Connect with us

ದಿನದ ಸುದ್ದಿ

ನಿತ್ಯ ಭವಿಷ್ಯ- ಶನಿವಾರ | ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ : ಕರೆಮಾಡಿ

Published

on

ಶ್ರೀ ದುರ್ಗಾ ಆಂಜನೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ಕಚೇರಿ ವ್ಯಾಜ್ಯಗಳಲ್ಲಿ ನಿಮ್ಮ ಹಿತ ನೆರವೇರುವ ಸಾಧ್ಯತೆ ಇದೆ. ಕಾರ್ಯಗಳು ಮಾಡುವ ಮುನ್ನ ಕೆಲಸದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ. ಸಂಗಾತಿಯೊಡನೆ ಮನೋರಂಜನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೊಸ ಒಪ್ಪಂದಗಳನ್ನು ಈ ದಿನ ಮಾಡಲು ಬಯಸುವಿರಿ, ಎಚ್ಚರ ಇರಬೇಕಾದ ಸಮಯವಿದು ಯೋಜನೆಯ ಲಾಭಾಂಶವಾಗಿ ಕಂಡರೂ ಸಹ ಅದು ಒಳಭಾಗದಲ್ಲಿ ನಕಾರಾತ್ಮಕ ಫಲಿತಾಂಶದಿಂದ ಕೂಡಿರಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ಈದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ. ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಮಯವಿದು. ಇನ್ನೊಬ್ಬರನ್ನು ನಂಬಿ ಜೀವನ ನಡೆಸುವುದನ್ನು ತ್ಯಜಿಸತಕ್ಕದ್ದು. ಕೆಲಸದಲ್ಲಿ ಆದಷ್ಟು ಪಾಲ್ಗೊಳ್ಳಿ. ಸೋಮಾರಿತನ ಅಥವಾ ಅಂಜಿಕೆಯ ಸ್ವಭಾವನ್ನು ತೆಗೆದಿಟ್ಟು ಮುನ್ನಡೆಯಿರಿ. ದೈವ ಕೃಪಾಕಟಾಕ್ಷಕ್ಕೆ ಮೊರೆಹೋಗುವ ಸಾಧ್ಯತೆ ಕಾಣಬಹುದು. ಯಶಸ್ವಿದಾಯಕ ನಿರ್ಣಯಗಳು ನಿಮ್ಮಿಂದ ಈ ದಿನ ಬರಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಹಣಕಾಸಿನ ವ್ಯವಹಾರ ನಿಮ್ಮ ವಿಚಾರದಂತೆ ನಡೆಯಲಿದೆ. ವ್ಯವಹಾರದಲ್ಲಿ ಆದಷ್ಟು ಇನ್ನೊಬ್ಬರ ಹಸ್ತಕ್ಷೇಪವನ್ನು ತಡೆಗಟ್ಟಿ. ನೀವು ಮಾಡುವ ಕಾರ್ಯಗಳು ಪ್ರಶಂಸೆ ಪಡೆಯಲಿದೆ. ನಿಮ್ಮ ವಿಚಾರಗಳಂತೆ ಯೋಚಿಸುವ ಗೆಳೆಯರು ಸಿಗಬಹುದು. ಅಸಾಧ್ಯವಾದ ಕಾರ್ಯಗಳನ್ನು ಸಲೀಸಾಗಿ ಮಾಡಿಮುಗಿಸುವ ವಿಚಾರಶಕ್ತಿ ನಿಮ್ಮಲ್ಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಹಣಕಾಸಿನ ವಿಚಾರಗಳಲ್ಲಿ ಇಂದು ಬಹುತೇಕ ಹಿನ್ನಡೆ ಕಾಣಬಹುದು. ಕುಂಟುತ್ತಿರುವ ನಿಮ್ಮ ಅರ್ಥವ್ಯವಸ್ಥೆಯನ್ನು ಸರಿದಾರಿಗೆ ತೆಗೆದುಕೊಂಡು ಬರಬೇಕಾಗಿದೆ. ಹಿತವಚನಗಳನ್ನು ಸಮಾಧಾನಚಿತ್ತದಿಂದ ಕೇಳುವುದು ಒಳಿತು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಹಿರಿಯರ ಬಗ್ಗೆ ಗೌರವವನ್ನು ರೂಡಿಸಿಕೊಳ್ಳಿ. ಮಾತಿನಲ್ಲಿ ವಿನಯತೆ ಇದ್ದರೆ ನಿಮ್ಮ ಕಾರ್ಯಗಳು ಸುಲಭವಾಗುತ್ತದೆ. ಬಂಧು ವರ್ಗದಿಂದ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಜಮೀನು ಮಾರಾಟ ಮಾಡುವ ಯೋಚನೆ ನೆನೆಗುದಿಗೆ ಬೀಳಬಹುದಾದ ಸಾಧ್ಯತೆ ಕಾಣುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಬಲಿಷ್ಠ ವ್ಯಕ್ತಿತ್ವದವರಾದ ನೀವು ಕೆಲವು ಮಾನಸಿಕ ಚಿಂತೆಗಳಿಂದ ಕುಗ್ಗ ಬಹುದಾದ ಸಾಧ್ಯತೆ ಇದೆ. ಕುಟುಂಬದಲ್ಲಿ ವಾದ-ವಿವಾದಗಳು ಹೆಚ್ಚಾಗುವ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕವಾದ ವಿಷಯಗಳು ಚರ್ಚಾಸ್ಪದವಾಗಿ ಕಾಣಿಸಬಹುದಾದ ಸಾಧ್ಯತೆ ಇದೆ. ಬಹುನಿರೀಕ್ಷಿತ ಯೋಜನೆಯು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸದೃಢರನ್ನಾಗಿ ಮಾಡಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ಹಣಕಾಸಿನಲ್ಲಿ ಉತ್ತಮ ಆದಾಯ ಇಂದು ನಿರೀಕ್ಷಿಸಬಹುದು. ಮಿತ್ರ ವರ್ಗದಲ್ಲಿ ಅಸೂಯೆ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ನಿಮ್ಮಲ್ಲಿನ ಪ್ರತಿಭೆಗೆ ಹೇರಳವಾದ ಅವಕಾಶಗಳು ದೊರೆಯಲಿದೆ. ದಂಪತಿಗಳಲ್ಲಿ ಮನಸ್ತಾಪಗಳನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಕಾರ್ಯ ಆರಂಭಿಸಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಅಧ್ಯಯನಶೀಲತೆ ಎಂಬುದು ನಿರಂತರವಾಗಿರಲಿ, ಮನಸ್ಸು ಚಂಚಲ ಮಾಡಿಕೊಂಡು ಶಿಕ್ಷಣದ ಬಗ್ಗೆ ಅಲಕ್ಷ ಮಾಡಬೇಡಿ. ನೌಕರಿಯ ವಿಷಯದಲ್ಲಿ ಉತ್ತಮ ಪ್ರತಿಫಲ ನಿಮಗೆ ದೊರೆಯಲಿದೆ ಆದರೆ ಪ್ರಯತ್ನ ಮುಂದುವರೆಯುವುದು ಒಳ್ಳೆಯದು. ಮಕ್ಕಳಿಗಾಗಿ ಇಂದು ಅಧಿಕ ಹಣಕಾಸು ಖರ್ಚು ಮಾಡುವ ಸಾಧ್ಯತೆ ಇದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಹೊಸ ವಸ್ತುಗಳ ಖರೀದಿಗೆ ಇಂದು ಅವಕಾಶ ದೊರೆಯಲಿದೆ. ಗಳಿಸಿರುವ ಸ್ನೇಹವನ್ನು ಉಳಿಸಿಕೊಂಡು ಹೋಗುವುದು ನಿಮ್ಮ ವ್ಯಕ್ತಿತ್ವ ಪ್ರಕಾಶಮಾನವಾಗಿಸುತ್ತದೆ. ಕುಟುಂಬಕ್ಕಾಗಿ ಒಂದು ಉತ್ತಮ ಕೆಲಸ ಮಾಡುವ ಅವಕಾಶ ಲಭಿಸಲಿದೆ. ಸಂಗಾತಿಯ ಕೆಲವು ಪ್ರಶ್ನೆಗಳು ನಿಮಗೆ ಮನಸ್ಸಿನಲ್ಲಿ ಬಹು ಕಾಡಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ: 9945410150

