಾದ ದಿನವಾಗಿದ್ದು ಧನ ಲಾಭದ ನಿರೀಕ್ಷೆ ಇದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಸಂಗೀತ ಕಲೆಗಳಲ್ಲಿ ವಿಶೇಷ ಆಸಕ್ತಿ ಮೂಡುವ ಸಾಧ್ಯತೆ ಕಾಣಬಹುದು. ರುಚಿಕರವಾದ ಸ್ವಾದಿಷ್ಟ ಭೋಜನ ವ್ಯವಸ್ಥೆ ಕಂಡುಬರಲಿದೆ. ಸಂಗಾತಿ ಮುಕ್ತವಾದ ಮಾತುಕತೆ, ಭವಿಷ್ಯದ ಏಳಿಗೆಗೆ ಚರ್ಚೆಗಳನ್ನು ನಡೆಸುವಿರಿ. ಈ ದಿನ ದಾಂಪತ್ಯ ಜೀವನ ಸುಂದರವಾಗಿ ಇರಲಿದೆ. ಕುಟುಂಬದಲ್ಲಿ ಬಿನ್ನಾಭಿಪ್ರಾಯ ತಲೆದೋರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ:9945410150

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

ದಿನದ ಸುದ್ದಿ
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್‌ಗಳಾದ ಓಲಾ, ಉಬರ್, ರ‍್ಯಾಪಿಡೋ ನಂತಹ ಆ್ಯಪ್‌ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್‌ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
http://Visit : www.suddidina.com
ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.
ನಮ್ಮ ಬಿಎಂಟಿಸಿ 2.0′ ಆ್ಯಪ್‌ನಲ್ಲಿ ಏನಿದೆ ಹೊಸತು?
ಖಾಸಗಿ ಆ್ಯಪ್‌ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್‌ನಲ್ಲಿ ಬಿಎಂಟಿಸಿ ನೆಟ್‌ವರ್ಕ್‌ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಒಟ್ಟು 6,938 ಬಸ್‌ಗಳಿವೆ. ಪ್ರತಿದಿನ ಸರಾಸರಿ 6,200 ಬಸ್‌ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.
ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ:
ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
200 ಹೊಸ ಮಿನಿ ಬಸ್‌ಗಳ ಖರೀದಿ:
ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್‌ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್‌ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್‌ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್‌ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್‌ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:
ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ 200 ಮಿನಿ ಎಸಿ ಇ-ಬಸ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್‌ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.