ದಿನದ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

Published

on

ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ ದೇವಸ್ಥಾನದ ಸುತ್ತಮುತ್ತಲು ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತೆಯಾಗಿ ಮದ್ಯಪಾನವನ್ನು ನಿಷೇದಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯವೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.

ಅವರು ಫೆ.17 ರಂದು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ದೇವಸ್ಥಾನದ ಬಳಿ ಏರ್ಪಡಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಟ್ಟು ಐದು ಸಭೆಗಳನ್ನು ನಡೆಸಲಾಗಿದೆ. ಕಳೆದ ಜಾತ್ರೆಯಲ್ಲಿನ ಅನುಭವಗಳ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ಮತ್ತು ಧರ್ಮದರ್ಶಿಗಳು ನೀಡಿದ ಸಲಹೆಗಳನ್ನು ಈ ಬಾರಿ ಜಾರಿಗೆ ತರಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ ಸ್ವಚ್ಛಗೊಳಿಸದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 100 ಟ್ರಕ್ ಲೋಡ್ಗಳಷ್ಟು ಹೂಳನ್ನು ಹೊರತೆಗೆಯಲಾಗಿದೆ. ಬಾರ್ಲೈನ್ ರಸ್ತೆ, ರೇಣುಕಾ ಮಂದಿರ ರಸ್ತೆ ಮತ್ತು ಡಬಲ್ ರೋಡ್ಗಳಲ್ಲಿ ಚರಂಡಿ ನೀರು ಉಕ್ಕಿ ಹರಿಯದಂತೆ ಕ್ರಮ ಕೈಗೊಂಡು ರಸ್ತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.

ಬೆಸ್ಕಾಂ ಲೈನ್ಗಳಲ್ಲಿನ ತೊಂದರೆಗಳನ್ನು ಸರಿಪಡಿಸಲಾಗಿದೆ ಮತ್ತು ತೆರೆದಿದ್ದ ಟ್ರಾನ್ಸ್ಫಾರ್ಮರ್ಗಳನ್ನು ಮುಚ್ಚಿ ರಕ್ಷಣೆ ಒದಗಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಸೊಳ್ಳೆಗಳ ಕಾಟವಿಲ್ಲದಂತೆ ಮತ್ತು ನೀರು ನಿಲ್ಲದಂತೆ ಕ್ರಮ ವಹಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸೇರಿ ಸುಗಮ ಸಂಚಾರಕ್ಕಾಗಿ ಎರಡು ಬಾರಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ದೇವಸ್ಥಾನದ ಸುತ್ತಮುತ್ತಲು ಇರುವ ದೇವಸ್ಥಾನಗಳು ಮತ್ತು ಕಳೆದ ಬಾರಿ ಬಿಟ್ಟುಹೋಗಿದ್ದ ದೇವಸ್ಥಾನಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣನವರಂತಹ ಮಹನೀಯರ ಪ್ರತಿಮೆಗಳನ್ನು ಜಲಪ್ರೋಕ್ಷಣೆ ಮಾಡಿ ಸ್ವಚ್ಛಗೊಳಿಸಲು ಆದೇಶಿಸಲಾಗಿದೆ, ಸ್ವಚ್ಛತಾ ಕಾರ್ಯ ಮುಗಿದ ನಂತರ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಸುರಕ್ಷತಾ ದೃಷ್ಠಿಯಿಂದ ದುರ್ಗಾಂಭ ದೇವಸ್ಥಾನದ ಸುತ್ತಮುತ್ತಲು ಉಪವಿಭಾಗಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರು ಇವರುಗಳನ್ನ ನೊಡೆಲ್ ಅಧಿಕಾರಿಗಳು, ಚೌಡೇಶ್ವರಿ ದೇವಸ್ಥಾನ ಮತ್ತು ವಿನೋಬ್ ನಗರ ಸುತ್ತಮುತ್ತಲು ನೋಡಲ್ ಅಧಿಕಾರಿಗಳು ಮತ್ತು ಕಾಯಿ ಪೇಟೆ ಮತ್ತು ವಸಂತ ಟಾಕೀಸ್ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಆಯುಕ್ತರು ರವರನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸದರಿ ಅಧಿಕಾರಿಗಳು ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸುವರು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ದುರ್ಗಾಂಭಿಕ ದೇವಸ್ಥಾನದ ಸುತ್ತಮುತ್ತಲ ದೇವಸ್ಥಾನಗಳಿಗೆ ಸುಮಾರು 51 ಲಕ್ಷ ವೆಚ್ಚದಲ್ಲಿ ಬಣ್ಣವನ್ನು ಬಳಿಯಲಾಗುತ್ತಿದೆ, ದೇವಸ್ಥಾನದ ಬಳಿ 24 ಗಂಟೆ ಕುಡಿಯುವ ನೀರು , 30 ಸ್ವಚ್ಚತಾ ಸಿಬ್ಬಂದಿಗಳ ನೇಮಕ, ಉರುಳು ಸೇವೆ ಮಾಡಲು ಮರಳು, ಸ್ನಾನ ಮಾಡಲು 20 ನಳಗಳ ವ್ಯವಸ್ಥೆ ಮಾಡಲಾಗಿದ್ದು ಇವುಗಳಿಗೆ 11 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಚೌಡೇಶ್ವರಿನಗರ, ವಿನೋಬ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮತ್ತು ಒಳಚರಂಡಿ ವ್ಯವಸ್ಥೆಯನ್ನು ದುರಸ್ತಿ ಮಾಡಲಾಗಿದೆ. ದೇವಸ್ಥಾನದ ಸುತ್ತಮುತ್ತಲು, ಸಂಗೊಳ್ಳಿ ರಾಯಣ್ಣ ಸರ್ಕಲ್, ಗುಂಡಿ ಸರ್ಕಲ್, ದಾವಣಗೆರೆ ನಗರಕ್ಕೆ ಪ್ರವೇಶಿಸುವ ರಸ್ತೆಗಳು, ಮಹಾನಗರ ಪಾಲಿಕೆ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಗಳಲ್ಲಿ ದೀಪಾಲಂಕಾರ ಮಾಡಲಾಗಿದೆ , ದೇವಸ್ಥಾನದ ಸುತ್ತಮುತ್ತಲು ಪಾರ್ಕಿಂಗ್ ಸ್ಥಳದಲ್ಲಿ ಶೌಚಾಲಯಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಮಾತನಾಡಿ, ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತಲು ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಸರಗಳ್ಳತನ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತಾ ದೃಷ್ಠಿಯಿಂದ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ದೇವಸ್ಥಾನದ ಪಕ್ಕದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ. ಭಕ್ತಾಧಿಗಳಿಗೆ ಹಾಗೂ ವಿವಿಐಪಿಗಳಿಗೆ ದರ್ಶನಕ್ಕೆ ಅನುಕೂಲಕರವಾಗಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.

ಸುಗಮ ಸಂಚಾರ ನಡೆಸಲು ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಬ್ಯಾನರ್ ಮತ್ತು ಬಂಟಿಂಗ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆದು ಅಳವಡಿಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರಜೋದನಕಾರಿ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಾಣಿಬಲಿ ಕುರಿತು ಹಳೆಯ ಛಾಯಾಚಿತ್ರಗಳನ್ನು ಅಪ್ ಲೋಡ್ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೆಲಸಗಳನ್ನು ಮಾಡಬಾರದು ಎಂದು ತಿಳಿಸಿದರು.
ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆ ಸಮಿತಿಯ ಸದಸ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .

ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending